ದಿನದ ಸುದ್ದಿ

ದಾವಣಗೆರೆ | ಮೇ.20 ರವರೆಗೆ ಮದ್ಯ ನಿಷೇಧ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಕಾಡಜ್ಜಿ ಮತ್ತು ಕುಕ್ಕುವಾಡ ಹಾಗೂ ಚನ್ನಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮ ಪಂಚಾಯತಿಯ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನವನ್ನು ತುಂಬಲು ಮೇ 20ರಂದು ನಡೆಯುವ ಚುನಾವಣೆ ಹಿನ್ನಲೆಯಲ್ಲಿ ಮೇ.18 ರ ಸಂಜೆ 5.00 ಗಂಟೆಯಿಂದ ಮೇ.20 ರ ಸಂಜೆ 5.00 ಗಂಟೆಯವರೆಗೆ ಚುನಾವಣೆ ವ್ಯಾಪ್ತಿಯಲ್ಲಿ ಶುಷ್ಕ ದಿವಸವೆಂದು ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಎಲ್ಲಾ ಮದ್ಯ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಅದರ ಕೀಯನ್ನು ಸಂಬಂಧಿಸಿದ ತಾಲ್ಲೂಕಿನ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‍ರಿಗೆ ಒಪ್ಪಿಸತಕ್ಕದ್ದು, ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಯಾರಾದರೂ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ ಬೀದಿಯಲ್ಲಿ ರಂಪಾಟ ಮಾಡುತ್ತಿರುವುದು ಕಂಡು ಬಂದರೆ ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣೆ ಮುಕ್ತಾಯವಾಗುವವರೆಗೆ ಅಂತಹವರನ್ನು ಕಸ್ಟಡಿಯಲ್ಲಿ ಇಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version