ರಾಜಕೀಯ

ಸಿದ್ದು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

Published

on

ಸುದ್ದಿದಿನ ಡೆಸ್ಕ್: 70ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.
ಮಾಜಿ ಸಿಎಂ ಸಿದ್ದು ಅವರಿಗೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಶುಭ ಕೋರಿದ್ದಾರೆ. “ಮಾಜಿ ಮುಖ್ಯಮಂತ್ರಿ, ಹಿರಿಯ ಮುಖಂಡ ಶ್ರೀ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೇವರು ದೀರ್ಘ ಆಯಸ್ಸು ಹಾಗೂ ಆರೋಗ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸಮ್ಮಿಶ್ರ ಸರ್ಕಾರವನ್ನು ಮುಂದೆ ಕೊಂಡೊಯ್ಯುವಲ್ಲಿ ಅವರ ಸಲಹೆಗಳು ಅಮೂಲ್ಯವಾದದ್ದು” ಎಂದಿದ್ದಾರೆ.
ಜತೆಗೆ ಫೇಸ್‌ಬುಕ್‌, ಟ್ವಿಟರ್ ಮೂಲಕ ಅವರ ಅಭಿಮಾನಿಗಳು ಶುಭಾಶಯ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಶುಭಾಶಯ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

Trending

Exit mobile version