ದಿನದ ಸುದ್ದಿ
ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ
ಸುದ್ದಿದಿನ,ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಎಂ. ಜೆ. ಅಪ್ಪಾಜಿ ಗೌಡ ಅವರು ಕೊರೋನಾ ಸೋಂಕಿನಿಂದ ಬುಧವಾರ ತಡರಾತ್ರಿ 12 ಗಂಟೆಗೆ ಮೃತಪಟ್ಟಿದ್ದಾರೆ.
ತೀವ್ರ ಅಸ್ವಸ್ಥರಾಗಿದ್ದ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಕಲವೇ ಗಂಟೆಯಲ್ಲಿ ಸಾವು ಕಂಡಿದ್ದಾರೆ. ಇವರು ಭದ್ರಾವತಿ ವಿಧಾನಸಭೆ ಕ್ಷೇತ್ರವನ್ನು ಹಲವು ಬಾರಿ ಪ್ರತಿನಿಧಿಸಿದ್ದರು.
2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ. ಕೆ. ಸಂಗಮೇಶ್ ವಿರುದ್ಧ ಅವರು ಸೋಲು ಕಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243