ರಾಜಕೀಯ
ಕಲಬುರ್ಗಿ | ಸ್ಥಳೀಯ ಸಂಸ್ಥೆಗಳ ಚುನಾವಣೆ : ಕಾಂಗ್ರೆಸ್ ಮೇಲುಗೈ
ಸುದ್ದಿದಿನ, ಕಲಬುರ್ಗಿ : ಜಿಲ್ಲೆಯ 6 ಪುರಸಭೆಗಳು ಹಾಗೂ 1 ನಗರಸಭೆ ಯ ಸಂಪೂರ್ಣ ಫಲಿತಾಂಶದ ವಿವರ ಇಂತಿದೆ.
ಸೇಡಂ- ಪುರಸಭೆ(ಬಿಜೆಪಿ ತೆಕ್ಕೆಗೆ)
ಒಟ್ಟು 23
ಬಿಜೆಪಿ 13
ಕಾಂಗ್ರೆಸ್ 10
ಚಿಂಚೋಳಿ- ಪುರಸಭೆ (ಕಾಂಗ್ರೆಸ್ ತೆಕ್ಕೆಗೆ)
ಒಟ್ಟು 23
ಕಾಂಗ್ರೆಸ್ 12
ಬಿಜೆಪಿ 5
ಜೆಡಿಎಸ್ 1
ಪಕ್ಷೇತರ 5
ಚಿತ್ತಾಪುರ- ಪುರಸಭೆ (ಕಾಂಗ್ರೆಸ್ ತೆಕ್ಕೆಗೆ)
ಒಟ್ಟು 23
ಬಿಜೆಪಿ 5
ಕಾಂಗ್ರೆಸ್ 18
ಅಫಜಲಪುರ- ಪುರಸಭೆ (ಕಾಂಗ್ರೆಸ್ ತೆಕ್ಕೆಗೆ)
ಒಟ್ಟು 23
ಬಿಜೆಪಿ 5
ಕಾಂಗ್ರೆಸ್ 16
ಪಕ್ಷೇತರ 1
ಒಂದು ವಾಡ್೯ನ ಚುನಾವಣೆ ಮುಂದುಡಲಾಗಿದೆ
ಆಳಂದ- ಪುರಸಭೆ (ಅತಂತ್ರ ಸ್ಥಿತಿ)
ಒಟ್ಟು 27
ಕಾಂಗ್ರೆಸ್ 13
ಬಿಜೆಪಿ 13
ಜೆಡಿಎಸ್ 1
(ಶಾಸಕ ಹಾಗೂ ಸಂಸದರ ಮತ ಪಡೆದು ಬಿಜೆಪಿ ಅಧಿಕಾರಕ್ಕೆ ಬಹುತೇಕ ಖಚಿತ)
ಜೇವರ್ಗಿ- ಪುರಸಭೆ (ಬಿಜೆಪಿ ತೆಕ್ಕೆಗೆ)
ಒಟ್ಟು 23
ಬಿಜೆಪಿ 17
ಕಾಂಗ್ರೆಸ್ 3
ಜೆಡಿಎಸ್ 3
ಶಹಬಾದ್- ನಗರಸಭೆ (ಕಾಂಗ್ರೆಸ್ ತೆಕ್ಕೆಗೆ)
ಒಟ್ಟು 27
ಕಾಂಗ್ರೆಸ್ 18
ಬಿಜೆಪಿ 5
ಜೆಡಿಎಸ್ 1
ಪಕ್ಷೇತರ 3
ಒಟ್ಟಾರೆಯಾಗಿ ಕಲಬುರಗಿ ಜಿಲ್ಲೆಯ ಆರು ಪುರಸಭೆಗಳ ಪೈಕಿ 2 ಬಿಜೆಪಿ, 3 ಕಾಂಗ್ರೆಸ್ ಹಾಗೂ ಒಂದರಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು ಮತ್ತು ಶಹಬಾದ್ ನಗರಸಭೆ ‘ಕಾಂಗ್ರೆಸ್ ಪಾಲಾಗಿದೆ’.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ
ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100 ಪ್ರತಿಶತ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದಾರೆ.
ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, ಈ ದೇಶಗಳು ಯುಎಸ್ ಡಾಲರ್ ಅನ್ನು ಬದಲಿಸುವ ಕೆಲಸ ಮಾಡುವುದಿಲ್ಲ ಎಂಬ ಬದ್ಧತೆಯ ಅಗತ್ಯವಿದೆ. ಅಂತರಾಷ್ಟ್ರೀಯ ವ್ಯಾಪಾರದಲ್ಲಿ ಬ್ರಿಕ್ಸ್ ಅಮೆರಿಕಾ ಡಾಲರ್ ಅನ್ನು ಬದಲಿಸುವ ಯಾವುದೇ ಅವಕಾಶವಿಲ್ಲ, ಮತ್ತು ಇದನ್ನು ಪ್ರಯತ್ನಿಸುವ ಯಾವುದೇ ದೇಶ ಅಮೆರಿಕದೊಂದಿಗಿನ ಸಂಬಂಧಗಳಿಗೆ ವಿದಾಯ ಹೇಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ವಿಶ್ವ ಏಡ್ಸ್ ದಿನ; ಎಚ್‌ಐವಿ ಚಿಕಿತ್ಸೆ – ನಿರ್ಮೂಲನೆ ಕುರಿತು ಜಾಗೃತಿ ಅಭಿಯಾನ
ಸುದ್ದಿದಿನಡೆಸ್ಕ್:ಅಕ್ವೈರ್ಡ್ ಇಮ್ಯುನೊ ಡೆಫಿಷಿಯನ್ಸಿ ಸಿಂಡ್ರೋಮ್-ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ.
ಎಚ್‌ಐವಿ ವಿರುದ್ಧದ ಹೋರಾಟದಲ್ಲಿ ಜನರು ಒಂದಾಗಲು ಮತ್ತು ಎಚ್‌ಐವಿ ಯೊಂದಿಗೆ ಬದುಕು ಸಾಗಿಸುತ್ತಿರುವವರಿಗೆ ಬೆಂಬಲ ಸೂಚಿಸಲು ಈ ದಿನವು ಅವಕಾಶವನ್ನು ಒದಗಿಸುತ್ತದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆಪಿ ನಡ್ಡಾ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿಂದು ವಿಶ್ವ ಏಡ್ಸ್ ದಿನ 2024 ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ವರ್ಷದ ವಿಶ್ವ ಏಡ್ಸ್ ದಿನ, ಏಡ್ಸ್ ಕುರಿತು ಜಾಗೃತಿ ಮೂಡಿಸುವುದು, ಚಿಕಿತ್ಸಾ ವಿಧಾನಗಳನ್ನು ಉತ್ತೇಜಿಸುವುದು ಮತ್ತು ಎಚ್‌ಐವಿ-ಏಡ್ಸ್ ನಿಂದ ಪೀಡಿತರ ವಿರುದ್ಧದ ತಾರತಮ್ಯವನ್ನು ತೊಡೆದುಹಾಕುವುದರ ಮೇಲೆ ಕೇಂದ್ರೀಕರಿಸುತ್ತದೆ. ’ಸರಿಯಾದ ಮಾರ್ಗವನ್ನು ತೆಗೆದುಕೊಳ್ಳಿ’ ಎಂಬುದು 2024 ರ ಘೋಷವಾಕ್ಯವಾಗಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಎನ್‌ಎಸಿಓ, 1992 ರಿಂದ ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸುತ್ತಿದೆ. ಈ ಆಚರಣೆಗಳು 2030 ರ ವೇಳೆಗೆ ಏಡ್ಸ್ಅನ್ನು ನಿರ್ಮೂಲನೆಗೊಳಿಸುವ ಜಾಗತಿಕ ಗುರಿಯನ್ನು ಅನುಸರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ
-
ದಿನದ ಸುದ್ದಿ6 days ago
ಇಂದು ವಿಶ್ವ ಏಡ್ಸ್ ದಿನ; ಎಚ್‌ಐವಿ ಚಿಕಿತ್ಸೆ – ನಿರ್ಮೂಲನೆ ಕುರಿತು ಜಾಗೃತಿ ಅಭಿಯಾನ
-
ಕ್ರೀಡೆ4 days ago
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
-
ದಿನದ ಸುದ್ದಿ2 days ago
ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
-
ಕ್ರೀಡೆ4 days ago
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ
-
ದಿನದ ಸುದ್ದಿ5 days ago
ಫೆಂಗಲ್ ಚಂಡಮಾರುತ | ರಾಜ್ಯದ ವಿವಿಧೆಡೆ ಮಳೆ ; ಕೆಲವು ಜಿಲ್ಲೆಯಲ್ಲಿ ರಜೆ ಘೋಷಣೆ
-
ಕ್ರೀಡೆ5 days ago
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ