ರಾಜಕೀಯ
ಬ್ರೇಕಿಂಗ್ : ಸಿದ್ಧಾಂತ ಮಾತನಾಡೋ ಬಿಜೆಪಿಯಿಂದ ಹೀನ ರಾಜಕೀಯ: ಮಾಜಿ ಸಿಎಂ ಸಿದ್ದು ಗುಡುಗು
ಸುದ್ದಿದಿನ ಡೆಸ್ಕ್: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಹೀನ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಕೆಲಸ ಮಾಡಲು ಬಿಡದ ಬಿಜೆಪಿ ಅಧಿಕಾರಕ್ಕಾಗಿ ಹೀನ ಮಟ್ಟಕ್ಕೆ ಇಳಿದು ರಾಜಕೀಯ ಮಾಡುತ್ತಿದೆ. ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಈ ಕುರಿತು ಎರಡು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಬೆನ್ನಿಗೆ ನಿಂತು ಮಾತನಾಡಿದ್ದಾರೆ.
“ಸಿದ್ದಾಂತ ಮಾತನಾಡುವ ಬಿಜೆಪಿಯವರು ಅಧಿಕಾರಕ್ಕಾಗಿ ಹೀನ ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಚುನಾವಣೆಯಲ್ಲಿ ಸೋತವರು ವಿರೋಧ ಪಕ್ಷವಾಗಿ ಕೆಲಸ ಮಾಡಬೇಕು ಅದನ್ನು ಬಿಟ್ಟು ಸರ್ಕಾರವನ್ನು ಅಸ್ಥಿರಗೊಳಿಸುವ ಅನೀತಿಯುತ ಪ್ರಯತ್ನ ಮಾಡಬಾರದು. ರಾಜ್ಯದ ಜನ ಇದನ್ನು ಗಮನಿಸುತ್ತಾ ಇದ್ದಾರೆ, ಅವರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ” ಎಂದು ಎಚ್ಚಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ
“ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಮುಂಬೈಗೆ ಹೋಗಿಲ್ಲ, ಸರ್ಕಾರ ಸುಭದ್ರವಾಗಿದೆ. ನರೇಂದ್ರ ಮೋದಿಯವರು ಜನರ ಅಕೌಂಟ್‌ಗೆ ಹಾಕುತ್ತೇನೆ ಎಂದು ಹೇಳಿದ್ದ ಮೊತ್ತದ ನೂರು ಪಟ್ಟು ಹೆಚ್ಚು ಹಣ ನೀಡುತ್ತೇವೆ ಎಂದು ನಮ್ಮ ಶಾಸಕರಿಗೆ ಬಿಜೆಪಿಯವರು ಆಮಿಷವೊಡ್ಡುತ್ತಿದ್ದಾರೆ, ಆದರೆ ನಮ್ಮ ಶಾಸಕರು ಆಮಿಷಗಳಿಗೆ ಬಲಿಯಾಗಿ ಕೋಮುವಾದಿಗಳೊಂದಿಗೆ ಕೈಜೋಡಿಸುವುದಿಲ್ಲ.” ಎಂದು ಹೇಳಿದ್ದಾರೆ.
ಸಿದ್ದಾಂತ ಮಾತನಾಡುವ ಬಿಜೆಪಿಯವರು ಅಧಿಕಾರಕ್ಕಾಗಿ ಹೀನ ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಚುನಾವಣೆಯಲ್ಲಿ ಸೋತವರು ವಿರೋಧ ಪಕ್ಷವಾಗಿ ಕೆಲಸ ಮಾಡಬೇಕು ಅದನ್ನು ಬಿಟ್ಟು ಸರ್ಕಾರವನ್ನು ಅಸ್ಥಿರಗೊಳಿಸುವ ಅನೀತಿಯುತ ಪ್ರಯತ್ನ ಮಾಡಬಾರದು. ರಾಜ್ಯದ ಜನ ಇದನ್ನು ಗಮನಿಸುತ್ತಾ ಇದ್ದಾರೆ, ಅವರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ
— Siddaramaiah (@siddaramaiah) September 20, 2018