ದಿನದ ಸುದ್ದಿ
ಮುಂಗಾರು ಹಂಗಾಮಿಗೆ ಅಗತ್ಯ ಬಿತ್ತನೆಬೀಜ, ರಸಗೊಬ್ಬರ ದಾಸ್ತಾನು; ರೈತರಿಗೆ ಸಕಾಲದಲ್ಲಿ ವಿತರಣೆಗೆ ಕ್ರಮ : ಸಚಿವ ಬಿ.ಸಿ. ಪಾಟೀಲ್
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ನಿಗದಿತ ಗುಣಮಟ್ಟದ ಬಿತ್ತನೆಬೀಜ ಹಾಗೂ ರಸಗೊಬ್ಬರ ದಾಸ್ತಾನು ಇದ್ದು, ಸಕಾಲದಲ್ಲಿ ರೈತರಿಗೆ ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಟ್ಟೀಟ್ ಮಾಡಿರುವ ಅವರು, ಕಳಪೆ ಬಿತ್ತನೆಬೀಜ ಮತ್ತು ರಸಗೊಬ್ಬರ ಸರಬರಾಜು ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇಲಾಖೆಯ ಕಾರ್ಯಕ್ರಮಗಳನ್ನು ಅಧಿಕಾರಿಗಳು ರೈತರಿಗೆ ಸಮರ್ಪಕವಾಗಿ ತಲುಪಿಸಬೇಕು. ರಸಗೊಬ್ಬರವನ್ನು ಕಡ್ಡಾಯವಾಗಿ ಪಾಯಿಂಟ್ ಆಫ್ ಸೇಲ್ ಯಂತ್ರದ ಮೂಲಕ ವಿತರಿಸಬೇಕೆಂದು ಸೂಚಿಸಿದರು.
2022-23ನೇ ಸಾಲಿನಲ್ಲಿ ಪ್ರಸ್ತುತ ಪೂರ್ವ ಮುಂಗಾರು ಹಂಗಾಮಿನಲ್ಲಿ 5 ಲಕ್ಷ 38 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆಯಿದ್ದು, ಇಲಾಖೆ ಹೆಚ್ಚುವರಿಯಾಗಿ 7 ಲಕ್ಷ 56 ಸಾವಿರ ಕ್ವಿಂಟಾಲ್ ಬಿತ್ತನೆಬೀಜ ದಾಸ್ತಾನು ಮಾಡಿದೆ. ಈವರೆಗೆ 4 ಸಾವಿರದ 84ಕ್ವಿಂಟಾಲ್ ಬಿತ್ತನೆಬೀಜವನ್ನು ರೈತರಿಗೆ ಪೂರೈಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243