Connect with us

ದಿನದ ಸುದ್ದಿ

ದಾವಣಗೆರೆ ಲೋಕಸಭಾ ಕ್ಷೇತ್ರ | ಡಾ. ಪ್ರಭಾ ಮಲ್ಲಿಕಾರ್ಜುನ್ ಗೆಲುವಿನ ಮತಗಳ ಅಂತರವೆಷ್ಟು..? ಇತರೆ ಅಭ್ಯರ್ಥಿಗಳು ಪಡೆದ ಮತಗಳೆಷ್ಟು..? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

Published

on

ಸುದ್ದಿದಿನ,ದಾವಣಗೆರೆ : ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆದಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ; ಪ್ರಭಾ ಮಲ್ಲಿಕಾರ್ಜುನ್ ಅವರು 26094 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ.

ಲೋಕಸಭಾ ಚುನಾವಣೆ ದೇಶದಲ್ಲಿ 7 ಹಂತಗಳಲ್ಲಿ ನಡೆದಿದ್ದು ರಾಜ್ಯದಲ್ಲಿ ಎರಡನೇ ಹಾಗೂ ಮೂರನೇ ಹಂತದಲ್ಲಿ ಚುನಾವಣೆ ನಡೆದಿದ್ದು ದಾವಣಗೆರೆ ಲೋಕಸಭಾ ಚುನಾವಣೆಗೆ ಮೇ 7 ರಂದು ಮತದಾನ ನಡೆದಿತ್ತು. ಜೂನ್ 4 ರಂದು ದಾವಣಗೆರೆ ವಿಶ್ವವಿದ್ಯಾನಿಯದಲ್ಲಿ ಮತ ಎಣಿಕೆ ನಡೆಯಿತು.
ಕಾಂಗ್ರೆಸ್ ಪಕ್ಷದ ಡಾ;ಪ್ರಭಾ ಮಲ್ಲಿಕಾರ್ಜುನ್ ಅವರು ಅಂಚೆ ಮತಗಳು ಸೇರಿದಂತೆ 633059 ಮತಗಳನ್ನು ಪಡೆದು ಇವರ ಸಮೀಪ ಸ್ಪರ್ಧಿ ಬಿ.ಜೆ.ಪಿ.ಯ ಗಾಯತ್ರಿ ಸಿದ್ದೇಶ್ವರ್ ಅವರು 606965 ಮತಗಳನ್ನು ಪಡೆದ್ದು 26094 ಮತಗಳ ಅಂತರದಿಂದ ಡಾ; ಪ್ರಭಾ ಮಲ್ಲಿಕಾರ್ಜುನ್ ಜಯಶಾಲಿಯಾಗಿದ್ದಾರೆ.

ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳಿಂದ 1709244 ಒಟ್ಟು ಮತದಾರರಲ್ಲಿ 1315746 ಮತದಾರರು ಮೇ 7 ರಂದು ಮತದಾನ ಮಾಡಿದ್ದರು. ಮತ ಎಣಿಕೆಯನ್ನು ಪ್ರತಿ ಕ್ಷೇತ್ರದಲ್ಲಿ 14 ಟೇಬಲ್‍ಗಳಲ್ಲಿ ಎಣಿಕೆ ನಡೆಸಲಾಗಿರುತ್ತದೆ.
ಪಕ್ಷವಾರು, ಕಣದಲ್ಲಿದ್ದ ಅಭ್ಯರ್ಥಿಗಳು ಪಡೆದ ಮತಗಳ ವಿವರ.


  1. ಬಿ.ಜೆ.ಪಿ. ಗಾಯಿತ್ರಿ ಸಿದ್ದೇಶ್ವರ್ 606965
  2. ಕಾಂಗ್ರೆಸ್ ಪಕ್ಷದ ಡಾ; ಪ್ರಭಾ ಮಲ್ಲಿಕಾರ್ಜುನ್ 633059
  3. ಡಿ.ಹನುಮಂತಪ, ಬಹುಜನ ಸಮಾಜ ಪಾರ್ಟಿ 4475
  4. ಈಶ್ವರ ಶೇಂಗಾ, ಉತ್ತಮ ಪ್ರಜಾಕೀಯ ಪಾರ್ಟಿ 1430
  5. ಅಣಬೇರು ತಿಪ್ಪೇಸ್ವಾಮಿ, ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) 849
  6. ಎಂ.ಪಿ.ಖಲಂದರ್, ಕಂಟ್ರಿ ಸಿಟಿಜನ್ ಪಾರ್ಟಿ 539
  7. ದೊಡ್ಡೇಶಿ ಹೆಚ್.ಎಸ್, ಜನಹಿತ ಪಕ್ಷ 440
  8. ರುದ್ರೇಶ್ ಕೆ.ಹೆಚ್, ಸಮಾಜ ವಿಕಾಸ ಕ್ರಾಂತಿ ಪಾರ್ಟಿ 348
  9. ವಿರೇಶ್.ಎಸ್ (ಲಯನ್ ವಿರೇಶ್), ರಾಣಿ ಚೆನ್ನಮ್ಮ ಪಾರ್ಟಿ 459
  10. ಕೆ.ಎಸ್.ವೀರಭದ್ರಪ್ಪ, ಕರ್ನಾಟಕ ರಾಷ್ಟ್ರ ಸಮಿತಿ 475
  11. ಎಂ.ಜಿ.ಶ್ರೀಕಾಂತ್, ನವಭಾರತ ಸೇನಾ 560
  12. ಎಂ.ಸಿ.ಶ್ರೀನಿವಾಸ್, ಭಾರತೀಯ ಪ್ರಜಾಗಳ ಕಲ್ಯಾಣ ಪಕ್ಷ 974
  13. ಪಕ್ಷೇತರರಾದ ಅಬ್ದುಲ್ ನಜೀರ್ ಅಹಮೆದ್ 652
  14. ಎ.ಕೆ.ಗಣೇಶ್ 1055
  15. ಜಿ.ಎಂ.ಗಾಯಿತ್ರಿ ಸಿದ್ದೇಶಿ 2462
  16. ಟಿ.ಚಂದ್ರು 3049
  17. ಟಿ.ಜಬೀನಾ ಆಪಾ 5122
  18. ತಸ್ಲೀಮ್ ಬಾನು 4140
  19. ಪರವೀಜ್ ಹೆಚ್. 1868
  20. ಪೆದ್ದಪ್ಪ.ಎಸ್ 513
  21. ಬರಕತ್ ಅಲಿ 409
  22. ಜಿ.ಎಂ.ಬರ್ಕತ್ ಅಲಿ ಬಾಷ 472
  23. ಮಹಬೂಬ್ ಬಾಷ 306
  24. ಮೊಹ್ಮದ್ ಹಯಾತ್.ಎಂ, 723
  25. ಮಂಜು ಮಾರಿಕೊಪ್ಪ 379
  26. ರವಿನಾಯ್ಕ.ಬಿ. 319
  27. ರಷೀದ್ ಖಾನ್ 599
  28. ಜಿ.ಬಿ.ವಿನಯ್ ಕುಮಾರ್ 42907
  29. ಸಲೀಂ.ಎಸ್. 800
  30. ಸೈಯದ್ ಜಬೀವುಲ್ಲಾ.ಕೆ 843
  31. ನೊಟಾ 3173 ಮತಗಳು ಸೇರಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ

Published

on

ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Published

on

ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್‌ಡಿಎ ಸಂಸದರ ಸನ್ಮಾನದಲ್ಲಿ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ನೂತನ ಎನ್‌ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ ಎಂದು ಹೇಳಿದರು. ಜೆಡಿಎಸ್, ಬಿಜೆಪಿಯದ್ದು, ಸಹಜ ಮೈತ್ರಿಯಾಗಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಪಾಲಿಕೆ ಚುನಾವಣೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು. ಬಿಜೆಪಿ, ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending