ದಿನದ ಸುದ್ದಿ
ರಾಮ ಮಂದಿರ ನಿರ್ಮಾಣವಾಗುವುದು ಬಿಜೆಪಿಗೇ ಬೇಡವಾಗಿದೆ : ಸಿದ್ದರಾಮಯ್ಯ

ಸುದ್ದಿದಿನ, ಚಾಮರಾಜನಗರ : ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ, ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದಕ್ಕೆ ಮಾತ್ರ ನಮ್ಮ ವಿರೋಧವಿದೆ. 1992 ರಿಂದ ಇವತ್ತಿನವರೆಗೂ ಪ್ರತಿ ಚುನಾವಣೆಯಲ್ಲಿಯೂ ರಾಮಮಂದಿರ ಕಟ್ಟುತ್ತೇವೆ, ಮತ ನೀಡಿ ಎಂದು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ. ವಾಸ್ತವದಲ್ಲಿ ರಾಮಮಂದಿರ ನಿರ್ಮಾಣವಾಗುವುದು ಬಿಜೆಪಿಗೇ ಬೇಡವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಚಾಮರಾಜನಗರದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಕಳೆದ 5 ವರ್ಷಗಳಲ್ಲಿ ಮೋದಿಯವರು ತಮ್ಮ ಭಾಷಣದಲ್ಲಿ ಒಂದು ಕಡೆಯಾದರೂ ತಾವು ನೀಡಿದ್ದ ಭರವಸೆಗಳೆಷ್ಟು ಮತ್ತು ಎಷ್ಟು ಈಡೇರಿಸಿದ್ದೇನೆ ಎಂದು ಹೇಳಿದ್ದಾರೆಯೇ? ಧರ್ಮ, ದೇವರು ಈ ವಿಚಾರಗಳನ್ನು ಬಿಟ್ಟು ಹೇಳಲು ಅವರಲ್ಲಿ ಬೇರೇನೂ ಇಲ್ಲ. ಜನರ ಭಾವನೆಗಳೇ ಅವರ ಬಂಡವಾಳ. ಇಂಥ ಕೀಳುಮಟ್ಟದ ರಾಜಕಾರಣ ಮಾಡಲು ಅವರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.
ಸರ್ಜಿಕಲ್ ದಾಳಿಯನ್ನು ರಾಜಕೀಯ ಸ್ವಾರ್ಥ ಸಾಧನೆಗಾಗಿ ಬಳಸಿಕೊಳ್ಳುವುದು ದೇಶದ್ರೋಹದ ಕೆಲಸ. ಅದನ್ನೇ ಬಿಜೆಪಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರಗಳ ಆಡಳಿತದಲ್ಲಿ ಎರಡು ಬಾರಿ ಪಾಕಿಸ್ತಾನವನ್ನು ಯುದ್ಧದಲ್ಲಿ ಸೋಲಿಸಲಾಗಿತ್ತು, ಹತ್ತಾರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಲಾಗಿತ್ತು. ಅದನ್ನು ನಾವು ಎಂದಾದರೂ ರಾಜಕೀಯಕ್ಕೆ ಬಳಸಿಕೊಂಡಿದ್ದೇವೆಯೇ? ಎಂದರು.
ಬಿಜೆಪಿ ರಾಮಮಂದಿರ ಕಟ್ಟಲು ಊರೂರು ಸುತ್ತಿ ಇಟ್ಟಿಗೆ, ಕಲ್ಲು ಮತ್ತು ಹಣ ಸಂಗ್ರಹಿಸಿತ್ತು. ಅಂದು ಸಂಗ್ರಹಿಸಿದ್ದ ಇಟ್ಟಿಗೆ, ಕಲ್ಲುಗಳು ಅಯೋಧ್ಯೆಯನ್ನು ಮುಟ್ಟಲೇ ಇಲ್ಲ. ಆದರೆ ಜನರು ಕೊಟ್ಟ ಹಣ ಮಾತ್ರ ಭದ್ರವಾಗಿ ಬಿಜೆಪಿಯವರ ಜೇಬು ಸೇರಿತ್ತು ಇದುವರೆಗೂ ರಾಮ ಮಂದಿರ ಕಟ್ಟಲು ಸಂಗ್ರಹಿಸಿದ್ದ ಹಣದ ಲೆಕ್ಕ ಕೊಟ್ಟಿದ್ದಾರೆಯೇ? ಎಂದು ಪ್ರಶ್ನಿಸಿದರು.
ನನ್ನ 40 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ನರೇಂದ್ರ ಮೋದಿಯವರಂತೆ ಸುಳ್ಳು ಹೇಳುವ ಪ್ರಧಾನಿಯನ್ನೇ ಕಂಡಿಲ್ಲ. ಸ್ವಾತಂತ್ರ್ಯ ನಂತರ ಒಂದಾಗಿದ್ದ ಭಾರತೀಯ ಸಮಾಜವನ್ನು ಮತ್ತೆ ‘ಒಡೆದು ಆಳಲು’ ಬಿಜೆಪಿ ಪಕ್ಷ ಹಾತೊರೆಯುತ್ತಿದೆ. ಜಾತಿ-ಧರ್ಮಗಳ ನಡುವೆ ಹುಳಿಹಿಂಡಿ ಜನರನ್ನು ಪರಸ್ಪರ ಶತ್ರುಗಳನ್ನಾಗಿ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಇಲ್ಲಿನ ಸಂಸದರಾದ ಧ್ರುವನಾರಾಯಣ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳ ಕಿರುಹೊತ್ತಿಗೆಯನ್ನು ಜನರ ಮುಂದಿಟ್ಟಿದ್ದಾರೆ. ಜನರಿಂದ ಚುನಾಯಿತರಾದ ಪ್ರತಿಯೊಬ್ಬ ವ್ಯಕ್ತಿ ಕೂಡ ಇದನ್ನು ಅನುಸರಿಸಬೇಕಿದೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ5 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ4 days ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ