ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243