ರಾಜಕೀಯ
ಮೈಸೂರಿಗೆ ಪ್ರತಾಪ್ ಸಿಂಹ ನ ಕೊಡುಗೆ ಏನು ? : ಸಿದ್ದರಾಮಯ್ಯ ಕಿಡಿ

ಸುದ್ದಿದಿನ,ಮೈಸೂರು : ನಾನು ಮಹದೇವಪ್ಪ ಬೆಂಗಳೂರು ಮೈಸೂರು ರಸ್ತೆ ಅಭಿವೃದ್ಧಿ ಪಡಿಸುವಾಗ ಪ್ರತಾಪ್ ಸಿಂಹ ಎಲ್ಲಿದ್ದ. ಅವನ ಕೊಡುಗೆ ಮೈಸೂರಿಗೆ ಏನು.? ನಾವು ಮಾಡಿದ ಕೆಲಸವನ್ನು ತಾನು ಮಾಡಿದ್ದು ಎಂದು ಹೇಳಿ ತಿರುಗುತ್ತಿದ್ದಾನೆ ಎಂದು ಸಿದ್ದಾರಾಮಯ್ಯ ಕಿಡಿಕಾರಿದ್ದಾರೆ.
ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಪ್ರತಾಪ್ ಸಿಂಹ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಪ್ರತಾಪ್ ಸಿಂಹ ಮಾತ್ರವಲ್ಲ, ಬಿಜೆಪಿ ಯಾವ ಸಂಸದರು ಯಾವ ಕೆಲಸವನ್ನು ಮಾಡಿಲ್ಲ. ನಮ್ಮ ದೃವನಾರಾಯಣ್ ಜೊತೆಗೆ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿಯವರು ಚರ್ಚೆಗೆ ಬರುತ್ತಾರಾ..? ಶೋಭ ಕರಂದ್ಲಾಜೆ ಬರುತ್ತಾಳ, ನಳಿನ್ ಕುಮಾರ್ ಕಟೀಲ್ ಅನಂತ್ ಕುಮಾರ್ ಹೆಗಡಿ ಚರ್ಚೆಗೆ ಬರುತ್ತಾರಾ.? ಏನು ಮಾಡದೆ ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆ ವಿ.ಶ್ರೀನಿವಾಸ್ ಪ್ರಸಾದ್ ಚಾಮರಾಜನಗರದಿಂದ ಸ್ಪರ್ಧೆ ಮಾಡೋ ವಿಚಾರ ಯಾರು ಎಲ್ಲಿ ಬೇಕಾದರು ನಿಂತುಕೊಳ್ಳಲಿ. ಯಾರು ಬೇಕಾದರು ಅಭ್ಯರ್ಥಿಯಾಗಲು ಸ್ವತಂತ್ರರು. ಚುನಾವಣೆಗೆ ನಿಲ್ಲೊದು ಅವರವರ ವೈಯಕ್ತಿಕ ವಿಚಾರ. ಆ ಬಗ್ಗೆ ನಾನು ಏನನ್ನು ಹೇಳೋದಿಲ್ಲ ಎಂದು ವಿ.ಶ್ರೀನಿವಾಸ್ ಪ್ರಸಾದ್ಗೆ ಪರೋಕ್ಷವಾಗಿ ಸಿದ್ದರಾಮಯ್ಯ ಟಾಂಗ್ ನೀಡಿದರು.
ಸುಮಲತಾ ಸ್ಪರ್ಧೆ ಬಗ್ಗೆ ನಾನು ಮಾತನಾಡಲ್ಲ.ನಮ್ಮ ಪಾರ್ಟಿಯಿಂದ ಅವರು ನಿಲ್ಲೊಲ್ಲ. ಹಾಗಾಗಿ ಅವರ ಬಗ್ಗೆ ನಾನು ಮಾತನಾಡೊಲ್ಲ. ಸುಮಲತಾ ಈಗಲೂ ನಮ್ಮ ಪಾರ್ಟಿಯಲ್ಲಿ ಇದ್ದಾರೆ.ಆದ್ರೆ ನಮ್ಮ ಪಾರ್ಟಿಯಿಂದ ಅವರು ನಿಲ್ಲುತ್ತಿಲ್ಲ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿದ್ದೇವೆ. ಉಳಿದದ್ದು ಅವರಿಗೆ ಬಿಟ್ಟದ್ದು.ನಿನ್ನೆ ನಿಖಿಲ್ ಅಭ್ಯರ್ಥಿ ಅಂತ ಘೋಷಣೆ ವಿಚಾರ. ಕ್ಷೇತ್ರವನ್ನ ಅವರಿಗೆ ಬಿಟ್ಟಾಗಿದೆ. ಜೆಡಿಎಸ್ ಯಾರನ್ನ ಬೇಕಾದ್ರು ಕ್ಯಾಂಡಿಡೆಟ್ ಅಂತ ಹೇಳಲಿ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸದನದಲ್ಲಿ ಈ ಅಧಿಸೂಚನೆಗಳನ್ನು ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಗಳನ್ನಾಗಿ ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ ನಗರದ ದೊಡ್ಡಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಈಗಾಗಲೇ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಅಧಿನಿಯಮ-2025’ ಜಾರಿ ಮಾಡಲಾಗುವುದು. ರಾಜ್ಯದಲ್ಲಿ ವರ್ಷಕ್ಕೆ ಸುಮಾರು 4 ಕೋಟಿ ಸಿನಿಮಾ ಟಿಕೆಟ್ಗಳು ಮಾರಾಟವಾಗುತ್ತವೆ.
ಈ ಟಿಕೆಟ್ಗಳ ಮೇಲೆ ಸೆಸ್ ವಿಧಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆಸಲಾಗುತ್ತಿದೆ. ಇದಕ್ಕಾಗಿ ‘ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024’ ಅನ್ನು ರಚಿಸಲಾಗಿದೆ. ಇದರೊಂದಿಗೆ ಮನೆಗೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ‘ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025’ ರಚಿಸಲಾಗಿದೆ. ಈ ಎಲ್ಲಾ ಅಧಿನಿಯಮಗಳ ನಿಯಾವಳಿಗಳನ್ನು ರೂಪಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಅಧಿನಿಯಮಗಳನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗೆ 5 ವರ್ಷದಲ್ಲಿ 3 ಲಕ್ಷ ಕೋಟಿ ಖರ್ಚು
ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 56 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದೆ. ಈ ಮೊತ್ತ 5 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ತಲುಪಬಹುದು. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟೊಂದು ಮೊತ್ತದ ಹಣವನ್ನು ನೇರವಾಗಿ ಜನರ ಕಲ್ಯಾಣಕ್ಕಾಗಿ ವ್ಯಯಿಸುತ್ತಿಲ್ಲ. ರಾಜ್ಯದಲ್ಲಿ 30 ರಿಂದ 40 ಲಕ್ಷ ಅಸಂಘಟಿತ ಕಾರ್ಮಿಕರು ಇದ್ದು, ಕಾರ್ಮಿಕ ಇಲಾಖೆ 91 ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿದೆ. ಅಸಂಘಟಿತ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಜಾರಿ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 25,45,607 ಕಾರ್ಮಿಕರು, ದಾವಣಗೆರೆ ಜಿಲ್ಲೆಯಲ್ಲಿ 89,493 ಕಾರ್ಮಿಕರು ನೊಂದಣಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ, ಚಾಲಕರು, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್, ನಗದು, ಡಿಪೋ ಗುಮಾಸ್ತರು ಸೇರಿದಂತೆ, ಮೋಟಾರು ಕ್ಷೇತ್ರದಲ್ಲಿ ದುಡಿಯತ್ತಿರುವ ಎಲ್ಲಾ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.
ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶಿತ ದೃಷ್ಠಿಯಿಂದ ‘ಆಶಾದೀಪ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯಡಿ ಉದ್ಯೋಗದಾತ ಮಾಲಿಕರು ಪಾವತಿಸಿದ ಇ.ಎಸ್.ಐ ಮತ್ತು ಇ.ಪಿ.ಎಫ್ ವಂತಿಕೆ ಮರುಪಾವತಿ, ತರಬೇತಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಶಿಷ್ಯವೇತನ ಮರುಪಾವತಿ, ಹೊಸ ನೇಮಕಾತಿಗೊಂಡವರಿಗೆ ಪಾವತಿಸಿದ ವೇತನದ ಎರಡು ವರ್ಷಗಳ ಅವಧಿಗೆ ಪ್ರತಿ ಉದ್ಯೋಗಿಯ ಮಾಸಿಕ ತಲಾ 6000 ರೂ. ವೇತನವನ್ನು ಉದ್ಯೋಗದಾತರಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.
ಸರ್ಕಾರದಿಂದ ಖಾಸಗಿ ಕಂಪನಿಗಳು ನೀಡುವ ಇ.ಪಿ.ಎಫ್ಗಳನ್ನು ಪ್ರತ್ಯೇಕವಾಗಿ ಬ್ಯಾಂಕ್ ಖಾತೆಗಳನ್ನು ತೆರದು ನಿರ್ವಹಣೆ ಮಾಡುವಂತೆ ನಿಯಮ ರೂಪಿಸಲಾಗಿದೆ. ಉದ್ಯೋಗಿ, ಕಂಪನಿ ತೊರೆದ ಸಂದರ್ಭದಲ್ಲಿ ಈ ಹಣ ನೇರವಾಗಿ ಉದ್ಯೋಗಿಯ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಜಿಲ್ಲೆಯಲ್ಲಿ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರತಿಸಿ ಸ್ಮಾರ್ಟ್ಕಾರ್ಡ್ ವಿತರಿಸಲಾಗುತ್ತಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಯೋಜನೆ ಮತ್ತು ಸೌಲಭ್ಯಗಳನ್ನು ಸಮಪರ್ಕವಾಗಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಬಡವರ, ಕಾರ್ಮಿಕ ವರ್ಗದವರ ಕಷ್ಟಗಳ ಬಗ್ಗೆ ಅರಿತಿರುವ ಸಚಿವ ಸಂತೋಷ್ ಲಾಡ್ ಅವರು, ಅನೇಕ ಜನಕಲ್ಯಾಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾರ್ಮಿಕ ಇಲಾಖೆ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ. ಈ ಹಿಂದೆ ಕಾರ್ಮಿಕ ಇಲಾಖೆಯಲ್ಲಿ ಮಾತ್ರ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ ಸಚಿವ ಲಾಡ್ ಅವರಿಂದ ಪ್ರಸ್ತುತ ಮೇ 01ರಂದು ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತದೆ ಎಂದರು.
ವಿವಿಧ ಸೌಲಭ್ಯಗಳ ವಿತರಣೆ
ಕಾರ್ಯಕ್ರಮದಲ್ಲಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತ ಮಹಿಳೆ ಜಗಳೂರಿನ ಗೌರಮ್ಮನವರಿಗೆ ರೂ.5 ಲಕ್ಷ ಪರಿಹಾರ ಧನ, ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಮಕ್ಕಳಿಗೆ ರೂ.10,000 ಶೈಕ್ಷಣಿಕ ಧನಸಹಾಯದ ಚೆಕ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.
ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ ಸ್ವಾಗತಿಸಿದರು. ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಚೇತನ್ ಹಾಗೂ ಸಂಡಿಗರ ಕಲಾತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಹೊನ್ನಾಳಿ ಶಾಸಕ ಡಿ.ಜಿ.ಶಾಂತನೌಡ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ.ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10 ಸಾವಿರ ನಿವೇಶನ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 2 ಸಾವಿರದ 500 ಮನೆಗಳು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಕೂಡ ಅರ್ಹ ಫಲಾನುಭವಿಗಳಿಗೆ ಹಂಚಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ

ಸುದ್ದಿದಿನ,ದಾವಣಗೆರೆ:ಇದೇ 12 ರಂದು ಮಧ್ಯಾಹ್ನ 3 ಗಂಟೆಗೆ ನಗರದ ದೊಡ್ಡಬೂದಿಹಾಳ್ ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್ನಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ಸಂತೋಷ್.ಎಸ್.ಲಾಡ್ ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಘನುಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಧ ಶಾಮನೂರು.ಟಿ.ಬಸವರಾಜ್, ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ3 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ2 days ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ3 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ16 hours ago
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ
-
ದಿನದ ಸುದ್ದಿ3 days ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್
-
ದಿನದ ಸುದ್ದಿ2 days ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ