ದಿನದ ಸುದ್ದಿ
ಸರ್ಕಾರಿ ನೌಕರರ ಜಿಲ್ಲಾ ಶಾಖೆ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ
ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.
ನಗರದ ನಿಜಲಿಂಗಪ್ಪ ಬಡಾವಣೆಯ ಸರ್ಕಾರಿ ನೌಕರರ ಸಂಘದ ಮೇರಿದೇವಾಸಿಯಾ ಕನ್ವೆನ್ಷನ್ ಹಾಲ್‍ನಲ್ಲಿ ಅ.28 ರಿಂದ ನವಂಬರ್ 7 ರಂದು ಸಂಜೆ 5 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಕೊನೆಯದಿನ. ನ.8 ರಂದು ಬೆಳಿಗ್ಗೆ 11 ಗಂಟೆಯವರೆಗೆ ನಾಮಪತ್ರಗಳ ಪರಿಶೀಲನೆ, ನ.11 ರಂದು ಸಂಜೆ 4.30 ರವರೆಗೆ ಉಮೇದುವಾರಿಯನ್ನು ವಾಪಸ್ಸು ಪಡೆಯಲು ಕೊನೆಯ ದಿನ.
ನ.16 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರ ವರೆಗೆ ನಗರದ ಸರ್ಕಾರಿ ಬಾಲಕರ ಪದವಿ-ಪೂರ್ವ ಕಾಲೇಜು(ಪ್ರೌಢಶಾಲೆ) ಹೈಸ್ಕೂಲ್ ಮೈದಾನದಲ್ಲಿ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾದ ನಂತರ ಮತಗಳ ಎಣಿಕೆ ಮತ್ತು ಫಲಿತಾಂಶ ಪ್ರಕಟಿಸಲಾಗುವುದೆಂದು ಚುನಾವಣಾಧಿಕಾರಿ ಜಿ.ಹಾಲೇಶಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243