Connect with us

ದಿನದ ಸುದ್ದಿ

ಕೈಗಾರಿಕೆಗಳಿಗಿಂತಲೂ ವಾಹನಗಳಿಂದಾಗುವ ಪರಿಸರ ಮಾಲಿನ್ಯವೇ ಹೆಚ್ಚು : ಪರಿಸರ ಅಧಿಕಾರಿ ಕೊಟ್ರೇಶ್

Published

on

ಸುದ್ದಿದಿನ,ದಾವಣಗೆರೆ: ದೇಶದಲ್ಲಿ ಕೈಗಾರಿಕೆಗಳಿಂದ ಉಂಟಾಗುವ ಪರಿಸರ ಮಾಲಿನ್ಯದ ಪ್ರಮಾಣಕ್ಕಿಂತಲೂ ವಾಹನಗಳು ಹೊರಸೂಸುವ ವಿಷಾನಿಲದಿಂದಲೇ ಹೆಚ್ಚು ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಜಿಲ್ಲಾ ಪರಿಸರ ಅಧಿಕಾರಿ ಕೊಟ್ರೇಶ್ ಅವರು ಹೇಳಿದರು.

ಸಾರಿಗೆ ಇಲಾಖೆ ವತಿಯಿಂದ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ‘ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ’ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ದೇಶದಲ್ಲಿ ಆಗುತ್ತಿರುವ ಪರಿಸರ ಮಾಲಿನ್ಯದ ಶೇ. 65 ರಷ್ಟು ವಾಹನಗಳಿಂದಲೇ ಆಗುತ್ತಿದೆ. ಅಂದರೆ ಕೈಗಾರಿಕೆಗಳಿಂದ ಆಗುತ್ತಿರುವ ಪರಿಸರ ಮಾಲಿನ್ಯದ ಪ್ರಮಾಣಕ್ಕಿಂತಲೂ ವಾಹನಗಳಿಂದ ಆಗುತ್ತಿರುವ ಮಾಲಿನ್ಯ ಹೆಚ್ಚಿನ ಪ್ರಮಾಣದ್ದಾಗಿದೆ. ವಾಹನಗಳನ್ನು ಖರೀದಿಸುವವರು, ಕಾಲ ಕಾಲಕ್ಕೆ ಆಯಿಲ್ ಬದಲಾವಣೆ, ಸರ್ವೀಸಿಂಗ್ ಮಾಡಿಸುವಲ್ಲಿ ನಿರ್ಲಕ್ಷ್ಯ ತೋರುತ್ತಾರೆ. ಹೀಗಾಗಿ ಅಂತಹ ವಾಹನಗಳಿಂದ ಹೆಚ್ಚು ಹೊಗೆ ಹೊರಸೂಸಿ ಪರಿಸರ ಮಾಲಿನ್ಯವಾಗುತ್ತಿದೆ.

ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದ್ದರೂ, ಸಾರ್ವಜನಿಕರಿಂದ ಇನ್ನೂ ಪ್ಲಾಸ್ಟಿಕ್ ವಸ್ತು ಹಾಗೂ ಸಾಮಗ್ರಿಗಳ ಬಳಕೆ ನಿಂತಿಲ್ಲ. ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನರಿತು ನಡೆದುಕೊಳ್ಳದೇ ಹೋದಲ್ಲಿ ಪರಿಸರ ಮಾಲಿನ್ಯ ತಡೆಗಟ್ಟುವುದು ಕಷ್ಟಕರ ಎಂದು ಕೊಟ್ರೇಶ್ ಆತಂಕ ವ್ಯಕ್ತಪಡಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಕೆ. ಮಲ್ಲಾಡ ಮಾತನಾಡಿ, ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ಮಾಲಿನ್ಯ ನಿಯಂತ್ರಣ ಮಾಸಾಚರಣೆ ಆಚರಿಸಲಾಗುತ್ತಿದೆ. ಈ ವರ್ಷ ‘ಮಾಲಿನ್ಯದಿಂದ ಮರಣ, ಮಾಡೋಣ ನಿಯಂತ್ರಣ’ ಎಂಬ ಘೋಷಾವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ದೇಶದ ಆರ್ಥಿಕತೆ ಸಾರಿಗೆ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ.

ಹೀಗಾಗಿ ಸಾರಿಗೆ ವ್ಯವಸ್ಥೆ ಸದೃಢವಾಗಿದ್ದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ. ಕೋವಿಡ್ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡಿದ ಕಾರಣದಿಂದಾಗಿ ಸಮೂಹ ಸಾರಿಗೆ ವ್ಯವಸ್ಥೆ ಕುಸಿದಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಸಮೂಹ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವಿದೆ.

ಕೊರೋನಾ ಕಾರಣದಿಂದಾಗಿ ಕಳೆದ ವರ್ಷಕ್ಕಿಂತಲೂ ಈ ವರ್ಷ ವಾಹನಗಳ ನೊಂದಣಿ ಹೆಚ್ಚಾಗಿದೆ. ಹೀಗಾಗಿ ವೈಯಕ್ತಿಕ ವಾಹನಗಳ ಓಡಾಟ ಹೆಚ್ಚಿರುವ ಕಾರಣದಿಂದ ವಾಯುಮಾಲಿನ್ಯವೂ ಹೆಚ್ಚಾಗಿದ್ದು, ಸಮಾಜದಲ್ಲಿ ಕಾಲ್ನಡಿಗೆ, ಸೈಕಲ್ ಬಳಕೆಗೆ ಉತ್ತೇಜನ ನೀಡುವಂತಾಗಬೇಕು. ಪ್ರತಿಯೊಬ್ಬರೂ ತಮ್ಮ ವಾಹನಗಳನ್ನು ಕಾಲಕಾಲಕ್ಕೆ ಸರ್ವೀಸಿಂಗ್ ಮಾಡಿಸಿಕೊಂಡು, ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಪ್ರತಿ ಆರು ತಿಂಗಳಿಗೊಮ್ಮೆ ವಾಹನದ ಎಮಿಷನ್ ಟೆಸ್ಟ್ ಮಾಡಿಸುವುದು ಕಡ್ಡಾಯವಾಗಿದ್ದು, ಇದರ ದಾಖಲೆಯನ್ನು ತಪ್ಪದೆ ಇಟ್ಟುಕೊಳ್ಳಬೇಕು, ತಪ್ಪಿದಲ್ಲಿ 1000 ರೂ. ದಂಡ ತೆರಬೇಕಾಗುತ್ತದೆ ಎಂದರು.

ಜಿಲ್ಲಾ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸೈಯದ್ ಸೈಫುಲ್ಲಾ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಹೆಚ್ಚಿನ ಹಾನಿಯಾಗುತ್ತಿದ್ದು, ಇದರ ತಯಾರಿಕೆಯನ್ನು ಸರ್ಕಾರ ನಿಷೇಧಿಸಬೇಕು. ಪರಿಸರ ಮಾಲಿನ್ಯ ತಡೆಗಟ್ಟಲೆಂದೇ ಸರ್ಕಾರ ಇಂಧನ ಹಾಗೂ ವಾಹನದ ಇಂಜಿನ್ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಂಡಿದ್ದು, ಇದೀಗ ಪರಿಸರ ಮಾಲಿನ್ಯ ಕಡಿಮೆಗೊಳಿಸುವ ಬಿಎಸ್-6 ಮಾದರಿಯ ವಾಹನಗಳ ತಯಾರಿಕೆಯಾಗುತ್ತಿದೆ.

ಸರಕು ಸಾಗಾಣಿಕೆ ವಾಹನಗಳು ನಿಗದಿತ ಪ್ರಮಾಣಕ್ಕಿಂತಲೂ ಅಧಿಕ ಭಾರ ಹೊತ್ತು ಸಂಚರಿಸಿದರೆ, ವಾಹನದ ಇಂಜಿನ್ ಮೇಲೆ ಹೆಚ್ಚಿನ ಒತ್ತಡವುಂಟಾಗಿ ವಾಹನ ಹೆಚ್ಚು ಹೆಚ್ಚು ಹೊಗೆ ಹೊರಸೂಸುತ್ತದೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಅಧಿಕಾರಿಗಳು ಇದನ್ನು ತಡೆಗಟ್ಟಬೇಕು. ಕೋವಿಡ್ ತಡೆಗೆ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಮಾಸ್ಕ್ ಬಳಕೆಯಿಂದ ಶ್ವಾಸಕೋಶದ ತೊಂದರೆ ಕಡಿಮೆಯಾಗಿದೆ. ಕೋವಿಡ್ ಇರಲಿ, ಇಲ್ಲದಿರಲಿ ಎಲ್ಲರೂ ಮಾಸ್ಕ್ ಧರಿಸುವುದನ್ನು ಮುಂದುವರೆಸಿದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳಿಗೆ ಕಡಿವಾಣ ಹಾಕಬಹುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಿರಿಯ ಮೋಟಾರು ವಾಹನ ನಿರೀಕ್ಷಕ ಪ್ರಮುದೇಶ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ತುಕಾರಾಂರಾವ್ ಬಿ.ವಿ., ಪ್ರಾದೇಶಿಕ ಸಾರಿಗೆ ಕಚೇರಿಯ ಅಧೀಕ್ಷಕ ಶಶಿಧರ್, ವಾಸುದೇವ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಹಮ್ಮಿಕೊಳ್ಳಲಾಗಿರುವ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಯ ಅಂಗವಾಗಿ ಪ್ರತಿನಿತ್ಯ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದ್ದು, ನ. 30 ಕ್ಕೆ ಮಾಸಾಚರಣೆಯ ಸಮಾರೋಪ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .

ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending