ದಿನದ ಸುದ್ದಿ

ಹೊಲಿಗೆ ಯಂತ್ರ ಸೌಲಭ್ಯ ನೀಡುವ ಅರ್ಜಿ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಶ್ರವಣದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ 15 ಹೊಲಿಗೆ ಯಂತ್ರಗಳನ್ನು ಉಚಿತವಾಗಿ ವಿತರಿಸಲು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜ.23 ಕೊನೆಯ ದಿನವನ್ನಾಗಿ ನಿಗದಿಪಡಿಸಲಾಗಿತ್ತು. ಆದರೆ ಇದೀಗ ಅರ್ಜಿ ಅವಧಿಯನ್ನು ಜ.30 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಶೇ.40 ಕ್ಕಿಂತ ಹೆಚ್ಚಿನ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಯು ಕನಿಷ್ಟ 10 ವರ್ಷಗಳು ಕರ್ನಾಟಕ ವಾಸಿಯಾಗಿದ್ದು ಸಕ್ಷಮ ಪ್ರಾಧಿಕಾರದಿಂದ ವಾಸಸ್ಥಳ ದೃಢೀಕರಣ ಪತ್ರ ಹೊಂದಿರಬೇಕು. ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡಿರಬೇಕು. ಟೈಲರಿಂಗ್ ವೃತ್ತಿಗೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸಬೇಕು. ಆದಾಯದ ಮಿತಿ ಇರುವುದಿಲ್ಲ. ಬೇರೆ ಯಾವುದೇ ಯೋಜನೆಯಡಿ ಹೊಲಿಗೆ ಯಂತ್ರ ಪಡೆಯದೇ ಇರುವ ಬಗ್ಗೆ ನೋಟರಿಯಿಂದ ದೃಢೀಕರಿಸಿದ ಪ್ರಮಾಣಪತ್ರ ಒದಗಿಸತಕ್ಕದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-263939/263936ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಿ.ಎಸ್.ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version