Connect with us

ದಿನದ ಸುದ್ದಿ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಯುವ ಮತದಾರರನ್ನು ಹೆಚ್ಚು ನೊಂದಾಯಿಸಿ : ಗುಂಜನ್ ಕೃಷ್ಣ ಸೂಚನೆ

Published

on

ಸುದ್ದಿದಿನ,ದಾವಣಗೆರೆ : ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಯುವ ಮತದಾರರನ್ನು ಹೆಚ್ಚು ನೊಂದಾಯಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಗುಂಜನ್ ಕೃಷ್ಣ ತಿಳಿಸಿದರು.

ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ತಿಳಿಸಿದರು.

ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಾಗಿದ್ದು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 9 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಮತ್ತು ಅಂತಿಮ ಮತದಾರರ ಪಟ್ಟಿಯನ್ನು 2024 ರ ಜನವರಿ 5 ರಂದು ಪ್ರಕಟಿಸಲಾಗುತ್ತದೆ.

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024 ಕ್ಕೆ ಜಿಲ್ಲೆಯಲ್ಲಿ 947205 ಗಂಡು, 951359 ಹೆಣ್ಣು ಸೇರಿ 1898000 ಜನಸಂಖ್ಯೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಜನಸಂಖ್ಯೆಗನುಗುಣವಾಗಿ ಶೇ 76.60 ರಷ್ಟು ಮತದಾರರಿದ್ದಾರೆ. ಕರಡು ಮತದಾರರ ಪಟ್ಟಿಯನ್ವಯ 726931 ಪುರುಷ, 726887 ಮಹಿಳೆ ಸೇರಿ 1453818 ಮತದಾರರಿದ್ದಾರೆ.

ಯುವ ಮತದಾರರು

ಕರಡು ಪಟ್ಟಿಯನ್ವಯ ಯುವ ಮತದಾರರ ವಿವರದನ್ವಯ 18-19 ವರ್ಷದ 10493 ಪುರುಷ, 8815 ಮಹಿಳೆ, ಇತರೆ 2 ಸೇರಿ 19310 ಯುವ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ವಿವರ ನೀಡಿದರು. ಈ ವೇಳೆ ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಮತದಾರರ ಪಟ್ಟಿಯಲ್ಲಿ ನೊಂದಾಯಿಸಲು ವೀಕ್ಷಕರಾದ ಗುಂಜನ್ ಕೃಷ್ಣ ಅವರು ತಿಳಿಸಿದರು.

ಮತಗಟ್ಟೆ ಮಟ್ಟದ ಏಜೆಂಟ್ ನೇಮಿಸಿ

ಎಲ್ಲಾ ಪಕ್ಷದವರು ಮತಗಟ್ಟೆ ಮಟ್ಟದ ಏಜೆಂಟ್‍ಗಳನ್ನು ನೇಮಕ ಮಾಡಿ ಪಟ್ಟಿ ನೀಡಬೇಕು ಎಂದು ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಪಕ್ಷಗಳ ಮುಖಂಡರಿಗೆ ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೇಂದ್ರ ಬಜೆಟ್ : ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

Published

on

ಸುದ್ದಿದಿನಡೆಸ್ಕ್:ಕೇಂದ್ರದ ಮುಂಗಡ ಪತ್ರ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತೆಲುಗು ದೇಶಂ ನಾಯಕ ಕೇಂದ್ರ ಸಚಿವ ಕಿಂಜರಪು ರಾಮಮೋಹನ ನಾಯ್ಡು ಹೇಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಬಜೆಟ್ ಎಲ್ಲರ ಕನಸಾಗಿದೆ ಎಂದು ಹೇಳಿದ್ದಾರೆ. ಈಶಾನ್ಯ ರಾಜ್ಯಗಳ ಬೆಳವಣಿಗೆಗೆ ಆಯ-ವ್ಯಯ ಪೂರಕವಾಗಿದೆ ಎಂದು ಹೇಳಿದರು.

ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಉದ್ಯೋಗ ಹೆಚ್ಚಿಸುವ ಕಾರ್ಯಕ್ರಮವನ್ನು ಹಣಕಾಸು ಸಚಿವರು ಪ್ರಕಟಿಸಿರುವುದಾಗಿ ಹೇಳಿದ್ದಾರೆ. ಜೆಡಿಯು ಮುಖಂಡ ರಾಜೀವ್ ರಂಜನ್ ಸಿಂಗ್, ಆಯ-ವ್ಯಯ ಬಿಹಾರ ಜನತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ನೀಡಿದೆ ಎಂದರು.

ಕಾಂಗ್ರೆಸ್ ಮುಖಂಡ ಶಶಿತರೂರ್ ಪ್ರತಿಕ್ರಿಯೆಸಿ, ಉದ್ಯೋಗ ಖಾತರಿ ಯೋಜನೆಯ ರಾಜ್ಯಗಳ ತಾರತಮ್ಯವನ್ನು ನಿಭಾಯಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಿವಸೇನಾ ನಾಯಕ ಪ್ರಿಯಾಂಕ ಚತುರ್ವೇದಿ, ಮಹಾರಾಷ್ಟ್ರ ರಾಜ್ಯಕ್ಕೆ ನಿರ್ಧಿಷ್ಟವಾದ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಿಎಂಕೆ ನಾಯಕ ಟಿ.ಆರ್.ಬಾಲು, ಟಿಎಂಸಿ ನಾಯಕಿ ಕಲ್ಯಾಣ ಬ್ಯಾನರ್ಜಿ ಅವರು, ಆಯ-ವ್ಯಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಸಂಸದರಾದ ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಗದೀಶ್ ಶೆಟ್ಟರ್, ಜನಪರ ಸಾಮಾನ್ಯವರ್ಗದವರ ಆಯ-ವ್ಯಯವಾಗಿದೆ ಎಂದರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರ್‌ಸ್ವಾಮಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರುಗಳು ಆಯ-ವ್ಯಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಅನಿಶ್ ಶಹಾ ಪ್ರತಿಕ್ರಿಯಿಸಿ, ದೇಶದ ಬೆಳವಣಿಗೆಗೆ ಪೂರಕ ಆಯ-ವ್ಯಯ ರೈತರು, ಯುವಕರು, ಮಹಿಳೆಯರಿಗೆ ಸಹಕಾರಿ ಎಂದು ಹೇಳಿದ್ದಾರೆ.

ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರಗಳಿಗೆ ಅನುದಾನವನ್ನು ಗಣನೀಯವಾಗಿ ಖಡಿತ ಮಾಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಹಲವು ಯೋಜನೆಗಳ ಅನುಷ್ಠಾನಕ್ಕೆ ನೆರವು ಕೋರಿದ್ದೆವು. ಮಾಹಿತಿ ತಂತ್ರಜ್ಞಾನಕ್ಕೆ ನೀಡಿದ್ದ ಅನುದಾನವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರ, ಪರಿಶಿಷ್ಟ ಸಮುದಾಯ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಅನುದಾನವನ್ನು ಖಡಿತ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೂಲ ಸೌಕರ್ಯ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ಆಯ-ವ್ಯಯ ಪೂರಕವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಯ-ವ್ಯಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದೇಶದ ಉತ್ಪಾದನೆ ಹಾಗೂ ಬೆಳವಣಿಗೆಯ ಪ್ರಮಾಣದಲ್ಲಿ ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಜೆಟ್ 2024-25 : ಆದಾಯ ತೆರಿಗೆ ಪಾವತಿಯಲ್ಲಿ ಸರಳೀಕೃತ ಕ್ರಮ

Published

on

ಸುದ್ದಿದಿನಡೆಸ್ಕ್:ಆದಾಯ ತೆರಿಗೆ ಕಾಯ್ದೆ- 1961ಕ್ಕೆ ತಿದ್ದುಪಡಿ ಮಾಡಿ, ಸರಳೀಕೃತ ತೆರಿಗೆ ಪಾವತಿಗೆ ಆದ್ಯತೆ ನೀಡಲಾಗುವುದು. ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸರ್ ಇತರ ಔಷಧಿಗಳ ಮೇಲಿನ ಸೀಮಾ ಸುಂಕ ಇಳಿಕೆ. ಮೊಬೈಲ್ ಹಾಗೂ ಅದರ ಉಪಕರಣಗಳ ಮೇಲೆ ತೆರಿಗೆಯನ್ನು ಶೇಕಡ 15 ಕ್ಕೆ ಇಳಿಸಲಾಗುವುದು. ಚಿನ್ನ, ಬೆಳ್ಳಿ, ಪ್ಲಾಟಿನಮ್ ಮೇಲಿನ ಸೀಮಾ ಸುಂಕವನ್ನು ಶೇಕಡ 6.4ರಿಂದ ಶೇಕಡ 4 ಕ್ಕೆ ಇಳಿಸಲಾಗುವುದು.

ಎಲ್ಲ ವರ್ಗದವರ, ಎಲ್ಲ ಸಮುದಾಯದ ಆಯ-ವ್ಯಯವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಲೋಕಸಭೆಯಲ್ಲಿಂದು ಮಂಡಿಸಿದ 2024-25ನೇ ಸಾಲಿನ ಬಜೆಟ್‌ಗೆ ಪ್ರತಿಕ್ರಿಯಿಸಿ ರೈತ ಸಮುದಾಯದ ಆದಾಯ ದ್ವಿಗುಣ, ನಿರುದ್ಯೋಗಿಗಳಿಗೆ ಉದ್ಯೋಗ, ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಹೆಚ್ಚಿಸುವ ಯೋಜನೆಗಳು ಆಯ-ವ್ಯಯದಲ್ಲಿವೆ ಎಂದು ಅವರು ಹೇಳಿದರು. ಕಳೆದ ಹತ್ತು ವರ್ಷಗಳಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಮೂಲಕ 25 ಕೋಟಿ ಜನರಿಗೆ ಉದ್ಯೋಗ ಕಲ್ಪಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

NEET EXAM | ನೀಟ್ ಮರು ಪರೀಕ್ಷೆ ಇಲ್ಲ : ಸುಪ್ರೀಂ ಕೋರ್ಟ್

Published

on

ಸುದ್ದಿದಿನಡೆಸ್ಕ್:ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧಿಸಿದಂತೆ ದೇಶಾದ್ಯಂತ ಏಕಕಾಲಕ್ಕೆ ನಡೆದ ನೀಟ್ ಪದವಿಪೂರ್ವ ಪರೀಕ್ಷೆಯನ್ನು ಪುನಃ ನಡೆಸಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಯನ್ನು ವಜಾಮಾಡಿದ ಸುಪ್ರಿಂಕೋರ್ಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಯಾವುದೇ ದಾಖಲೆಗಳು ಇಲ್ಲ.

ದೇಶಾದ್ಯಂತ 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯಿಂದ ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ಅಂಶ ಎಲ್ಲಿಯೂ ನಮೂದನೆಯಾಗಿಲ್ಲ. ಹಾಗಾಗಿ ಮರು ಪರೀಕ್ಷೆ ಮಾಡದಿರಲು ನ್ಯಾಯಪೀಠ ತೀರ್ಮಾನಿಸಿತು ಎಂದು ತ್ರಿಸದಸ್ಯ ಪೀಠ ತೀರ್ಪು ನೀಡಿದೆ. ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಈ ತೀರ್ಪು ಪ್ರಕಟಿಸಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending