ದಿನದ ಸುದ್ದಿ
ಇ.ಎಸ್.ಐ. ಆಸ್ಪತ್ರೆಗಳಲ್ಲಿ ಅಸಂಘಟಿತ ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ : ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಮನವಿ
ಸುದ್ದಿದಿನ ಡೆಸ್ಕ್ : ರಾಜ್ಯದ ಇ.ಎಸ್.ಐ. ಆಸ್ಪತ್ರೆಗಳಲ್ಲಿ ಅಸಂಘಟಿತ ಕಾರ್ಮಿಕರಿಗೂ ವೈದ್ಯಕೀಯ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು, ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಕೇಂದ್ರ ಕಾರ್ಮಿಕ ಖಾತೆ ಸಚಿವರಿಗೆ ಮನವಿ ಮಾಡಿದ್ದಾರೆ.
ದಿಲ್ಲಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ, ಚರ್ಚಿಸಿದ ಸಚಿವರು, ಆಯುಷ್ ವಿಭಾಗಗಳನ್ನು ತೆರೆಯಬೇಕು; ಜಿಲ್ಲಾ ಹಂತದಲ್ಲಿ ಇ.ಎಸ್.ಐ. ಆಸ್ಪತ್ರೆಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕ ಇಲಾಖೆಯಿಂದ ರಾಜ್ಯದ ವಿವಿಧೆಡೆ69ಚಿಕಿತ್ಸಾಲಯಗಳನ್ನು ತೆರೆಯಲು ಅನುಮತಿ ಕೋರಲಾಗಿದ್ದು, 19 ಕೇಂದ್ರಗಳಿಗೆ ಮಾತ್ರ ಅನುಮತಿ ದೊರೆತಿದೆ ಎಂದು ಸಚಿವ ಹೆಬ್ಬಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243