ದಿನದ ಸುದ್ದಿ
ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನ ರಾಜ್ಯ ಸರ್ಕಾರದ ಅಧಿಕಾರಿ/ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ತಮ್ಮ ನಾಮ ನಿರ್ದೇಶನಗಳನ್ನು ಆನ್‍ಲೈನ್ ಮೂಲಕ ಸಲ್ಲಿಸುವ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ನಾಮನಿರ್ದೇಶನವನ್ನು ನ.30 ರೊಳಗೆ ಸಲ್ಲಿಸುವಂತೆ ನಿಗದಿಗೊಳಿಸಲಾಗಿತ್ತು. ಇದೀಗ ಈ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನವನ್ನು ಸಲ್ಲಿಸಬಯಸುವವರು ಜಾಲತಾಣ ಅಥವಾ
http://dparar.karnataka.gov.in/ ಅಥವಾ http://sarvothammawards.karnataka.gov.in/
ಮೂಲಕ ಮಾತ್ರ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243