ದಿನದ ಸುದ್ದಿ

ಅನಧಿಕೃತ ರಾಜಕೀಯ ಪೋಸ್ಟರ್ಸ್ ತೆರವಿಗೆ ಚುನಾವಣಾ ಆಯೋಗ ಸೂಚನೆ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಚುನಾವಣೆಯ ಮೊದಲ ಹಂತದ ಪ್ರಕ್ರಿಯೆಗೆ ನಿನ್ನೆ ಅಧಿಸೂಚನೆ ಹೊರಬೀಳುವ ಮೂಲಕ ಅಧಿಕೃತ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಗಾಗಿ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 17 ರಾಜ್ಯಗಳು ಹಾಗೂ 4 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102ಲೋಕಸಭೆಯ ಸ್ಥಾನಗಳಿಗಾಗಿ ಮೊದಲ ಹಂತದಲ್ಲಿ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.

ತಮಿಳುನಾಡಿನ 39, ರಾಜಸ್ಥಾನದ 12, ಉತ್ತರ ಪ್ರದೇಶದ 8, ಮಧ್ಯಪ್ರದೇಶದ 6, ಉತ್ತರಾಖಂಡ್, ಅಸ್ಸಾಂ ಮತ್ತು ಮಹಾರಾಷ್ಟ್ರಗಳ ತಲಾ 5, ಬಿಹಾರ್‌ನ 4, ಪಶ್ಚಿಮ ಬಂಗಾಳದ 3, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ ತಲಾ 2 ಮತ್ತು ಚತ್ತೀಸ್‌ಗಢ್, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್ ಮತ್ತು ನಿಕೋಬಾರ್, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ್ ಮತ್ತು ಪುದುಚೇರಿಗಳ ತಲಾ 1 ಸ್ಥಾನಗಳಿಗಾಗಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಈ ತಿಂಗಳ 27 ಕೊನೆಯ ದಿನ. 28 ರಂದೇ ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಮಾರ್ಚ್ 30 ಕೊನೆಯ ದಿನವಾಗಿದೆ. ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ರಾಜ್ಯ ವಿಧಾನಸಭೆಗಳ ಚುನಾವಣೆಗಾಗಿ ಅಧಿಸೂಚನೆ ಹೊರಬಿದ್ದಿದೆ. ಈ ರಾಜ್ಯಗಳಲ್ಲಿ ಏಪ್ರಿಲ್ 19 ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಜೂನ್ 2ರಂದು ನಿಗದಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version