Connect with us

ದಿನದ ಸುದ್ದಿ

ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿನ 6 ನೇ ತರಗತಿಗೆ ದಾಖಲಾತಿಗೆ ಪ್ರವೇಶ ಪರೀಕ್ಷೆ

Published

on

ಸುದ್ದಿದಿನ,ದಾವಣಗೆರೆ : ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಮೇ.19 ರಂದು ನಡೆಸಲಾಗುವುದು.

ವಿದ್ಯಾರ್ಥಿಗಳ ಪ್ರವೇಶ ಪತ್ರ (HALL TICKET) ವನ್ನು ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 44, ಜಿಲ್ಲಾಡಳಿತ ಭವನ, ಪಿ.ಬಿ ರಸ್ತೆ, ಕರೂರು ಕ್ರಾಸ್, ದಾವಣಗೆರೆ ಇಲ್ಲಿ ವಿತರಿಸಲಾಗುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಪಡೆದುಕೊಳ್ಳುವಂತೆ ತಿಳಿಸಿದೆ. ಹಾಗೂ ಪ್ರವೇಶ ಪತ್ರ ಪಡೆಯಲು ಬರುವ ವಿದ್ಯಾರ್ಥಿ, ಪೋಷಕರು ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ, ಆಧಾರಕಾರ್ಡ್, ಅರ್ಜಿ ಸಲ್ಲಿಸಿರುವ ಪ್ರತಿಯನ್ನು ಕಡ್ಡಾಯವಾಗಿ ತರಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending