ದಿನದ ಸುದ್ದಿ

ಆಲಮಟ್ಟಿ ಜಲಾಶಯದ ಎತ್ತರ 524ಮೀಟರ್‌ಗೆ ವಿಸ್ತರಣೆ : ಸಿಎಂ ಬೊಮ್ಮಾಯಿ

Published

on

ಆಲಮಟ್ಟಿ ಜಲಾಶಯ

ಸುದ್ದಿದಿನ ಡೆಸ್ಕ್ : ಆಲಮಟ್ಟಿ ಜಲಾಶಯ ಎತ್ತರವನ್ನು 524 ಮೀಟರ್‌ಗೆ ಎತ್ತರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರಿನಲ್ಲಿ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಹಣ ಒದಗಿಸಲಾಗುವುದು. ಅಗತ್ಯ ಗ್ರಾಮಗಳನ್ನು ಪುನಶ್ಚೇತನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಸಂಸದ ರಮೇಶ್ ಜಿಗಜಿಣಗಿ ಮಾತನಾಡಿ, ಈ ಭಾಗದ ಜನತೆಗೆ ಹೆಚ್ಚಿನ ನೀರಾವರಿ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಅನೇಕ ಶಾಸಕರು ಭಾಗಿಯಾಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version