Connect with us

ದಿನದ ಸುದ್ದಿ

ಅಂತಿಮ ವರ್ಷದ ಪದವಿ ಪರೀಕ್ಷೆ ರದ್ದುಗೊಳಿಸುವಂತೆ ದಾವಣಗೆರೆ ಜಿಲ್ಲಾ ಎನ್.ಎಸ್.ಯು.ಐ ಆಗ್ರಹ

Published

on

ಸುದ್ದಿದಿನ,ದಾವಣಗೆರೆ : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ಪರೀಕ್ಷೆಗಳನ್ನು ಮಾತ್ರ ನಡೆಸಲು ನಿರ್ಧರಿಸಿರುವ ರಾಜ್ಯ ಸರಕಾರದ ನಿರ್ಣಯವನ್ನು ದಾವಣಗೆರೆ ಎನ್.ಎಸ್.ಯು.ಐ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಎನ್.ಎಸ್.ಯು.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಪಾಟೀಲ್ ಅವರು ದೇಶ ಮತ್ತು ರಾಜ್ಯದಲ್ಲಿ ಕರೋನಾ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿರುವುದರಿಂದ, ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಯಾವುದೇ ಪರೀಕ್ಷೆಯು ಆನ್ಲೈನ್ ಅಥವಾ ಆಫ್ಲೈನ್ ಆಗಿರಲಿ ವಿದ್ಯಾರ್ಥಿ ಸಮುದಾಯಕ್ಕೆ ಮಾಡುವ ಅನ್ಯಾಯವಾಗುತ್ತದೆ.

ಸರ್ಕಾರ ತಳ ಮಟ್ಟದ ವಾಸ್ತವಿಕತೆಯನ್ನು, ವಿದ್ಯಾರ್ಥಿಗಳ ಒತ್ತಾಯವನ್ನು ಅರ್ಥಮಾಡಿಕೊಳ್ಳಬೇಕು.
ರಾಜ್ಯ ಹಾಗೂ ದೇಶದ ಆಡಳಿತ ವರ್ಗ ಲಕ್ಷಾಂತರ ವಿದ್ಯಾರ್ಥಿಗಳ ಧ್ವನಿಗೆ ಒಗೊಟ್ಟು, ಪ್ರಸ್ತುತ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಂತೆ ಒತ್ತಾಯಿಸದಂತೆ ಅವರು ಆಗ್ರಹಿಸಿದ್ದಾರೆ.

ಕೋರೋನಾ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ಪ್ರಸ್ತುತ ಯಾವುದೇ ವಿಧಾನಸಭಾ ಅಧಿವೇಶನವಾಗಲಿ ನಡೆಸುತ್ತಿಲ್ಲ. ಚಲನಚಿತ್ರ ಮಂದಿರಳು ತೆರೆದಿಲ್ಲ. ಕನಿಷ್ಠ ಸಂಖ್ಯೆಯ ಜನರನ್ನು ಸೇರಿಸಿ ಮದುವೆ, ಶುಭ ಸಮಾರಂಭಗಳನ್ನು ನಡೆಸಲಾಗುತ್ತಿಲ್ಲ ಆದರೆ ಸರಕಾರ ಅಮಾಯಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಒತ್ತಡಹೇರುತ್ತಿರುವುದು ಎಷ್ಟು ಸರಿ? ಯುಜಿಸಿ ಇಲಾಖೆ ವಿದ್ಯಾರ್ಥಿಗಳ ಜೀವನದ ತಮ್ಮ ಗುಪ್ತ ಉದ್ದೇಶಗಳಿಗಾಗಿ ವಿದ್ಯಾರ್ಥಿಗಳ ಮೇಲೆ ಬಲ ಪ್ರಯೋಗವನ್ನು ಮಾಡಲು ಬಯಸಿದೆ ಇದು ಖಂಡನೀಯವಾಗಿದೆ.

ಪ್ರಥಮ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳನ್ನು ಉತ್ತೇಜಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ನಾವು ಸ್ವಾಗತಿಸುತ್ತಿದ್ದಂತೆ, ಅಂತಿಮ ವರ್ಷದಲ್ಲಿ ವಿದ್ಯಾರ್ಥಿಗಳು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸುತ್ತಾರೆ ಎಂದು ಗಮನಿಸಿದ ಕಾರಣ ಹಿಂದಿನ ವರ್ಷದ ಸಾಧನೆಯ ಆಧಾರದ ಮೇಲೆ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು 10% ಹೆಚ್ಚುವರಿ ಅಂಕಗಳೊಂದಿಗೆ ಉತ್ತೇಜಿಸಲು ನಾವು ಸರ್ಕಾರವನ್ನು ಎನ್.ಎಸ್.ಯು.ಐ ಸರಕಾರವನ್ನು ಒತ್ತಾಯಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending