ದಿನದ ಸುದ್ದಿ
ವರಿಷ್ಠರ ಸೂಚನೆ ಮೇರೆಗೆ ಸಂಪುಟ ವಿಸ್ತರಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ದಕ್ಷ, ಜನಪರ ಆಡಳಿತ ಮಾಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಜಾನ್, ಹಿಜಾಬ್, ಹಲಾಲ್ ವಿಷಯಗಳನ್ನು ಸೌಹಾರ್ದಯುತವಾಗಿ, ಕಾನೂನಾತ್ಮಕವಾಗಿ ಬಗೆಹರಿಸಲಾಗಿದೆ.
ನ್ಯಾಯಸಮ್ಮತವಾಗಿ ಸರ್ವೋಚ್ಛ ನ್ಯಾಯಾಲಯ ಹಾಗೂ ಉಚ್ಛನ್ಯಾಯಾಲಯ ನೀಡಿರುವ ಆದೇಶದಂತೆ ಕ್ರಮ ವಹಿಸಲಾಗಿದೆ. ಅದರ ಚೌಕಟ್ಟಿನಲ್ಲಿ ದಕ್ಷವಾಗಿ ನಿಭಾಯಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಸರ್ವೋಚ್ಛ ನ್ಯಾಯಾಲಯದ ಆದೇಶದ ನಂತರ ವಿಧಾನಪರಿಷತ್ ಮತ್ತು ರಾಜ್ಯಸಭಾ ಚುನಾವಣೆ ಸದ್ಯಕ್ಕೆ ಪ್ರಕ್ರಿಯೆ ಜಾರಿಯಲ್ಲಿದೆ. ನಿನ್ನೆ ಕೋರ ಕಮಿಟಿ ಸಭೆ ನಡೆದಿದೆ. ನಾಳೆ ಅಥವಾ ನಾಡಿದ್ದು ವರಿಷ್ಠರೊಂದಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಲಾಗುವುದು. ಅವರ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243