ದಿನದ ಸುದ್ದಿ

ಚುನಾವಣೆ ಗುರುತಿನ ಚೀಟಿ ಇಲ್ಲದಿದ್ದವರು, ಈ ದಾಖಲೆ ಮೂಲಕ ಮತದಾನ ಮಾಡಬಹುದು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅ.28 ರಂದು ನಡೆಯುವ ಮತದಾನ ಕಾರ್ಯಕ್ಕೆ ಮತದಾರರು ಮತ ಚಲಾಯಿಸಲು ಚುನಾವಣಾ ಗುರುತಿನ ಚೀಟಿ ಅಲ್ಲದೇ ಈ ಕೆಳಕಂಡ ಪರ್ಯಾಯ ದಾಖಲೆಗಳನ್ನು ಉಪಯೋಗಿಸಬಹುದಾಗಿರುತ್ತದೆ.

ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್(Pಂಓ) ಕಾರ್ಡ್, ಭಾರತೀಯ ಪಾಸ್‍ಪೋರ್ಟ್, ರಾಜ್ಯ/ಕೇಂದ್ರ ಸರ್ಕಾರ, ಸಾರ್ವಜನಿಕ ವಲಯ, ಸ್ಥಳೀಯ ಸಂಸ್ಥೆಗಳು ಅಥವಾ ಇತರೆ ಖಾಸಗಿ ಕೈಗಾರಿಕಾ ಸಂಸ್ಥೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ. ಸಂಸದರು/ವಿಧಾಸಭಾ ಸದಸ್ಯರು/ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು.

ಶಿಕ್ಷಕರ/ಪದವೀಧರರ ಕ್ಷೇತ್ರ ವ್ಯಾಪ್ತಿಯಲ್ಲಿ ಶೈಕ್ಷಣಿಕ ಸಂಸ್ಥೆಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ವಿಶ್ವವಿದ್ಯಾನಿಯಲದಿಂದ ನೀಡಿರುವ ಪದವಿ/ಡಿಪ್ಲೊಮಾದ ಮೂಲ ಪ್ರಮಾಣಪತ್ರಗಳು ಹಾಗೂ ಸಕ್ಷಮ ಪ್ರಾಧಿಕಾರದಿಂದ ನೀಡಲಾಗಿರುವ ಅಂಗವಿಕಲ ದೃಢೀಕರಣ ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದೆಂದು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version