ದಿನದ ಸುದ್ದಿ
ಸಂಜೆ ಸುದ್ದಿ ಮುಖ್ಯಾಂಶಗಳು
ಸಂಜೆ ಸುದ್ದಿ ಮುಖ್ಯಾಂಶಗಳು
- ಯಾರು ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಪೋಸ್ಟಿಗೆ ಸಂಬಂಧಿಸಿದಂತೆ ನಡೆದಿರುವ ಕಲಹ ಕುರಿತು ಅವರು ಈ ಎಚ್ಚರಿಕೆ ನೀಡಿದ್ದಾರೆ.
- ಬೆಂಗಳೂರಿನ ಚಿತ್ರಕಲಾ ಪರಿಷತ್ ಆವರಣದಲ್ಲಿ ನಾಳೆ ಸಂಜೆ ಲೋಕ ನಾಯಕ ಜಯಪ್ರಕಾಶ ನಾರಾಯಣ ವಿಚಾರ ವೇದಿಕೆ ವತಿಯಿಂದ ಡಾ. ಜೀವರಾಜ್ ಆಳ್ವ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಸಂಸತ್ ಸದಸ್ಯರಾದ ರಮೇಶ್ ಜಿಗಜಿಣಗಿ, ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ. ಬಿ.ಎಲ್. ಶಂಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
- ಧಾರವಾಡ ಜಿಲ್ಲೆಯಲ್ಲಿ ಮನರೇಗಾ ಯೋಜನೆಯಡಿ ಆರಂಭಿಸಲಾಗಿರುವ ದುಡಿಯೋಣ ಬಾ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಅಭಿಯಾನದಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸಲಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಹೇಳಿದ್ದಾರೆ.
- ಮುಂಬೈನ ಡಿವೈಪಟೇಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇತ್ತೀಚಿನ ವರದಿ ಬಂದಾಗ ಪಂಜಾಬ್ ಕಿಂಗ್ಸ್ ತಂಡ 4.5ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 33ರನ್ ಗಳಿಸಿ ಆಡುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243