Connect with us

ಕ್ರೀಡೆ

ವೇಗಿಗಳ ದಾಳಿಗೆ ಇಂಗ್ಲೆಂಡ್ ಧೂಳಿಪಟ; 203 ರನ್ ಗಳ ಗೆಲುವು ಕಂಡ ಭಾರತ

Published

on

ಸುದ್ದಿದಿನ,ನಾಟಿಂಗ್ ಹ್ಯಾಮ್: ಭಾರತದ ಸ್ವಿಂಗ್ ಬೌಲರ್ ಗಳ ದಾಳಿಗೆ ತತ್ತರಿಸಿದ ಆತಿಥೇಯ ಇಂಗ್ಲೆಂಡ್ ಹೀನಾಯ ಸೋಲು ಕಂಡಿದೆ. ಭಾರತ 203 ರನ್ ಗಳ ಅಂತರದಲ್ಲಿ ದೊಡ್ಡ ಜಯ ದಾಖಲಿಸಿತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ತೋರಿದ ಭಾರತ ತಂಡ ಅಧಿಕಾರಯುತ ಗೆಲುವು ಪಡೆಯಿತು. 3 ನೇ ಪಂದ್ಯ ಗೆದ್ದ ಭಾರತ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-2 ರಿಂದ ಖಾತೆ ತೆರೆದಿದ್ದು ಸರಣಿಯನ್ನು ಜೀವಂತವಾಗಿರಿಸಿದೆ. ಈ ಗೆಲುವು ಎಡ್ಜ್ ಬಸ್ಟನ್ ಮತ್ತು ಲಾರ್ಡ್ಸ್ ನಲ್ಲಿ ಎದುರಾಗಿದ್ದ ಸೋಲಿನ ಆಘಾತ ದಿಂದ ಭಾರತ ಚೇತರಿಸಿಕೊಂಡಂತಾಗಿದೆ.
4 ನೇ ದಿನದಂತ್ಯಕ್ಕೆ 9 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್, ಗೆಲುವಿಗಾಗಿ 200 ಕ್ಕೂ ಹೆಚ್ಚು ರನ್ ಗಳಿಸಬೇಕಿತ್ತು. 5 ನೇ ದಿನವಾದ ಬುಧವಾರ ದ್ವಿತೀಯ ಇನ್ನಿಂಗ್ಸ್‌ ಮುಂದುವರೆಸಿದ ಇಂಗ್ಲೆಂಡ್ ಕೇವಲ 2.5 ಓವರ್ ನಲ್ಲಿ ಉಳಿದ 1 ವಿಕೆಟ್ ನ್ನು ಕಳೆದುಕೊಂಡಿತು. 317 ರನ್ ಗಳಿಗೆ ಇಂಗ್ಲೆಂಡ್ ಸರ್ವಪತನ ವಾಯಿತು. ಇಂಗ್ಲೆಂಡ್ ಗೆ 521 ರನ್ ಗಳ ಗುರಿ ಪಡೆದಿತ್ತು.
ಜೇಮ್ಸ್ ಆ್ಯಂಡರ್ ಸನ್ (11) ಕೊನೆಯ ವಿಕೆಟ್ ರೂಪದಲ್ಲಿ ಔಟ್ ಆದರು. ಅಶ್ವಿನ್ ಬೌಲಿಂಗ್ ನಲ್ಲಿ ಆ್ಯಂಡರ್ಸನ್, ರಹಾನೆ ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು.
ಪಂದ್ಯದ 2 ಇನ್ನಿಂಗ್ಸ್‌ನಲ್ಲಿ ಆರಂಭಿಕ ಆಟಗಾರರು ಉತ್ತಮ ಪ್ರದರ್ಶನ ತೋರಿದರು. 2 ಇನ್ನಿಂಗ್ಸ್‌ನಲ್ಲಿ ಮೊದಲ ವಿಕೆಟ್ ಗೆ ಭಾರತ 60 ರನ್ ಗಳ ಜತೆಯಾಟ ನಿರ್ವಹಿಸಿತ್ತು. ಅಲ್ಲದೇ ವೇಗಿಗಳಾದ ಇಶಾಂತ್ ಶರ್ಮಾ (2/32 ಮತ್ತು 2/70) ಹಾಗೂ ಮೊಹಮದ್ ಶಮಿ (1/56 ಮತ್ತು (1/78) ಉತ್ತಮ ಆಟವಾಡಿದ್ದರು. ಹೀಗಾಗಿ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.
ಮೊದಲ ಇನ್ನಿಂಗ್ಸ್‌ನಲ್ಲಿ ಅಜಿಂಕ್ಯ ರಹಾನೆ (81) ಮತ್ತು ಟೆಸ್ಟ್‌ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ 2 ನೇ ಇನ್ನಿಂಗ್ಸ್‌ನಲ್ಲಿ (79) ರನ್ ಗಳಿಸಿದ್ದರು.ಹಾರ್ದಿಕ್ ಪಾಂಡ್ಯ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಮತ್ತು ಅರ್ಧಶತಕ ಗಳಿಸಿ ಆಲ್ರೌಂಡರ್ ಪ್ರದರ್ಶನ ದಿಂದ ಭಾರತ ದೊಡ್ಡ ಮೊತ್ತದ ಸವಾಲನ್ನು ಇಂಗ್ಲೆಂಡ್ ಗೆ ನೀಡಲು ನೆರವಾಯಿತು.
ಕನ್ನಡಿಗ ಕೆ. ಎಲ್. ರಾಹುಲ್ ಕ್ಷೇತ್ರ ರಕ್ಷಣೆ ಯಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದು ಭಾರತಕ್ಕೆ ಪ್ಲಸ್ ಪಾಯಿಂಟ್ ಆಯಿತು. ರಾಹುಲ್ 7 ಕ್ಯಾಚ್ ಹಿಡಿದರು. ಈ ಮೂಲಕ ಸ್ಲಿಪ್ ಕ್ಷೇತ್ರ ರಕ್ಷಣೆಯಲ್ಲಿ ಭಾರತ ತಂಡಕ್ಕೆ ಪ್ರಬಲ ಆಟಗಾರನೊಬ್ಬ ದೊರೆತಂತಾಗಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ನಲ್ಲಿ ಮಿಂಚಿದ್ದ ರಿಶಭ್ ಪಂತ್, ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ವಿಕೆಟ್‌ ಕೀಪಿಂಗ್ ನಲ್ಲಿ ಭರವಸೆ ಮೂಡಿಸಿದ್ದಾರೆ. ಧೋನಿ ನಂತರದ ಕೀಪರ್ ಯಾರು ಎಂಬ ಪ್ರಶ್ನೆಗೆ ರಿಶಭ್ ಉತ್ತರ ವಾಗಿ ಕಾಣುತ್ತಿದ್ದಾರೆ.
ಇನ್ನೂ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ನಿಂದ ಗಮನಸೆಳೆಯುತ್ತಿದ್ದಾರೆ. 3 ಪಂದ್ಯ ಗಳಿಂದ ಕೊಹ್ಲಿ 440 ರನ್ ಗಳಿಸಿದ್ದಾರೆ. 3 ನೇ ಟೆಸ್ಟ್‌ ಪಂದ್ಯದಲ್ಲಿ ಕೊಹ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 97 ಮತ್ತು 2 ನೇ ಇನ್ನಿಂಗ್ಸ್‌ನಲ್ಲಿ 103 ರನ್ ಗಳಿಸಿದ್ದಾರೆ. ಕೊಹ್ಲಿ ಮೊದಲ ಟೆಸ್ಟ್‌ ನಲ್ಲಿ 200 ಮತ್ತು 3 ನೇ ಟೆಸ್ಟ್‌ ನಲ್ಲೂ 200 ರನ್ ಗಳಿಸಿದ್ದಾರೆ.
3 ಪಂದ್ಯಗಳಿಂದ ಕೊಹ್ಲಿ 2 ಶತಕ ಮತ್ತು 2 ಅರ್ಧ ಶತಕ ದಾಖಲಿಸಿದ್ದಾರೆ.

ಕ್ರೀಡೆ

ಕ್ರೀಡಾಪಟುಗಳಿಗೆ ಕೋವಿಡ್ ನಿರೋಧಕ ಲಸಿಕೆ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿರುವ 18 ರಿಂದ 44 ವರ್ಷದೊಳಗಿನ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಕೋವಿಡ್-19 ನಿರೋಧಕ ಲಸಿಕೆಯನ್ನು ಆದ್ಯತೆಯ ಮೇರೆಗೆ ಒದಗಿಸಲು ಆದೇಶಿಸಲಾಗಿದ್ದು, ಕ್ರೀಡಾಪಟುಗಳು ಅಗತ್ಯ ದಾಖಲಾತಿಗಳೊಂದಿಗೆ ಜೂ.18 ರೊಳಗಾಗಿ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಕೋವಿಡ್-19 ನಿರೋಧಕ ಲಸಿಕೆ ಹಾಕಿಸಿಕೊಳ್ಳಬಯಸುವ ಕ್ರೀಡಾಪಟುಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಕ್ರೀಡಾ ಸಾಧನೆಯ ಪ್ರಮಾಣ ಪತ್ರಗಳೊಂದಿಗೆ ಜೂ.18 ರೊಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿಗೆ ಹಾಜರಾಗಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ಲಸಿಕೆ ನೀಡುವ ದಿನಾಂಕ ಮತ್ತು ಸ್ಥಳವನ್ನು ನಂತರ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಕ್ರೀಡಾ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020-21ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000 ಗಳಂತೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2020-21ನೇ ಸಾಲಿನಲ್ಲಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ (6 ರಿಂದ 10ನೇ ತರಗತಿ) ವಾರ್ಷಿಕ ರೂ. 10,000 ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಚ್ಚಿಸುವ ಕ್ರೀಡಾಪಟುಗಳು ಕಛೇರಿಯ ಅಧಿಕೃತ ಜಾಲತಾಣ http://serviceonline.gov.in/karnataka ಮೂಲಕ ಆನ್‍ಲೈನ್‍ನಲ್ಲಿ ಮೇ 25 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಿ.ಆರ್.ಎಂ. ವಿಜ್ಞಾನ ಕಾಲೇಜು ಎದುರು, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ, ದೂರವಾಣಿ ಸಂಖ್ಯೆ: 08192-237480 ಕ್ಕೆ ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಭಾರತ ಮಹಿಳಾ ಕ್ರಿಕೆಟ್ ಟೀಂನ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರ ತಾಯಿ-ಸಹೋದರಿ ಕೊರೋನಾಗೆ ಬಲಿ

Published

on

ಸುದ್ದಿದಿನ,ಚಿಕ್ಕಮಗಳೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರ ಸಹೋದರಿ ವಾತ್ಸಲ್ಯ ಕೃಷ್ಣಮೂರ್ತಿ ಅವರು ಕೊರೋನಾದಿಂದ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಈ ಮೊದಲು ವೇದ ಕೃಷ್ಣಮೂರ್ತಿಯವರ ತಾಯಿ ಭಾನುವಾರ ಸೋಂಕಿನಿಂದ ಮೃತಪಟ್ಟಿದ್ದರು. ವೇದ ಅವರು ಒಂದು ವಾರದ ಅಂತರದಲ್ಲಿ ತಾಯಿ-ಸಹೋದರಿಯನ್ನು ಕಳೆದುಕೊಂಡಿದ್ದಾರೆ. ಮೃತ ಸಹೋದರಿಯನ್ನು ಗುರುವಾರ ಕಡೂರಿನಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದೆಂದು ತಿಳಿದುಬಂದಿದೆ.

ಇದನ್ನೂ ಓದಿ | ದಾವಣಗೆರೆ | ಹೆಗಡೆ ಡಯಾಗ್ನಸ್ಟಿಕ್ ಸೆಂಟರ್ಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ವೇದ ಕೃಷ್ಣಮೂರ್ತಿ ಭಾರತೀಯ ಕ್ರಿಕೆಟ್ ನಲ್ಲಿ ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಗುರುತಿಸಿಕೊಂಡಿದ್ದರು. ಇದಲ್ಲದೇ ರಾಜ್ಯ ಆರೋಗ್ಯಯ ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಜಾಗೃತಿಯಲ್ಲಿಯೂ ಪಾಲ್ಗೊಂಡಿದ್ದರು. ಇಷ್ಟೆ ಅಲ್ಲದೆ ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಆರ್ಥಿಕ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸರಕಾರದ ನೆರವು ; ನೈಜ ಫಲಾನುಭವಿಗಳಿಗೆ ಪರಿಹಾರಧನ ಸದುಪಯೋಗವಾಗಲಿ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಸುದ್ದಿದಿನ,ದಾವಣಗೆರೆ: ಕೋವಿಡ್ 2ನೇ ಅಲೆಯ ಲಾಕ್‍ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ್ದು...

ದಿನದ ಸುದ್ದಿ2 days ago

ನಟ ‘ಸಂಚಾರಿ’ ವಿಜಯ್ ಇನ್ನಿಲ್ಲ..!

ಸುದ್ದಿದಿನ, ಬೆಂಗಳೂರು: ಶನಿವಾರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ‌’ಸಂಚಾರಿ’ ವಿಜಯ್...

ಸಿನಿ ಸುದ್ದಿ2 days ago

ಮೆದುಳು ನಿಷ್ಕ್ರಿಯ | ನಟ ಸಂಚಾರಿ ವಿಜಯ್ ಅಂಗಾಗ ದಾನ ಮಾಡಲು ಕುಟುಂಬಸ್ಥರ ನಿರ್ಧಾರ

ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್...

ನಿತ್ಯ ಭವಿಷ್ಯ3 days ago

ಈ ರಾಶಿಯವರಿಗೆ ಪ್ರಯತ್ನಿಸಿದ ಕಾರ್ಯದಲ್ಲಿ ಜಯ! ಉದ್ಯೋಗದಲ್ಲಿ ಪ್ರಮೋಷನ್! ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ! ಶತ್ರುಗಳ ಬಗ್ಗೆ ಜಾಗ್ರತೆ ವಹಿಸಿ! ಸೋಮವಾರ ರಾಶಿ ಭವಿಷ್ಯ-ಜೂನ್-14,2021

ಸೋಮವಾರ ರಾಶಿ ಭವಿಷ್ಯ-ಜೂನ್-14,2021 ಸೂರ್ಯೋದಯ: 05:51 AM, ಸೂರ್ಯಾಸ್: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ, ಜ್ಯೇಷ್ಠ ಮಾಸ,...

ದಿನದ ಸುದ್ದಿ3 days ago

ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಸುದ್ದಿದಿನ,ಶಿವಮೊಗ್ಗ: ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶನಿವಾರ...

ನಿತ್ಯ ಭವಿಷ್ಯ4 days ago

ಈ ರಾಶಿಯವರು ವಿಚ್ಛೇದನ ಪಡೆಯುವ ಗಂಡಹೆಂಡತಿ ಮತ್ತೆ ಒಂದಾಗುವ ಸುದಿನ!ಉದ್ಯೋಗ, ಹಣಕಾಸು, ಆಸ್ತಿ ಖರೀದಿ, ಮಂಗಳ ಕಾರ್ಯ, ಸಮಸ್ಯೆ ಎದುರಿಸುತ್ತಿರುವವರಿಗೆ ಶುಭವಾರ್ತೆ! ಭಾನುವಾರ ರಾಶಿ ಭವಿಷ್ಯ-ಜೂನ್-13,2021

ಸೂರ್ಯೋದಯ: 05:51 AM ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ, ಉತ್ತರಾಯಣ, ವಸಂತ ಋತು,...

ದಿನದ ಸುದ್ದಿ4 days ago

ದಾವಣಗೆರೆ | ಜೂನ್ 14,16,18 ರಂದು ಬೆಳಿಗ್ಗೆ 6 ರಿಂದ 12 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ; ಜೂನ್ 14 ರಿಂದ 21 ರವರೆಗೆ ಲಾಕ್‍ಡೌನ್ ಮುಂದುವರಿಕೆ : ಜಿಲ್ಲಾಧಿಕಾರಿ

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಜೂನ್ 14 ರವರೆಗೆ ಇದ್ದ ಲಾಕ್‍ಡೌನ್ ಅನ್ನು ಜೂನ್ 21 ರ ಬೆಳಿಗ್ಗೆ 6 ರವೆರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಇಂದು (ಶನಿವಾರ)...

ದಿನದ ಸುದ್ದಿ4 days ago

ದಾವಣಗೆರೆ | ಜಿಲ್ಲೆಯ 25 ಗ್ರಾಮಗಳು ನಿಯಂತ್ರಿತ ವಲಯ : ಜಿಲ್ಲಾಧಿಕಾರಿ

ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಮಿಕ ರೋಗದ 2ನೇ ಅಲೆ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮಾಂತರ ಪ್ರದೇಶಗಳಲ್ಲಿ ಹತ್ತಕ್ಕಿಂತ ಹೆಚ್ಚು ಕೋವಿಡ್ ಸೋಂಕಿತರಿರುವ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೋಂಕು...

ದಿನದ ಸುದ್ದಿ5 days ago

ಈ ರಾಶಿಯವರಿಗೆ ಗುಡ್ ನ್ಯೂಸ್ ಧನಲಾಭ! ಉದ್ಯೋಗ ಪ್ರಾಪ್ತಿ! ನಿಶ್ಚಿತಾರ್ಥ ಸಂಭವ! ಸಂತಾನದ ಸಿಹಿಸುದ್ದಿ! ಪ್ರೇಮಿಗಳು ಮತ್ತೆ ಒಂದಾಗುವ ಭಾಗ್ಯ! ಶನಿವಾರ ರಾಶಿ ಭವಿಷ್ಯ-ಜೂನ್-12,2021

ಸೂರ್ಯೋದಯ: 05:51 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ, ವಸಂತ ಋತು, ಉತ್ತರಾಯಣ,...

ದಿನದ ಸುದ್ದಿ5 days ago

ದಾವಣಗೆರೆ | ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಬಿ. ರಿಷ್ಯಂತ್ ಅಧಿಕಾರ ಸ್ವೀಕಾರ

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇನ್ನೂ ಜಾರಿಯಲ್ಲಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿಗೊಳಿಸಲು ಪ್ರಥಮಾದ್ಯತೆ ನೀಡಲಾಗುವುದು, ನಿಷೇಧಿತ ಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ...

Trending