ದಿನದ ಸುದ್ದಿ
ರಾಜ್ಯಾದ್ಯಂತ ಮುಂದಿನ 8 ವರ್ಷಗಳಲ್ಲಿ ಎಲ್ಲ ಕಡೆ ಎಲೆಕ್ಟ್ರಿಕ್ ಬಸ್ಸುಗಳು ಸಂಚರಿಸಲಿವೆ : ಸಾರಿಗೆ ಇಲಾಖೆ ಸಚಿವ ಬಿ. ಶ್ರೀ ರಾಮುಲು
ಸುದ್ದಿದಿನ, ಗದಗ : ರಾಜ್ಯಾದ್ಯಂತ ಮುಂದಿನ 8 ವರ್ಷಗಳಲ್ಲಿ ಎಲ್ಲ ಕಡೆ ಎಲೆಕ್ಟ್ರಿಕ್ ಬಸ್ಸುಗಳು ಸಂಚರಿಸಲಿವೆ ಎಂದು ಸಾರಿಗೆ ಇಲಾಖೆ ಸಚಿವ ಬಿ. ಶ್ರೀ ರಾಮುಲು ಹೇಳಿದ್ದಾರೆ.
ಗದಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಉತ್ತರ ಕರ್ನಾಟಕದಲ್ಲಿ ಸಂಚರಿಸುತ್ತಿರುವ ಹಳೆಯ ಬಸ್ಸುಗಳನ್ನು ಬದಲಾವಣೆ ಮಾಡಲಾಗುವುದು ಎಂದರು.
ಬೆಂಗಳೂರಿನ ಕೆಲವು ಕಡೆ ಈಗಾಗಲೇ ಎಲೆಕ್ಟ್ರಿಕ್ ಬಸ್‌ಗಳು ಸಂಚರಿಸುತ್ತಿವೆ. ರಾಜ್ಯದ ಎಲ್ಲಾ ಭಾಗದಲ್ಲಿ ವಿದ್ಯುತ್ ಚಾಲಿತ ಬಸ್‌ಗಳ ಸಂಚಾರಕ್ಕೆ ಸ್ವಲ್ಪ ಸಮಯ ಬೇಕಾಗಲಿದೆ. ವಿದ್ಯುತ್ ಚಾಲಿತ ಸಾರಿಗೆ ವಾಹನಗಳ ಖರೀದಿಗಾಗಿ ಅಗತ್ಯ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243