ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243