Connect with us

ದಿನದ ಸುದ್ದಿ

ಲೋಕಸಭಾ ಚುನಾವಣೆ ದಾವಣಗೆರೆ : ಮತದಾನ ಸಿಬ್ಬಂದಿಗಳಿಗೆ ಎರಡನೇ ಹಂತದ ತರಬೇತಿಯಲ್ಲಿ ನಡೆದಿದ್ದೇನು.!?

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು ಅಣಕು ಮತದಾನವನ್ನು ಸಮಯಕ್ಕೆ ಸರಿಯಾಗಿ ಆರಂಭಿಸಿ ನಂತರ ಮಾಕ್ ಪೋಲ್ ಕ್ಲಿಯರ್ ಮಾಡಿ ಕ್ಲೊಸ್ ಬಟನ್ ಒತ್ತುವ ಮೂಲಕ ವಾಸ್ತವ ಮತದಾನ ಆರಂಭಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದ ಮತದಾನ ಸಿಬ್ಬಂದಿಗಳಿಗೆ ಏರ್ಪಡಿಸಲಾದ ಎರಡನೇ ಹಂತದ ತರಬೇತಿಯಲ್ಲಿ ಭಾಗವಹಿಸಿ ಮಾತನಾಡಿದರು. ಅಣಕು ಮತದಾನ ಕ್ರಿಯರ್ ಮಾಡದಿದ್ದಲ್ಲಿ ಎಣಿಕೆ ಮಾಡುವಾಗ ಸಮಸ್ಯೆಯಾಗಲಿದೆ. ಆದ್ದರಿಂದ ಎಲ್ಲರೂ ಸಿಆರ್‍ಸಿ ಮಾಡಿದ ಬಗ್ಗೆ ಖಾತರಿ ನಂತರ ಮತದಾನ ಆರಂಭಿಸುವುದನ್ನು ಮರೆಯಬಾರದು. ಅಣಕು ನಂತರ ಸಿ-ಕ್ಲೋಸ್, ಆರ್-ರಿಸಲ್ಟ್, ಸಿ-ಕ್ಲಿಯರ್ ಇದನ್ನು ಎಲ್ಲಾ ಮತದಾನ ಸಿಬ್ಬಂದಿಗಳು ನೆನಪಿನಲ್ಲಿಟ್ಟುಕೊಳ್ಳಬೇಕು. ಮತದಾನ ದಿನ ಯಾವುದೇ ಹಂತದ ಪ್ರಕ್ರಿಯೆಗಳನ್ನು ಮರೆಯದೇ ಮತಗಟ್ಟೆ ಮಾರ್ಗದರ್ಶಿ ನಿಯಮಗಳನ್ನು ತಿಳಿದುಕೊಂಡು ಕರ್ತವ್ಯ ನಿರ್ವಹಿಸಬೇಕು, ಇಲ್ಲವಾದಲ್ಲಿ ಅಂತಹ ಅಧಿಕಾರಿಗಳು, ಸಿಬ್ಬಂದಿಗಳು ಶಿಸ್ತುಕ್ರಮದ ಜೊತೆಗೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದರು.

ಚುನಾವಣಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಾರ್ಗದರ್ಶನಕ್ಕಾಗಿ ಸೆಕ್ಟರ್ ಅಧಿಕಾರಿಗಳು ಇರುತ್ತಾರೆ. ಅದೇ ರೀತಿ ಪ್ರತಿ ಮತಗಟ್ಟೆಯಲ್ಲಿ ಮತದಾನವಾದ ಬಗ್ಗೆ ಮಾಹಿತಿ ನೀಡಲು ತಂಡವನ್ನು ನೇಮಕ ಮಾಡಲಿದ್ದು ಕರಾರುವಕ್ಕಾಗಿ ಮತದಾನದ ಅಂಕಿ ಅಂಶಗಳನ್ನು ನೀಡಬೇಕಾಗುತ್ತದೆ ಎಂದರು.

ಹರಿಹರ, ಹರಪನಹಳ್ಳಿಗೆ ಅಪರ ಜಿಲ್ಲಾಧಿಕಾರಿ ಭೇಟಿ

ಹರಿಹರದ ಸೆಂಟ್ ಮೇರಿಸ್ ಕಾನ್ವೆಂಟ್ ಸ್ಕೂಲ್‍ನಲ್ಲಿ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ನಡೆದ ಎರಡನೇ ಹಂತದ ತರಬೇತಿಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿಯವರು ಭೇಟಿ ನೀಡಿ ಮತದಾನ ದಿನ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ, ಮತದಾನ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದರು. ಮತ್ತು ಹರಪನಹಳ್ಳಿ ಕ್ಷೇತ್ರದಲ್ಲಿ ನಡೆದ ಸೆಕ್ಟರ್ ಅಧಿಕಾರಿಗಳಿಗೆ ನೀಡಲಾದ ತರಬೇತಿಯಲ್ಲಿ ಭಾಗಿಯಾಗಿ ಸೆಕ್ಟರ್ ಅಧಿಕಾರಿಗಳ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.

ಮತಗಟ್ಟೆ ತಂಡ ಸಿದ್ದ

ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ 1693 ಮತಗಟ್ಟೆಗಳು ಸೇರಿದಂತೆ ವಿಜಯನಗರ ಜಿಲ್ಲೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ 253 ಮತಗಟ್ಟೆಗಳು ಸೇರಿ 1946 ಮತಗಟ್ಟೆಗಳು ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರಲಿವೆ. ಎರಡನೇ ತರಬೇತಿಯಲ್ಲಿ ಕ್ಷೇತ್ರವಾರು ಪ್ರತಿ ಮತಗಟ್ಟೆಗೆ 4 ಜನರ ತಂಡ ಸಿದ್ದವಾಗಿದ್ದು ಮೇ 6 ರಂದು ಮಸ್ಟರಿಂಗ್ ಕೇಂದ್ರದಲ್ಲಿ ಯಾವ ಮತಗಟ್ಟೆಗೆ ಈ ತಂಡ ನಿಯೋಜಿತವಾಗುತ್ತದೆ ಎಂದು ಅಂದು ತಿಳಿಯಲಿದೆ.

ವಿಧಾನಸಭಾ ಕ್ಷೇತ್ರವಾರು ನೇಮಕವಾಗಿರುವ ಅಧಿಕಾರಿ, ಸಿಬ್ಬಂದಿಗಳು; ಜಗಳೂರು ಕ್ಷೇತ್ರಕ್ಕೆ ಮತಗಟ್ಟೆ ಅಧ್ಯಕ್ಷಾಧಿಕಾರಿ, ಸಹಾಯಕ ಅಧ್ಯಕ್ಷಾಧಿಕಾರಿ, ಮತದಾನ ಸಿಬ್ಬಂದಿಗಳು ಸೇರಿ 1212, ಹರಿಹರ 1048, ದಾವಣಗೆರೆ ಉತ್ತರ 1128, ದಕ್ಷಿಣ 996, ಮಾಯಕೊಂಡ 1104, ಚನ್ನಗಿರಿ 1172 ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರಕ್ಕೆ 1124 ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.

ತರಬೇತಿ ನಡೆದ ಸ್ಥಳಗಳು

ಜಗಳೂರು ಸರ್ಕಾರಿ ಪದವಿ ಪೂರ್ವ ಕಾಲೇಜು, ಹರಿಹರ ಸೆಂಟ್ ಮೇರಿಸ್ ಕಾನ್ವೆಂಟ್ ಸ್ಕೂಲ್, ಹರಪನಹಳ್ಳಿ ರಸ್ತೆ, ಹರಿಹರ, ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಿದ್ದಗಂಗಾ ವಿದ್ಯಾಸಂಸ್ಥೆ, ಸಿದ್ದರಾಮೇಶ್ವರ ಬಡಾವಣೆ, ಮಾಯಕೊಂಡ ತರಳಬಾಳು ವಿದ್ಯಾಸಂಸ್ಥೆ, ಅನುಭವ ಮಂಟಪ, ಹದಡಿ ರಸ್ತೆ, ಚನ್ನಗಿರಿ ಶ್ರೀಶ್ರೀಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಹೊನ್ನಾಳಿಯಲ್ಲಿ ಶ್ರೀಮತಿ ಗಂಗಮ್ಮ ಶ್ರೀ ವೀರಭದ್ರಶಾಸ್ತ್ರಿ ಕೈಗಾರಿಕಾ ತರಬೇತಿ ಕೇಂದ್ರ, ಹಿರೇಕಲ್ಮಠ ಇಲ್ಲಿ ತರಬೇತಿ ನಡೆಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending