ದಿನದ ಸುದ್ದಿ
ಸರ್ಕಾರದಿಂದ ಜಿಲ್ಲೆಗೊಂದು ಗೋಶಾಲೆ ಸ್ಥಾಪನೆ
ಸುದ್ದಿದಿನ,ಶಿವಮೊಗ್ಗ: ರಾಜ್ಯದಲ್ಲಿ ಗೋವಿನ ಸಂಪನ್ಮೂಲಗಳನ್ನು ರಕ್ಷಿಸಲು, ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆಯನ್ನು ಜಾರಿಗೊಳಿಸಿದ್ದು, ಈ ಕಾಯ್ದೆಗೆ ಪೂರಕವಾಗಿ ಗೋಹತ್ಯೆಯನ್ನು ತಡೆಗಟ್ಟಲು ಮತ್ತು ಜಾನುವಾರುಗಳನ್ನು ಸಂರಕ್ಷಿಸಲು ಪ್ರತಿ ಜಿಲ್ಲೆಯಲ್ಲಿ ಒಂದು ಗೋಶಾಲೆಯನ್ನು ಸ್ಥಾಪಿಸಲು ಉದ್ದೇಶಿಸಿದೆ.
ಜಿಲ್ಲೆಯಲ್ಲಿ ಹಾಲಿ ಇರುವ ಗೋಶಾಲೆಯನ್ನು ಜಿಲ್ಲಾ ಗೋಶಾಲೆಯನ್ನಾಗಿಸಿ ವಿಸ್ತರಿಸುವ ಅಥವಾ ಪ್ರೋತ್ಸಾಹಿಸುವ ಸಂಬಂಧ ಈಗಾಗಲೇ ಶಿವಮೊಗ್ಗದಲ್ಲಿ ಅಸ್ತಿತ್ವದಲ್ಲಿರುವ ಗೋಶಾಲೆಗಳನ್ನು ನಡೆಸುತ್ತಿರುವ ಖಾಸಗಿ ಟ್ರಸ್ಟ್‍ನವರು ದಿ: 29/09/2021 ರೊಳಗಾಗಿ ಉಪನಿರ್ದೇಶಕರು, ಪಶುಪಾಲನಾ ಇಲಾಖೆ, ಶಿವಮೊಗ್ಗ ಇವರನ್ನು ಸಂಪರ್ಕಿಸಿ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಅಭಿಪ್ರಾಯ ನೀಡಬಹುದಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243