ರಾಜಕೀಯ
ಕೋಟೆನಾಡಿನಲ್ಲಿ ಕಾಂಗ್ರೆಸ್ ಛಿದ್ರ: ನೈತಿಕ ಹೊಣೆ ಹೊರುವರೇ ಮಾಜಿ ಸಚಿವ ಆಂಜನೇಯ ?

ಸುದ್ದಿದಿನ, ಚಿತ್ರದುರ್ಗ: ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಜಿಲ್ಲೆ ಈಗ ಕೈ ತಪ್ಪಿದೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಚಳ್ಳಕೆರೆ ಹೊರತು ಪಡಿಸಿ ಐದರಲ್ಲಿ ಕಾಂಗ್ರೆಸ್ ಅಕ್ಷರಶಃ ಮಾಕಾಡೆ ಮಲಗಿದೆ.
ಆ.31ರಂದು ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಚಿತ್ರದುರ್ಗ ಮತ್ತು ಹೊಸದುರ್ಗದಲ್ಲಿ ಕೈ ಛಿದ್ರವಾಗಿದೆ. ಚಳ್ಳಕೆರೆ ನಗರಸಭೆಯಲ್ಲಿ ಮಾತ್ರ ಸರಳ ಬಹುಮತ ಪಡೆಯುವ ಮೂಲಕ ಕಾಂಗ್ರೆಸ್ ತನ್ನ ಕೊನೆಯ ಉಸಿರು ಉಳಿಸಿಕೊಂಡಿದೆ.
ಸದ್ಯದ ಕಾಂಗ್ರೆಸ್‍ನ ಈ ಸ್ಥಿತಿಗೆ ಕಾರಣ ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ ಎಚ್.ಆಂಜನೇಯ ಕಾರಣ ಎಂಬ ಆರೋಪ ಕೇಳಿಬರುತ್ತಿವೆ. ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಈ ಮಾತು ಕೇಳಿ ಬರುತ್ತಿವೆ. ಇದಕ್ಕೆ ಕಾರಣ ಐದು ವರ್ಷ ಅಧಿಕಾರದಲ್ಲಿದ್ದರೂ ಕೂಡ ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಲಿಲ್ಲ. ನಿಷ್ಠಾವಂತ ಕಾರ್ಯಕರ್ತರಿಗೆ ಮನ್ನಣೆ ನೀಡಲಿಲ್ಲ ಎಂಬ ಆರೋಪಗಳು ಸ್ವ ಪಕ್ಷದವರಿಂದಲೇ ಕೇಳಿಬರುತ್ತಿವೆ.
Read This: ಮಾಜಿ ಸಚಿವ ಎಚ್.ಆಂಜನೇಯ ಪ್ರತಿಷ್ಠೆ ಮಣ್ಣುಪಾಲು !
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೇರಿದಂತೆ ವಿವಿಧ ಸ್ಥಾನಗಳಿಗೆ ಸಮರ್ಥರಿಗೆ ಅವಕಾಶ ನೀಡಲಿಲ್ಲ. ನಿಗಮ ಮಂಡಳಿ ಸೇರಿದಂತೆ ಕೆಲವು ಸ್ಥಾನಗಳಿಗೆ ತಮಗೆ ಬೇಕಾದವರಿಗೆ ಅವಕಾಶ ನೀಡಿದರು. ಚುನಾವಣೆ ಸಂದರ್ಭದಲ್ಲಿ ಗೆಲ್ಲುವವರನ್ನು ನೋಡಿ ಪ್ರೋತ್ಸಾಹ ನೀಡಲಿಲ್ಲ ಎಂದು ಆಪಾದನೆ ಕೂಡ ಮಾಜಿ ಸಚಿವರ ಮೇಲಿದೆ.
ಅನ್ಯರಿಗೆ ಮಣೆ ನೀಡಿದ್ದು ಸಮಸ್ಯೆಗೆ ಕಾರಣ
ಸಂಸದರ ಸ್ಥಾನಕ್ಕೆ ಜಿಲ್ಲೆಯಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿತ್ತು. ಆದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಬೇರೆ ಜಿಲ್ಲೆಯಿಂದ ಬಂದ ನಾಯಕರಿಗೆ ಮಾಜಿ ಸಚಿವ ಆಂಜನೇಯ ಅವಕಾಶ ನೀಡಿದ್ದರು. ಇದರಿಂದ ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿತ್ತು. ಈ ಕಾರಣಕ್ಕೆ ಇತ್ತೀಚಿಗೆ ನಡೆದ ಚುನಾವಣೆಗಳಲ್ಲಿ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಲು ಹಿಂದೇಟು ಹಾಕಿದರು ಎಂಬ ಮಾತು ಕೇಳಿ ಬರುತ್ತಿವೆ.
Read This : ‘ಸೂಟು-ಬೂಟಿನ ಸರದಾರ’ನಂತೆ ಯೂರೋಪ್ ಪ್ರವಾಸಕ್ಕೆ ತೆರಳಿದ ಸಿದ್ದು..!
ಪ್ರಮುಖ ಮುಖಂಡರ ಕಡಗಣನೆ
ಮಾದಿಗ ಸಮುದಾಯದ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಯಾದವ ಸಮುಯಾದ ಉಮಾಪತಿ, ಡಿ.ಟಿ.ವೆಂಕಟೇಶ್ ಹಾಗೂ ಇನ್ನಿತರ ಸಮುದಾಯಗಳಿಗೆ ಸೇರಿದ ಪ್ರಮುಖ ಮುಖಂಡರನ್ನು ಕಡೆಗಣಿಸಿದ್ದೂ ಕೂಡ ಕಾಂಗ್ರೆಸ್ ಈ ಸ್ಥಿತಿಗೆ ಕಾರಣವಾಯಿತು ಎಂದು ಹೇಳಲಾಗುತ್ತಿದೆ. ಇದರಿಂದ ಕೆಲವು ಮುಖಂಡರು ಬಹಿರಂಗವಾಗಿಯೇ ಮಾಜಿ ಸಚಿವ ಆಂಜನೇಯ ವಿರುದ್ಧ ಸಭೆ ನಡೆಸಿದ್ದುಂಟು.
ಲೋಕಸಭೆ ಸ್ಥಾನ ಕೈ ತಪ್ಪುವ ಭೀತಿ
ಸದ್ಯ ಜಿಲ್ಲೆಯಲ್ಲಿ ಐದು ವಿಧಾನಸಭೆ, ಕೆಲವು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‍ಗೆ ಈಗ ಲೋಕಸಭೆ ಸ್ಥಾನ ಕೈ ತಪ್ಪುವ ಭೀತಿ ಎದುರಾಗಿದೆ. ಹಾಲಿ ಸಂಸದರಿಗೆ ಟಿಕೆಟ್ ಪಕ್ಕಾ ಆಗಿದ್ದು, ಈ ಸಾರಿ ಗೆಲವು ಕಷ್ಟ ಎಂಬ ಮಾತು ಕೇಳಿಬರುತ್ತಿವೆ. ಒಟ್ಟಾರೆ ಮಾಜಿ ಸಚಿವ ಎಚ್.ಆಂಜನೇಯ ಅವರು ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಷಕ್ಕೆ ಸಮರ್ಥವಾಗಿ ದುಡಿಸಿಮಕೊಳ್ಳದಿರುವುದಕ್ಕೆ ಇಂದು ಕೋಟೆನಾಡಿನಲ್ಲಿ ಮರೆಯಾಗುವ ಲಕ್ಷಣ ಗೋಚರಿಸುತ್ತಿವೆ.

ರಾಜಕೀಯ
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.
29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.
ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಕ್ರೀಡೆ7 days ago
ಭಾರತ ಟಿ20ಐ ಪಂದ್ಯಾವಳಿಗೆ ತಂಡ ಪ್ರಕಟಿಸಿದ ಬಿಸಿಸಿಐ
-
ಲೈಫ್ ಸ್ಟೈಲ್6 days ago
ವೀರ್ಯಾಣು ಬಲವೃದ್ಧಿಗೆ ಇಲ್ಲಿವೆ ಉಪಾಯಗಳು..!
-
ಲೈಫ್ ಸ್ಟೈಲ್7 days ago
ರೆಸಿಪಿ | ಮನೇಲೇ ಮಾಡಿ ಜಿಲೇಬಿ
-
ಭಾವ ಭೈರಾಗಿ7 days ago
ಕವಿತೆ | ಅವಳು
-
ಅಂತರಂಗ6 days ago
ಅನಾಥರನ್ನಾಗಿಸದ ಅಂತಿಮ ಸಂಗಾತಿ
-
ದಿನದ ಸುದ್ದಿ6 days ago
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ
-
ರಾಜಕೀಯ6 days ago
ಜನರನ್ನು ಕಷ್ಟಕ್ಕೆ ದೂಡಿ ಮೋದಿ ಸರ್ಕಾರ ಲಾಭಗಳಿಸುತ್ತಿದೆ : ಸೋನಿಯಾ ಗಾಂಧಿ ಕಿಡಿ
-
ಲೈಫ್ ಸ್ಟೈಲ್6 days ago
ಜಾನುವಾರುಗಳ ಲೋಹ ಕಾಯಿಲೆ