ದಿನದ ಸುದ್ದಿ
ಕೆ.ಎಸ್. ಈಶ್ವರಪ್ಪ ಸ್ವಯಂ-ಪ್ರೇರಣೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ : ಮುಖ್ಯಮಂತ್ರಿ ಬೊಮ್ಮಾಯಿ
ಸುದ್ದಿದಿನ, ಗದಗ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವಯಂಪ್ರೇರಣೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗದಗ ನಗರದಲ್ಲಿಂದು ಬಿಜೆಪಿ ಕಾರ್ಯಕರ್ತರ ಸಭೆಯನ್ನದ್ದೇಶಿಸಿ ಮಾತನಾಡಿದ ಅವರು, ಗುತ್ತಿಗೆದಾರರೊಬ್ಬರ ಸಾವಿನ ಪ್ರಕರಣದಲ್ಲಿ ಪಕ್ಷಕ್ಕೆ ಮುಜುಗರವಾಗದಂತೆ ನೈತಿಕ ಹೊಣೆ ಹೊತ್ತು ಕೆ.ಎಸ್. ಈಶ್ವರಪ್ಪ ಸ್ವಂ ಪ್ರೇರಣೆಯಿಂದ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದರು.
ಗುತ್ತಿಗೆದಾರರೊಬ್ಬರ ಸಾವಿನ ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ನಡೆದು ಸತ್ಯಾಂಶ ಹೊರಬರಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243