ದಿನದ ಸುದ್ದಿ
ಆದಿವಾಸಿಗಳಿಗೆ ಸಾಂಪ್ರದಾಯಿಕ ಮತಗಟ್ಟೆ ಸ್ಥಾಪನೆ
ಸುದ್ದಿದಿನ, ಬೆಂಗಳೂರು: ರಾಜ್ಯದ 9 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಆದಿವಾಸಿ ಜನಾಂಗದ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಅವರು ವಾಸಿಸುವ ಸ್ಥಳದಲ್ಲೇ ಪ್ರತ್ಯೇಕವಾಗಿ 40 ಸಾಂಪ್ರದಾಯಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಸಾಂಪ್ರದಾಯಿಕ ಮತಗಟ್ಟೆಗಳ ರಾಜ್ಯ ನೋಡಲ್ ಅಧಿಕಾರಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಆರ್.ರಾಜ್‌ಕುಮಾರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243