ದಿನದ ಸುದ್ದಿ
ಕರ್ನಾಟಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ; ಚುನಾವಣಾ ಕಣದಲ್ಲಿ 6 ಅಭ್ಯರ್ಥಿಗಳು
ಸುದ್ದಿದಿನ ಡೆಸ್ಕ್ : ಕರ್ನಾಟಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಜೂನ್ 10 ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ.
ಒಟ್ಟು 6ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಬಿಜೆಪಿಯಿಂದ ಕೇಂದ್ರ ಸಚಿವೆ, ಹಾಲಿ ಸದಸ್ಯೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್, ಲೆಹರ್‌ಸಿಂಗ್ ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ಇಂದು ನಾಮಪತ್ರ ಸಲ್ಲಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರೆ ಮುಖಂಡರು ಹಾಜರಿದ್ದರು.
ಜೆಡಿಎಸ್ ಪಕ್ಷದಿಂದ ಕುಪೇಂದ್ರ ರೆಡ್ಡಿ ಉಮೇದುವಾರಿಕೆ ಸಲ್ಲಿಸಿದರು. ಕಾಂಗ್ರೆಸ್‌ನಿಂದ ಹಾಲಿ ಸದಸ್ಯ ಜಯರಾಮ್ ರಮೇಶ್ ಹಾಗೂ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.
ಜೂನ್ 1ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ೩ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನಾಂಕವಾಗಿದೆ. ಜೂನ್ 10ರಂದು ಬೆಳಗ್ಗೆ 9 ರಿಂದ 4 ಗಂಟೆವರೆಗೆ ಮತದಾನ ನಡೆಯಲಿದ್ದು, 5 ಗಂಟೆ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243