ದಿನದ ಸುದ್ದಿ
ಮತದಾನ ಮಾಡಲು ವೇತನಸಹಿತ ರಜೆ ಘೋಷಣೆ

ಸುದ್ದಿದಿನ,ದಾವಣಗೆರೆ : ಡಿ.22 ಮತ್ತು 27 ರಂದು ನಡೆಯುವ ಸಾರ್ವತ್ರಿಕ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ, ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಕೈಗಾರಿಕೆ ಸಂಸ್ಥೆಗಳು.
ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಪ್ರಜಾ ಪ್ರತಿನಿಧಿ ಕಾಯ್ದೆ 1954 ರ ಸೆಕ್ಷನ್ 135ಬಿ ರಡಿಯಲ್ಲಿ ವೇತನಸಹಿತ ರಜೆಯನ್ನು ಘೋಷಿಸಲಾಗಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತರು, ಬಳ್ಳಾರಿ ವಿಭಾಗ, ದಾವಣಗೆರೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ಧಾರವಾಡ : ಕಾನೂನು ಇಲಾಖೆ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಹಾಗೂ ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಹೊಸದಾಗಿ ನೇಮಕ ಮಾಡಿಕೊಳ್ಳಲು ಬಾರ್ ಅಸೊಸಿಯೇಷನ್ದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಸ್ಥಳೀಯ ಬಾರ್ ಅಸೋಸಿಯೇಷನ್ ಸದಸ್ಯರಾಗಿರಬೇಕು ಹಾಗೂ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 10 ವರ್ಷ ಮತ್ತು ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 7 ವರ್ಷ ವಕೀಲ ವೃತ್ತಿಯ ಅನುಭವ ಹೊಂದಿರಬೇಕು. ಮತ್ತು ಇವರ ನೇಮಕಾತಿಯು ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಸೇವಾ ಷರತ್ತುಗಳ ನಿಯಮಗಳು, 1977 ರಲ್ಲಿ ಹೇಳಲಾದ ಷರತ್ತುಗಳಿಗೆ ಒಳಪಟ್ಟಿರುತ್ತದೆ.
ಇದನ್ನೂ ಓದಿ | ಹಲವು ನಾಯಕರ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ..!
ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ದಾಖಲಾತಿಗಳೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮಾರ್ಚ್ 15, 2021 ರೊಳಗಾಗಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಬಿ.ಶ್ರೀರಾಮುಲು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಉದ್ಘಾಟನೆ ನೆರವೇರಿತು

ಸುದ್ದಿದಿನ,ಧಾರವಾಡ : ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಕವಿವಿ ಆವರಣದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯರ್ಥಿ ನಿಲಯ ಹಾಗೂ ಸಪ್ತಾಪೂರದಲ್ಲಿ ನಿರ್ಮಿಸಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಇಂದು ಮಧ್ಯಾಹ್ನ ಕವಿವಿ ಆವರಣದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹಾಗೂ ಬೃಹತ್, ಮಧ್ಯಮ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಕವಿವಿ ಕುಲಪತಿ ಡಾ.ಕೆ.ಬಿ.ಗುಡಸಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ಸೇರಿದಂತೆ ಇತರ ಅಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ | ಟಿಎಂಸಿ ಮಣ್ಣಿನ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಲಿದೆ: ಪಿಎಂ ಮೋದಿ ಅಭಿಮತ
ಕವಿವಿ ಆವರಣದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯವನ್ನು 412.83 ಲಕ್ಷ ರೂ.ಗಳ ವೆಚ್ಚದಲ್ಲಿ ಹಾಗೂ ಸಪ್ತಾಪೂರದಲ್ಲಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯರ್ಥಿ ನಿಲಯವನ್ನು 387 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ.
ಇದೆ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆಯಡಿ ಆಯ್ಕೆಯಾಗಿದ್ದ ವಿವಿಧ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ | ದೂರು ವಾಪಾಸ್ ಪಡೆದ ದಿನೇಶ್ ಕಲ್ಲಳ್ಳಿ

ಸುದ್ದಿದಿನ,ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇದೀಗ ದೂರು ವಾಪಸ್ ಪಡೆದುಕೊಂಡಿದ್ದಾರೆ.
ದಿನೇಶ್ ಕಲ್ಲಹಳ್ಳಿ ತಮ್ಮ ವಕೀಲರನ್ನು ದೂರು ವಾಪಸ್ ಪಡೆಯಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕಳುಹಿಸಿದ್ದು, ನಿಯಮಾನುಸಾರ ದೂರು ವಾಪಸ್ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಅವರೇ ಠಾಣೆಗೆ ಆಗಮಿಸಿ ದೂರು ಪಡೆಯಲು ನಿರ್ಧರಿಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು 5 ಕೋಟಿ ಡೀಲ್ ಬಗ್ಗೆ ಮಾತಾಡಿದ್ದರಿಂದ ನನ್ನ ಮನಸ್ಸಿಗೆ ನೋವಾಗಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ಬಗ್ಗೆ ಚರ್ಚೆಯಾಗ ಬೇಕಿತ್ತು ಆದರೆ, ಜನ ನನ್ನ ನೈತಿಕತೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಇದು ನನಗೆ ತಿರುಗುಬಾಣವಾಗಿದೆ ಎಂದು ದೂರುದಾರ ದಿನೇಶ್ ಹೇಳಿದ್ದು, ಈ ಹಿನ್ನೆಲೆಯಲ್ಲಿ ತಾನು ದೂರು ವಾಪಸ್ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ದಿನದ ಸುದ್ದಿ6 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
-
ನಿತ್ಯ ಭವಿಷ್ಯ7 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ5 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ಬಹಿರಂಗ3 days ago
ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!
-
ನಿತ್ಯ ಭವಿಷ್ಯ5 days ago
ಬುಧವಾರ ರಾಶಿ ಭವಿಷ್ಯ : ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆತಂಕ ದೂರವಾಗಲಿದೆ
-
ದಿನದ ಸುದ್ದಿ5 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
-
ನಿತ್ಯ ಭವಿಷ್ಯ6 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ