ಲೈಫ್ ಸ್ಟೈಲ್
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ
- ಬಸವರಾಜ.ಹೆಚ್,ಪತ್ರಿಕೋದ್ಯಮ ವಿದ್ಯಾರ್ಥಿ, ಧಾರವಾಡ
ನಮಗೆಲ್ಲರಿಗೂ ತಿಳಿದಿರುವ ಹಾಗೆ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಶಾಲಾ, ಕಾಲೇಜುಗಳಲ್ಲಿ & ಅನೇಕ ಇಲಾಖೆಗಳಲ್ಲಿ ಹಾಗೂ ಸಂಘ -ಸಂಸ್ಥೆಗಳಲ್ಲಿ ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸುವುದರಿಂದ ಜನರಿಗೆ ಪರಿಸರದ ಕಾಳಜಿ ಜೊತೆಗೆ ಅವರಿಗೆ ಪರಿಸರದ ಮಹತ್ವ ಸಾರುವ ಹಾಗೂ ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಇದನ್ನು 1974 ರಲ್ಲಿ ವಿಶ್ವಸಂಸ್ಥೆಯು ಸ್ಥಾಪಿಸಿತು.
ನಮ್ಮ ಪೂರ್ವಜರು ಪ್ರಕೃತಿಯ ಜೊತೆಗೆ ಬದುಕಿದವರು, ವಿದ್ಯೆಯಲ್ಲಿ ಹಿಂದಿದ್ದರೂ ಪರಿಸರದ ಬಗ್ಗೆ ಕಾಳಜಿ ಹೊಂದಿದ್ದರು ಆದರೆ ನಾಗರೀಕತೆ ಬೆಳದಂತೆ ಇಂದಿನ ದಿನಮಾನದಲ್ಲಿ ಪ್ರಕೃತಿಯ ಹೋಮವೇ ನೆಡೆಯುತ್ತಿದೆ. ಪರಿಸರದ ಕಾಳಜಿ ಯಾರಿಗೂ ಇಲ್ಲದಂತಾಗುತ್ತದೆ. ಪ್ರತಿವರ್ಷ ಜೂನ್ 5 ರಂದು ನಾವೆಷ್ಟು ಪರಿಸರವನ್ನು ಹಾಳುಮಾಡಿದ್ದೇವೆ ಎಂಬುವುದು ಲೆಕ್ಕ ಹಾಕುವಂತಾಗಿದೆ.ಪ್ರಸ್ತುತ ಜಗತ್ತಿನಲ್ಲಿ
ವಿಶ್ವ ಪರಿಸರ ದಿನವನ್ನು ಏಕೆ ಆಚರಿಸಲಾಗುತ್ತದೆ?ಎಂಬುವ ಪ್ರಶ್ನೆ ಎಲ್ಲರಲ್ಲೂ ಸಮಾನ್ಯವಾಗಿ ಮೂಡಿಬಂದಿರುವುದಾಗಿದೆ.
ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯವಾದ ಕೊಡುಗೆಯನ್ನು ಈ ಪ್ರಕೃತಿ ಕೊಟ್ಟಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಗಿಡ – ಮರಗಳು, ಕಾಡುಗಳು, ಸಾಗರಗಳು ಮುಂತಾದವುಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತಾರಾಗಿರುವ ಈ ಪರಿಸರ ಯುಗ-ಯುಗಗಳವರೆಗೂ ಹೀಗೆಯೇ ಉಳಿಯಬೇಕಿದೆ. ಪರಿಸರವನ್ನು ಈಗಿನ ಕಾಲದಲ್ಲಿ ಉಳಿಸಿಕೊಂಡು ಹೋಗುವುದು ಕಷ್ಟವಾಗಿದೆ.
ಅದು ಹೇಗೆ ಎಂದರೆ ನಾವು ಮಾಡುತ್ತಿರುವ ಅರಣ್ಯನಾಶ, ಗಣಿಗಾರಿಕೆ, ಕೈಗಾರಿಕರಣ ಇವುಗಳೆಲ್ಲವೂ ಸೇರಿದಂತೆ ಮಾನವನ ಮೂರ್ಖ ಪ್ರಯತ್ನದಿಂದ ಹಲವಾರು ಚಟುವಟಿಕೆಗಳಿಂದ ಇಂದು ಪರಿಸರಕ್ಕೆ ಧಕ್ಕೆಯನ್ನು ಉಂಟುಮಾಡಿದೆ.ಮಾನವನ ಚಟುವಟಿಕೆಗಳಿಂದ ಪರಿಸರಕ್ಕೆ ಹಾನಿಯಾಗದಂತೆ ಮಾಡಲು ಜಗತ್ತಿನ ಎಲ್ಲಾ ದೇಶಗಳಲ್ಲಿ ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ. ಭೂಮಿ ಎಂಬ ಈ ಗೃಹದಲ್ಲಿ ನಾವು ಬದುಕಲು ನಮಗೆ ಸಹಾಯ ಮಾಡುವ ಮೂಲಕ ಪರಿಸರ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಪ್ರಕೃತಿ ಮಾತೆಯು ನಮಗೆ ಈ ಸುಂದರವಾದ ವಾತಾವರಣವನ್ನು ನಮಗೆ ನೀಡಿದ್ದು ಇದು ನಮ್ಮ ಜೀವನವನ್ನು ಸುಸ್ಥಿರಗೊಳಿಸುತ್ತದೆ.
ಪರಿಸರವಿಲ್ಲದೆ ಈ ಭೂಮಿ ಮೇಲೆ ಯಾವ ಜೀವಿಯೂ ಬದುಕುಳಿಯಲು ಅಸಾಧ್ಯವಾಗಿದೆ. ಈ ಭೂಮಿಯ ಮೇಲೆ ಅದೆಷ್ಟೋ ಮಾನವ ನಿರ್ಮಿತ ಚಟುವಟಿಕೆಗಳು ನೆಡೆಯುತ್ತಿರುವುದು ಪ್ರಕೃತಿಯ ಅಸಮತೋಲನಕ್ಕೆ ಕಾರಣವಾಗುತ್ತದೆ ಮತ್ತು ಅದು ಇಡಿ ಪರಿಸರದಲ್ಲಿ ಮತ್ತಷ್ಟು ಗೊಂದಲವನ್ನು ಉಂಟುಮಾಡುತ್ತಿದೆ. ಆದುದ್ದರಿಂದ ಪರಿಸರದ ಬಗ್ಗೆ ಕಾಳಜಿವಹಿಸುವುದು ಮತ್ತು ಅಗತ್ಯಕ್ಕೆತಕಂತೆ ಸರಳವಾಗಿ ಜೀವಿಸುವುದು ಕೂಡ ಅವಶ್ಯಕವಾಗಿದೆ. ಈ ಗೃಹದಲ್ಲಿ ಎಲ್ಲಾ ಪರಿಸರ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ನಾವಿರುವ ಭೂಮಿಯನ್ನು ನಿಜವಾಗಿಯೂ ಸುಂದರವಾಗಿಸಲು ಸಹಾಯ ಮಾಡುವ ಕ್ರಮಗಳನ್ನು ನಿರ್ವಹಿಸಲು ವಿವಿಧ ಯೋಜನೆಗಳು ಹಾಗೂ ಕಾರ್ಯಸೂಚಿಗಳನ್ನು ಕಾರ್ಯಗತಗೊಳಿಸುವ ಉದ್ದೇಶದಿಂದ ವಿಶ್ವಪರಿಸರ ದಿನವನ್ನು ಆಚರಿಸಲಾಗುತ್ತದೆ.
ಈ ದಿನದ ಪ್ರಾಥಮಿಕ ಉದ್ದೇಶವೆಂದರೆ ಜಗತ್ತಿನ ಎಲ್ಲಾ ಜನರನ್ನು ಒಗ್ಗೂಡಿಸುವುದು ಮತ್ತು ಪರಿಸರ ಶೋಷಣೆಯಿಂದಾಗಿ ನಾವು ಎದುರಿಸುತ್ತಿರುವ ಹವಮಾನ ಬದಲಾವಣೆಗಳ ಬಗ್ಗೆ ಅರಿವು ಮೂಡಿಸುವುದು, ಪರಿಸರ ಸಂರಕ್ಷಣೆಗೆ ಯುವಕರನ್ನು ಉತ್ತೇಜಿಸುವ ಸಲುವಾಗಿ ಈ ದಿನವನ್ನು ವಿಶ್ವ ಪರಿಸರ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಡುತ್ತದೆ ವಿವಿಧ ಪರಿಸರ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಉತ್ತಮ ಭವಿಷ್ಯಕ್ಕಾಗಿ ನಮ್ಮ ಪರಿಸರವನ್ನು ನಾವು ಎದುರಿಸುತ್ತಿರುವ ಹವಮಾನ ಬದಲಾವಣೆಗಳ ಬಗ್ಗೆ ಅರಿವು ಮೂಡಿಸುವುದು, ಪರಿಸರ ಸಂರಕ್ಷಣೆಗೆ ಯುವಕರನ್ನು ಉತ್ತೇಜಿಸುವ ಸಲುವಾಗಿ ಈ ದಿನವನ್ನು ವಿಶ್ವ ಪರಿಸರ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಡುತ್ತದೆ ವಿವಿಧ ಪರಿಸರ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಉತ್ತಮ ಭವಿಷ್ಯಕ್ಕಾಗಿ ನಮ್ಮ ಪರಿಸರವನ್ನು ನಾವು ಎದುರಿಸುತ್ತಿರುವ ಹವಮಾನ ಬದಲಾವಣೆಗಳ ಬಗ್ಗೆ ಅರಿವು ಮೂಡಿಸುವುದು, ಪರಿಸರ ಸಂರಕ್ಷಣೆಗೆ ಯುವಕರನ್ನು ಉತ್ತೇಜಿಸುವ ಸಲುವಾಗಿ ಈ ದಿನವನ್ನು ವಿಶ್ವ ಪರಿಸರ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಡುತ್ತದೆ ವಿವಿಧ ಪರಿಸರ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಉತ್ತಮ ಭವಿಷ್ಯಕ್ಕಾಗಿ ನಮ್ಮ ಪರಿಸರವನ್ನು ರಕ್ಷಿಸುವುದು ವಿಶ್ವ ಪರಿಸರ ದಿನದ ಮುಖ್ಯ ಉದ್ದೇಶವಾಗಿದೆ. ಪರಿಸರದಲ್ಲಿನ ಬದಲಾವಣೆಗಳಿಂದ ನಮ್ಮ ಪರಿಸರ ಹೇಗೆ ಕ್ಷಿಣಿಸುತ್ತದೆ ಮತ್ತು ಮತ್ತು ಅದನ್ನು ರಕ್ಷಿಸಲು ಇರುವಂತಹ ಕ್ರಮಗಳನ್ನು ಇಂದಿನ ದಿನಮಾನದಲ್ಲಿ ನಾವು ತಿಳಿದುಕೊಂಡು ಬೆಳೆಸಿಕೊಂಡು ಹೋಗುವುದು ನಮ್ಮ ಆದ್ಯ ಕರ್ತವ್ಯ ಆಗಿದೆ.
ಮಾಲಿನ್ಯ ಅಥವಾ ನೈಸರ್ಗಿಕ ಸಂಪನ್ಮೂಲಗಳ ಕೊರತೆಯಿಂದ ಮುಕ್ತವಾದ ನೈಸರ್ಗಿಕ ಮತ್ತು ಸುಂದರವಾದ ಜಗತ್ತನ್ನು ಸೃಷ್ಟಿಸುವುದು ವಿಶ್ವ ಪರಿಸರ ದಿನದ ಸಂಪೂರ್ಣ ಆಲೋಚನೆ ನಮ್ಮೆಲ್ಲರದಾಗಿದೆ. ಪ್ಲಾಸ್ಟಿಕ್ ಅನ್ನು ನಿಷೇಧಿಸುವುದು ಮತ್ತು ಅದನ್ನು ಮರುಬಳಕೆ ಮಾಡುವುದು ನೀರನ್ನು ಉಳಿಸುವುದು, ಹೆಚ್ಚು ಗಿಡಗಳನ್ನು ನೆಡುವುದು, ವನ್ಯಜೀವಿಗಳು ಮತ್ತು ಪ್ರಾಣಿಗಳನ್ನು ಉಳಿಸುವುದು. ಇವೆಲ್ಲಾ ನಮ್ಮನ್ನು ಉತ್ತಮ ಪರಿಸರಕ್ಕೆ ಕರೆದ್ಯೋಯುವ ಕೆಲವು ಹಂತಾಗಳಾಗಿವೆ.
ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಲು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಎಲ್ಲವೂ ಒಂದು ದಿನ ಕ್ಷಿಣಿಸುತ್ತದೆ. ಇದರಿಂದ ಶುದ್ಧ ನೀರು, ಶುದ್ಧ ಗಾಳಿ ಎಂದಿಗೂ ನಮಗೆ ಉಳಿಯುವುದಿಲ್ಲ ನಮ್ಮ ತಾಯಿಯ ಸ್ವಭಾವವನ್ನು ಉಳಿಸುವುದು ಮತ್ತು ಅದನ್ನು ಮಾಲಿನ್ಯಗೊಳಿಸದಿರುವುದು ಹಾಗೂ ಇತರ ಅಪಾಯಗಳಿಂದ ರಕ್ಷಿಸುವುದು ನಮ್ಮ ಜವಾಬ್ದಾರಿ ಆಗಿದೆ. ಇದು ಉತ್ತಮ ಮಾರ್ಗಕ್ಕೆ ಕರಿದ್ಯೋಯುತ್ತದೆ.
ಪ್ರತಿಯೊಬ್ಬರೂ ಪರಿಸರದ ಮಹತ್ವ ಮತ್ತು ಹಾನಿಯ ನಷ್ಟವನ್ನು ಮನದಟ್ಟು ಮಾಡಿ ಮುಂದಿನ ದಿನಗಳಲ್ಲಿ ಪರಿಸರದ ಅಭಿವೃದ್ಧಿಯ ಲೆಕ್ಕಾಚಾರ ಮಾಡುವಂತಾದರೆ ಪರಿಸರ ದಿನಕ್ಕೆ ಮಹತ್ವ ಬಂದಂತಾಗುತ್ತದೆ. ಸೂಕ್ತವಾದ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಈ ಭೂಮಿಯನ್ನು ರಕ್ಷಣೆ ಮಾಡಬೇಕಾಗಿದೆ. ಪ್ರತಿಯೊಬ್ಬರೂ ನಮ್ಮ ಸುತ್ತ-ಮುತ್ತ ಗಿಡ ನೆಟ್ಟು ಬೆಳೆಸೋಣ. ಆಗ ಇಡಿ ನಾಡೆ ಹಸಿರಾಗಿ ಇರುವುದು.
(ಬಸವರಾಜ.ಹೆಚ್ ಪತ್ರಿಕೋದ್ಯಮ ವಿದ್ಯಾರ್ಥಿ ಧಾರವಾಡ.8951228607)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.




