ರಾಜಕೀಯ
ಈಶ್ವರ್ ಖಂಡ್ರೆ ಹೊಸ ಬಾಂಬ್ : ಬಿಜೆಪಿ ಶಾಸಕರು ಕಾಂಗ್ರೆಸ್ ಗೆ !
ಸುದ್ದಿದಿನ ಡೆಸ್ಕ್: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೊಸ ಬಾಂಬ್ ಸಿಡಿಸಿದ್ದಾರೆ. ಕೆಲ ಬಿಜೆಪಿ ಶಾಸಕರು ತಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದ ಬಗ್ಗೆ ದೇಶದಲ್ಲಿನ ಎಲ್ಲ ಜನರು ಬೇಸತ್ತಿದ್ದಾರೆ. ರೈತರು ತಮ್ಮ ಬೆಳೆಗಳಿಗೆ ಉತ್ತಮ ಆದಾಯ ಪಡೆಯುವಂತಾಗಿಲ್ಲ. ಯುವ ಸಮುದಾಯಕ್ಕೆ ಜಮಉದ್ಯೋಗ ಭದ್ರತೆ ಸಿಗುತ್ತಿಲ್ಲ.
ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಿ ರಾಹುಲ್ ಗಾಂಧಿ ಅವರನ್ನು ಮುಂದಿನ ಪ್ರಧಾನಿ ಮಾಡುತ್ತೇವೆ ಎಂದರು.