ಸಿನಿ ಸುದ್ದಿ
ಅಂದಿಗೂ ಹಿಟ್, ಎಂದೆಂದಿಗೂ ಹಿಟ್ ನಾಗರಹಾವು..!

ಚಿತ್ರ ಮಂದಿರ ಗಳ ಮುಂದೆ ರಾರಾಜಿಸುತ್ತಿವೆ ವಿಷ್ಣುದಾದಾ ಕಟೌಟ್..!
ನಾಲ್ಕು ದಶಕಗಳ ಹಿಂದೆ 35mm ನಲ್ಲಿ ತೆರೆಕಂಡಿದ್ದ ಕನ್ನಡದ ಅತ್ಯದ್ಭುತ ಲೆಜೆಂಡರೀ ಸಿನಿಮಾ ‘ನಾಗರಹಾವು’, ನಾಳೆ ಶುಕ್ರವಾರ ಜುಲೈ 20ರಂದು ಮತ್ತೆ ತೆರೆಕಾಣುತ್ತಿದೆ. ಈ ಬಾರಿ DI ಮತ್ತು 7.1 ಸರೌಂಡ್ ಸರೌಂಡ್ ನೊಂದಿಗೆ ತೆರೆಗೆ ಅಪ್ಪಳಿಸುತ್ತಿದೆ.
ಆಗಿನ ಕಾಲಕ್ಕೆ ವಿಷ್ಣುವರ್ಧನ್ ರಿಗೆ ದೊಡ್ಡ ಪ್ರಮಾಣದಲ್ಲಿ ಯಶಸ್ಸು-ಕೀರ್ತಿ ತಂದುಕೊಟ್ಟ ಚಿತ್ರ ‘ನಾಗರಹಾವು’ ರಾಮಾಚಾರಿಯ ಪಾತ್ರದ ವರ್ಣನೆ ಗೆ ಪದಗಳೇ ಸಾಲದು. ಅಷ್ಟು ಅದ್ಭುತವಾಗಿ ಆ ಪಾತ್ರ ವನ್ನ ತೆರೆಯ ಮೇಲೆ ಜೀವಂತಗೊಳಿಸಿದರು ವಿಷ್ಣು ದಾದಾ. ಮೇಷ್ಟ್ರ ಪಾತ್ರದಲ್ಲಿ ಅಶ್ವತ್, ನಾಯಕ ನಟಿ ಆರತಿ ಅಮೋಘ ಅಭಿನಯ, ಮಾರ್ಗರೇಟ್ ಳ ಅದ್ಭುತ ನಟನೆ, ಲೀಲಾವತಿಯವರ ನೈಜ ನಟನೆಯ.. ಇವೆಲ್ಲವೂ ಪುಟ್ಟಪ್ಪ ಕಣಗಾಲ್ ರ ನಿರ್ದೇಶನದಲ್ಲಿ ಅತ್ಯದ್ಭುತವಾಗಿ ಮೂಡಿ ಬಂದಿದೆ. ಈಶ್ವರಿ ಕಂಬೈನ್ಸ್ ರ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಚಿತ್ರದ ಹಾಡುಗಳು ಆನಂದ್ ಆಡಿಯೋ ದಲ್ಲಿ ಬಿಡುಗಡೆ ಯಾಗಿದ್ದು… ಸೂಪರ್ ಸೂಪರ್ ಹಿಟ್! ಒಂದೊಂದು ಹಾಡು ಎವರ್ಗ್ರೀನ್!
• ಹಿಸ್ಟರಿ ರಿಪೀಟ್! ಆಗಹೊರಟಿದ್ದು… ನಾಳೆ ‘ನಾಗರಹಾವು’ ತೆರೆಕಾಣುತ್ತಿದೆ. ಪ್ರೇಕ್ಷಕರಲ್ಲಿ ಬಹಳಷ್ಟು ಖುಷಿ ಹಾಗೂ ಉತ್ಸಾಹ ಕಳೆ ಕಟ್ಟಿದ್ದು, ಭಾರೀ ಬೇಡಿಕೆ ವ್ಯಕ್ತವಾಗಿದೆ.
• ಚಿತ್ರದ ಟಿಕೆಟ್ ಗಳು ಒಂದು ವಾರದ ಮುಂಚೆಯೇ ದೊರೆಯುತ್ತಿದ್ದು.. ಬುಕ್ಕಿಂಗ್ ಜೋರಾಗಿದೆ ಸಾಗಿದೆ.
• ಬೆಂಗಳೂರಿನ ವೀರೇಶ್, ನರ್ತಕಿ ಥಿಯೇಟರ್ ನಲ್ಲಿ ಷೋಗಳು ಫುಲ್ ಆಗಿವೆ!
• ಚಿತ್ರ ಮಂದಿರಗಳ ಮುಂದೆ ರಾರಾಜಿಸುತ್ತಿವೆ ವಿಷ್ಣು ದಾದಾರ ಕಟೌಟ್!
• ಹೊಸಾ ರೂಪದಲ್ಲಿ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೈಲಿಗಲ್ಲು ಬರೆದ ಚಿತ್ರ ನಾಳೆ ರೀ-ರಿಲೀಸ್! ಅಭಿಮಾನಿ ಗಳಲ್ಲಿ ಮುಗಿಯಲು ಮುಟ್ಟಿದ ಹರ್ಷೋಧ್ಗಾರ.
• ಇಡೀ ಕನ್ನಡ ಚಿತ್ರರಂಗವೇ ಈ ಚಿತ್ರದ ಬಿಡುಗಡೆಯ ಕಾದು ಕುಳಿತಿದ್ದು, ಚಿತ್ರದ ಬಗ್ಗೆ ತಮ್ಮ ಅಪೂರ್ವ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
• ಒಟ್ಟಾರೆ ನಾಗರಹಾವಿನ ಬಿಸಿಲಿನ ಸಪ್ಪಳ ನಾಳೆಯಿಂದ ಚಿತ್ರಮಂದಿರದಲ್ಲಿ ಶುರು.

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್‌ಬೌನ್ಸ್ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
-
ದಿನದ ಸುದ್ದಿ5 days ago
ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ
-
ದಿನದ ಸುದ್ದಿ4 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ7 days ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್‍ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ
-
ದಿನದ ಸುದ್ದಿ2 days ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
-
ದಿನದ ಸುದ್ದಿ1 day ago
ತುಂಬಿದ ಕೊಡ ತುಳುಕಿತಲೇ ಪರಾಕ್..!
-
ದಿನದ ಸುದ್ದಿ7 hours ago
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ