ದಿನದ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಕೊನೆಗೊಳಿಸಿ, ಶಾಂತಿ ಸ್ಥಾಪನೆಗಾಗಿ ಬಿಜೆಪಿ ಹೋರಾಟ : ಸಚಿವ ಅಮಿತ್ ಶಾ

Published

on

ಸುದ್ದಿದಿನ ಡೆಸ್ಕ್ : ಪಶ್ಚಿಮಬಂಗಾಳದಲ್ಲಿ ಹಿಂಸಾಚಾರ, ಭ್ರಷ್ಟಾಚಾರ, ಅತ್ಯಾಚಾರ ಕೊನೆಗೊಳಿಸಿ ಶಾಂತಿ ಮತ್ತು ಸುವ್ಯವಸ್ಥೆ ಸ್ಥಾಪಿಸುವವರೆಗೆ ಬಿಜೆಪಿ ಹೋರಾಟ ನಿಲ್ಲದು ಎಂದು ಪಕ್ಷದ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ದಾರ್ಜಿಲಿಂಗ್ ಜಿಲ್ಲೆಯ ಸಿಲಿಗುಡಿಯಲ್ಲಿ ಗುರುವಾರ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಿದ ಸಚಿವರು, ರಾಜ್ಯದ ತೃಣಮೂಲ ಕಾಂಗ್ರೆಸ್ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.

ಪಶ್ಚಿಮ ಬಂಗಾಳದ ಉತ್ತರ ಭಾಗದ ಜನರನ್ನು ಅಭಿವೃದ್ಧಿಯಿಂದ ವಂಚಿಸಲಾಗಿದೆ. ದೇಶದಲ್ಲೇ ಅತಿ ಹೆಚ್ಚಿನ ಇಂಧನ ದರ ಮತ್ತು ವಿದ್ಯುತ್ ದರ ಜಾರಿಗೊಳಿಸುವ ಮೂಲಕ ಜನಸಾಮಾನ್ಯರಿಗೆ ಹೆಚ್ಚಿನ ಹೊರೆ ಹಾಕಲಾಗಿದೆ; ಪಶ್ಚಿಮ ಬಂಗಾಳ ಜನರನ್ನು ಆಯುಷ್ಮಾನ್ ಯೋಜನೆ ಮತ್ತು ಇತರ ಆರೋಗ್ಯ ವಿಮಾ ಯೋಜನೆಗಳಿಂದ ವಂಚಿಸಲಾಗಿದೆ ಎಂದು ಅಮಿತ್ ಶಾ ಟೀಕಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version