ಲೈಫ್ ಸ್ಟೈಲ್
ಸೀರೆಗಳ ಮೇಲೂ ಸೋಷಿಯಲ್ ಮೀಡಿಯಾ ಎಫೆಕ್ಟ್! ಫೇಸ್ಬುಕ್ ಸೀರೆ! ಗೂಗಲ್ ಸೀರೆ ಗಳ ಕಮಾಲ್!

ರುಂಗುರಂಗೀನ್ ಫ್ಯಾಷನ್ ದುನಿಯಾದಲ್ಲಿ ದಿನಕ್ಕೊಂದು ಹೊಸಾ ಫ್ಯಾಷನ್ ಟ್ರೆಂಡ್ ಆಗುತ್ತದೆ. ಇಂತಹದೊಂದು ಸ್ಟೈಲ್ ಸ್ಟೇಟ್ ಮೆಂಟ್ ಸಾರುವ “ಟಾಕಿಂಗ್ ಸ್ಯಾರೀ ” ಟ್ರೆಂಡ್ ಸೃಷ್ಟಿ ಆಗಿದೆ. ನ್ಯೂಸ್ ಪೇಪರ್-ಮ್ಯಾಗಜಿನ್ ಸೀರೆಗಳಂತೆಯೇ ಟಾಕಿಂಗ್ ಸೀರೆಗಳ ಮೇಲೂ ಪದಗಳು ಮುದ್ರಿತ ವಾಗಿದ್ದು.. ಟೀ ಶರ್ಟ್ ಗಳ ಮೇಲೆ ಕಾಣ ಸಿಗುವ ವಾಕ್ಯ ಗಳು ಸೀರೆಗಳ ಮೇಲೂ ಕಾಣಸಿಗುತ್ತವೆ..
ಫೇಸ್ಬುಕ್ ಸೀರೆ!
ಇಷ್ಟೇ ಅಲ್ಲ, ಸೋಷಿಯಲ್ ಮೀಡಿಯಾ ದ ಫೇಸ್ಬುಕ್, ಇಂಸ್ಟಾಗ್ರಾಂ, ಟ್ವಿಟ್ಟರ್…ಜಿ ಮೇಲ್.. ಹೀಗೆ ಸೋಷಿಯಲ್ ನೆಟ್ ವರ್ಕ್ ನ ಗುಂಪಿನ ಸೀರೆಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ .
ಸ್ಮೈಲೀ ಸೀರೆ
ಸ್ಮೈಲೀ ಗಳೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಮೊಬೈಲ್ ನಲ್ಲಿ ಕಾಣಸಿಗುವ ಸ್ಮೈಲೀ ಗಳ ಮುದ್ರಿತ ಸೀರೆ ಈಗ ಎಲ್ಲೆಲ್ಲೂ ವೈರಲ್!
ಗೂಗಲ್ ಸೀರೆ
ಅಂತರ್ಜಾಲದಲ್ಲಿ ದೊಡ್ಡ ಅಲೆ ಸೃಷ್ಟಿಸಿದ ಗೂಗಲ್ ಸೀರೆ ಈಗ ಅದೇ ಅಂತರ್ಜಾಲದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
ವಾಟ್ಸ್ ಅಪ್ ಸೀರೆ ಕ್ರೇಜ್!
ವಾಟ್ಸ್ ಅಪ್ ಕ್ರೇಜ್ ಜನರಲ್ಲಿ ಹೆಚ್ಚಿರೊದನ್ನ ಅರಿತ ಸೀರೆ ತಯಾರಕರು ವಾಟ್ಸ್ ಅಪ್ ಲೋಗೋ ಇರುವ ಸೀರೆಗಳನ್ನ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ. ಬಿಸಿ ತುಪ್ಪದಂತೆ ಈ ಸೀರೆಗಳ ಸೇಲ್ಸ್ ಕೂಡಾ ಹೆಚ್ಚಿದೆ.
ಒಟ್ಟಿನಲ್ಲಿ ಸೋಷಿಯಲ್ ಮೀಡಿಯಾ ಎಫೆಕ್ಟ್ ಮಾನಿನಿಯರ ಸೀರೆ ಲೋಕದಲ್ಲೂ ಧೂಳೆಬ್ಬಿಸಿದ್ದು, ಸೀರೆ ವ್ಯಾಪಾರಿಗಳ ಬೊಕ್ಕಸವೂ ಫುಲ್, ಮಹಿಳಾಲೋಕವೂ ಖುಷ್!

ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ, ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.
ತರಬೇತಿ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿ ವಸತಿಯುತವಾಗಿದ್ದು, ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಗೆ ಸಂಪರ್ಕಿಸಬಹುದು ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
-
ದಿನದ ಸುದ್ದಿ5 days ago
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ
-
ದಿನದ ಸುದ್ದಿ7 days ago
ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ
-
ದಿನದ ಸುದ್ದಿ2 days ago
ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್
-
ದಿನದ ಸುದ್ದಿ5 days ago
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ
-
ದಿನದ ಸುದ್ದಿ4 days ago
ಕವಿತೆ | ಮತ್ತಿನ ಕುಣಿಕೆ
-
ದಿನದ ಸುದ್ದಿ2 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ
-
ದಿನದ ಸುದ್ದಿ1 day ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ