ದಿನದ ಸುದ್ದಿ

ದಾವಣಗೆರೆ | ಸಂಜೆ ಕಾಲೇಜಿನಲ್ಲಿ ‘ಕನ್ನಡ ಕಲರವ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ : ನಗರದ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕನ್ನಡ ಕಲರವ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜಣ್ಣ ಅವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ.ಮಂಜಣ್ಣನವರು ಸಂಜೆ ಕಾಲೇಜು ಉದ್ಯೋಗಸ್ಥರ ಪದವಿ ಕನಸಿಗೆ ಸಾಕಾರವಾಗಿದ್ದು, ಈ ಕಾಲೇಜಿನ ಅಡಿಯಲ್ಲಿ ಹಲವಾರು ಕ್ರಿಯಾಶೀಲ ಚಟುವಟಿಕೆಗಳು ನಡೆಯುತ್ತಿರುವುದು ಕಾಲೇಜಿನ ಪ್ರಗತಿಯನ್ನು ಸೂಚಿಸುತ್ತದೆ. ಇಂತಹ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ.ಕೆ.ನಾರಾಯಣಸ್ವಾಮಿ, ಸಂಜೆ ಕಾಲೇಜು ವಿಭಾಗದ ಮುಖ್ಯಸ್ಥರಾದ ಡಾ.ಮಂಜುನಾಥ್, ವೆಂಕಟೇಶ್ ಬಾಬು ಅತಿಥಿಗಳಾಗಿ ಆಗಮಿಸಿದ್ದರು. ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿ.ಕೆ.ಕೊಟ್ರಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಬೋಧಕರಾದ ಡಾ.ಹೇಮವತಿ, ಉಷಾ, ಅನೀಸ್ ಫಾತಿಮಾ, ಹಾಲೇಶ್, ಹೇಮಂತ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version