Connect with us

ದಿನದ ಸುದ್ದಿ

ಪಾತಾಳ ಮುಟ್ಟಿರುವ ಆರ್ಥಿಕ ಸ್ಥಿತಿ ಮೇಲೆತ್ತುವ ಇಚ್ಛಾಶಕ್ತಿ ಕೇಂದ್ರ ವಿತ್ತ ಸಚಿವರಿಗಿಲ್ಲ : ಸಿದ್ದರಾಮಯ್ಯ

Published

on

ಸುದ್ದಿದಿನ,ಬೆಂಗಳೂರು : ಕಳೆದ ಬಾರಿಯ ಕೇಂದ್ರದ ಬಜೆಟ್ ಗಾತ್ರ ರೂ.27 ಲಕ್ಷ ಕೋಟಿಗಳಿತ್ತು, ಈ ಬಾರಿ ರೂ.30 ಲಕ್ಷದ 42 ಸಾವಿರ ಕೋಟಿಗೆ ಏರಿಕೆ ಕಂಡಿದೆ. ನೇರ ತೆರಿಗೆ ಸಂಗ್ರಹ ಕಡಿಮೆಯಾದ ಕಾರಣ ಕಳೆದ ಬಾರಿ ಸುಮಾರು ಎರಡು ಲಕ್ಷ ಕೋಟಿ ಹಣ ಕೊರತೆಯಾಗಿತ್ತು. ಕೇಲವ ರೂ.25 ಲಕ್ಷ ಕೋಟಿಗಳಷ್ಟು ಮಾತ್ರ ಖರ್ಚು ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರುು.

ಶನಿವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಮಂಡಿಸಿದ ಬಜೆಟ್ ಉದ್ದೇಶಿಸಿ ಮಾತನಾಡಿದ ಅವರು, ಎರಡನೇ ಬಾರಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದಾಗ ದೇಶದ ಆದಾಯವನ್ನು 5 ಟ್ರಿಲಿಯನ್ ಡಾಲರ್‌ಗೆ ಏರಿಸುವುದಾಗಿ ಭರವಸೆ ನೀಡಿದ್ದರು. ಇಂದು ದೇಶದ ಜಿಡಿಪಿ 2.5 ರಷ್ಟಿದೆ, ಈ ಪರಿಸ್ಥಿತಿಯಲ್ಲಿ ಮೋದಿಯವರ ಭರವಸೆ ಈಡೇರುವುದು ಕನಸಿನ ಮಾತು.

ಪ್ರಸಕ್ತ ಬಜೆಟ್‌ನಲ್ಲಿ ದೇಶದ ಜಿಡಿಪಿಯನ್ನು 6% ಗೆ ಏರಿಸುವ ಕುರಿತು ವ್ಯಾಖ್ಯಾನಿಸಲಾಗಿದ್ದರೂ, ಅದರ ಈಡೇರಿಕೆಗೆ ಬೇಕಾದಂತಹ ಪರಿಣಾಮಕಾರಿ ಕಾರ್ಯಸೂಚಿಗಳೇನು ಕಂಡುಬರುತ್ತಿಲ್ಲ. ಹಾಗಾಗಿ ಇದೂ ಕೂಡ ಭರವಸೆಯಾಗಿಯೇ ಉಳಿಯಲಿದೆ. ಪಾತಾಳ ಮುಟ್ಟಿರುವ ಆರ್ಥಿಕ ಸ್ಥಿತಿಯನ್ನು ಮೇಲೆತ್ತಲು ಬೇಕಾದ ಇಚ್ಛಾಶಕ್ತಿ ಕೇಂದ್ರ ವಿತ್ತ ಸಚಿವರಲ್ಲಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಣಕಾಸು ಸಚಿವರು ಕೃಷಿ ಕ್ಷೇತ್ರದ ಅಭಿವೃದ್ದಿಗೆ 16 ಅಂಶಗಳ ಕಾರ್ಯಕ್ರಮವನ್ನು ಘೋಷಿಸಿದ್ದಾರೆ. ಇದರಲ್ಲಿ 9 ಅಂಶಗಳು ರೈತರ ಜಮೀನನ್ನು ಖಾಸಗಿ ಕಂಪೆನಿಗಳ ಸುಪರ್ದಿಗೆ ಒಳಪಡಿಸುವಂತಿವೆ. ಉದಾಹರಣೆಗೆ ‘ಕೃಷಿ ಉಡಾನ್’ ಯೋಜನೆ ಸಣ್ಣಪುಟ್ಟ ರೈತರಿಗಿಂತ ಕಾರ್ಪೊರೇಟ್ ಕಂಪೆನಿಗಳಿಗೆ ಹೆಚ್ಚು ಲಾಭದಾಯಕವಾಗುವಂತಿದೆ. 16 ಅಂಶಗಳ ಕಾರ್ಯಕ್ರಮಗಳಲ್ಲಿ 9 ಅಂಶಗಳು ‘ಕಾರ್ಪೊರೇಟ್ ಫಾರ್ಮಿಂಗ್’ ಕಡೆಗೆ ಒತ್ತು ನೀಡುತ್ತಿವೆ. ಒಟ್ಟಾರೆ ಕೃಷಿಯನ್ನು ಖಾಸಗೀಕರಣಗೊಳಿಸುವ ಸರ್ಕಾರದ ಉದ್ದೇಶ ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಕಿಡಿಕಾರಿದರು.

16 ಅಂಶಗಳ ಬಹುತೇಕ ಕಾರ್ಯಕ್ರಮಗಳು ಸಾಮಾನ್ಯ ರೈತರಿಗೆ ಸಂಬಂಧಿಸಿದ್ದಲ್ಲ. 162 MT ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್‌ಗಳ ಮ್ಯಾಪಿಂಗ್ ಮತ್ತು ಜಿಯೊಟ್ಯಾಗಿಂಗ್ ಇದರಿಂದ ಬಡರೈತನಿಗೆ ಏನು ಲಾಭ? ರೆಫ್ರಿಜರೇಟೇಡ್ ರೈಲುಗಳು, ಕೃಷಿ ಉಡಾನ್ ವಿಮಾನಗಳು ಯಾವ ರೈತರ ಅನುಕೂಲಕ್ಕಾಗಿ ತಿಳಿಯುತ್ತಿಲ್ಲ. 2022ರ ವೇಳೆಗೆ ದೇಶದ ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಪ್ರಧಾನಿ ಹೇಳಿದ್ದರು. ಕಳೆದ ಹಣಕಾಸು ವರ್ಷದಲ್ಲಿ ಕೃಷಿ ಕ್ಷೇತ್ರ ಶೇಕಡಾ 2.5ರಷ್ಟು ಬೆಳವಣಿಗೆ ಕಂಡಿದೆ. ರೈತರ ಆದಾಯ ದುಪ್ಪಟ್ಟು ಆಗಬೇಕಾದರೆ ಕೃಷಿ ಕ್ಷೇತ್ರ ಕನಿಷ್ಠ 10ರಿಂದ 15% ದರದಲ್ಲಿ ಬೆಳವಣಿಗೆ ಆಗಬೇಕು. ಸದ್ಯಕ್ಕೆ ಇದೂ ಕೂಡ ಅಸಾಧ್ಯದ ಮಾತು ಎಂದು ನುಡಿದರು.

ಕೇಂದ್ರ ಪ್ರಸ್ತಾಪಿಸಿರುವ 3 ಮಾದರಿ ಕಾಯ್ದೆಗಳಾದ ಭೂಮಿ ಗುತ್ತಿಗೆ ಕಾಯ್ದೆ, ಎಪಿಎಂಸಿ ಕಾಯ್ದೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುವ ಹೊಸ ಮಾರ್ಕೆಟಿಂಗ್ ಕಾಯ್ದೆ ಮತ್ತು ಕಾಂಟ್ರಾಕ್ಟ್ ಫಾರ್ಮಿಂಗ್ (ಕಾರ್ಪೋರೇಟ್ ಫಾರ್ಮಿಂಗ್) ಕಾಯ್ದೆಗಳನ್ನು ರಾಜ್ಯ ಸರ್ಕಾರಗಳು ಒಪ್ಪಿಕೊಳ್ಳಲೇಬೇಕು ಎಂದು ಕೇಂದ್ರ ಹೇಳುತ್ತಿದೆ.

ಇದು ತುಂಬಾ ಅಪಾಯಕಾರಿ. ಇಡೀ ದೇಶದ ರೈತರು ಸಾಲದ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ನರಳಾಡುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಬೇಕೆಂಬುದು ನಮ್ಮದು ಹಳೆಯ ಬೇಡಿಕೆ. ಕಳೆದ ಆರು ವರ್ಷಗಳಿಂದ ಇದನ್ನು ಕೇಳುತ್ತಾ ಬಂದಿದ್ದೇವೆ. ಈ ಬಜೆಟ್ ನಲ್ಲಿಯೂ ಆ ಬಗ್ಗೆ ಉತ್ತರ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಬಾರಿಯ ಬಜೆಟ್‌ನಲ್ಲಿ ಸಾರ್ವಜನಿಕ ವಲಯಗಳಿಗೆ ಒಟ್ಟು ಬಜೆಟ್ ಗಾತ್ರದ 0.90% ರಷ್ಟು ಅನುದಾನ ವಿನಿಯೋಗಿಸಲಾಗಿತ್ತು, ಈ ಬಾರಿ ಅದು 0.96% ಗೆ ಏರಿಕೆ ಕಂಡಿದೆ. ಗ್ರಾಮೀಣಾಭಿವೃದ್ಧಿಗೆ ಕಳೆದ ಬಾರಿ 1.21% ಅನುದಾನ ಮೀಸಲಿತ್ತು, ಈ ಬಾರಿ 1.23% ಗೆ ಹೆಚ್ಚಿಸಲಾಗಿದೆ.

ಈ ಬಜೆಟ್‌ನಲ್ಲಿ ಕೃಷಿಗೆ ಅತ್ಯಧಿಕ‌ ಮಹತ್ವ ನೀಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದರೂ ಕೂಡ ಕೃಷಿಗೆ ಒಟ್ಟು ಬಜೆಟ್ ಅನುದಾನದಲ್ಲಿ ಮೀಸಲಾದ ಪಾಲು ಕೇವಲ 1.50% ಮಾತ್ರ. ಕಳೆದ ಬಾರಿ ಇದು 1.46% ಇತ್ತು. ಈ ಬಾರಿಯೂ ಕೃಷಿ ಕಡೆಗಣಿಸಲ್ಪಟ್ಟಿರುವುದು ದುರದೃಷ್ಟಕರ.

ಗ್ರಾಮೀಣ ಭಾಗದ ನಿರುದ್ಯೋಗ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನರೇಗಾ ಯೋಜನೆಗೆ ರೂ.10 ಸಾವಿರ ಕೋಟಿ ಹಣ ಕಡಿತಗೊಳಿಸಲಾಗಿದೆ. ಕಳೆದ ವರ್ಷ ರೂ.71,000 ಕೋಟಿ ನೀಡಿದ್ದರೆ, ಈ ಬಾರಿ ರೂ.61,000 ಕೋಟಿ ನಿಗದಿಗೊಳಿಸಲಾಗಿದೆ. ಇದರಿಂದ ಗ್ರಾಮೀಣ ಭಾರತ ಇನ್ನಷ್ಟು ಸೊರಗಿಹೋಗಲಿದೆ ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರು ನಗರದ ಉಪನಗರ ರೈಲು ಯೋಜನೆ ಬಗ್ಗೆ ಕಳೆದ ಬಜೆಟ್‌ನಲ್ಲಿಯೇ ಪ್ರಸ್ತಾಪವಿದ್ದರೂ ಈವರೆಗೂ ಒಂದು ಸ್ಟೇಷನ್ ಆಗಲಿ, ಹಳಿ ನಿರ್ಮಾಣ ಕಾರ್ಯವಾಗಲಿ ಆಗಿಲ್ಲ. ಮತ್ತೆ ಈ ಬಾರಿಯೂ ಅದೇ ರಾಗ, ಅದೇ ಹಾಡು. ಈ ಬಜೆಟ್‌ನಲ್ಲಿ ಕೂಡ ಅನುದಾನವನ್ನು ಮೀಸಲಿಟ್ಟಿಲ್ಲ ಜೊತೆಗೆ ಅನುದಾನದ ಬಗ್ಗೆ ಸ್ಪಷ್ಟತೆ ಕೂಡ ಇಲ್ಲ.

ದೇಶದ ಅಭಿವೃದ್ಧಿಯ ದರ 42 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ತೆರಿಗೆ ಸಂಗ್ರಹ ಎರಡು ಲಕ್ಷ ಕೋಟಿ ರೂಪಾಯಿಯಷ್ಟು ಕಡಿಮೆಯಾಗಿದೆ. ಕಾರ್ಪೋರೇಟ್ ತೆರಿಗೆ ಶೇಕಡಾ 15ರಷ್ಟು ಕಡಿಮೆಯಾಗಿದೆ. ಸಂಪನ್ಮೂಲ ಸಂಗ್ರಹದ ಯಾವ ಹೊಸ ಮಾರ್ಗಗಳ ಬಗ್ಗೆಯೂ ಬಜೆಟ್ ನಲ್ಲಿಯೂ ಪ್ರಸ್ತಾಪ ಇಲ್ಲ ಎಂದರು.

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಸಕ್ತ ಬಜೆಟ್‌ನಲ್ಲಿ ಎಲ್‌ಐಸಿ ಶೇರುಗಳನ್ನು ಸಹ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಇದೊಂದು ರೀತಿ ಕುತ್ತಿಗೆಯಲ್ಲಿರುವ ತಾಳಿ ಮಾರಾಟಕ್ಕಿಟ್ಟ ಪರಿಸ್ಥಿತಿ. ದೇಶದ ಸದ್ಯದ ಆರ್ಥಿಕ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದುಕ್ಕೆ ಸರ್ಕಾರದ ಈ ನಿರ್ಧಾರ ಸಾಕ್ಷಿ.

ವಿತ್ತೀಯ ಶಿಸ್ತು ಕಳೆದ ಬಾರಿ ಬಜೆಟ್‌ನಲ್ಲಿ 3.3 ಎಂದು ನಿಗದಿಪಡಿಸಲಾಗಿತ್ತು. ವರ್ಷಾಂತ್ಯದ ವೇಳೆಗೆ ಇದು 3.6 ತಲುಪಿತ್ತು. ಬರುವ ವರ್ಷಕ್ಕೆ ಸರ್ಕಾರವೇ 3.5 ಎಂದು ಗುರಿ ಇಟ್ಟುಕೊಂಡಿದೆ.‌ ಅಂದರೆ ಈಗಿರುವ ಸಾಲದ ಜೊತೆಗೆ ಇನ್ನಷ್ಟು ಸಾಲ ಮಾಡಿ ದೇಶವನ್ನು ದಿವಾಳಿ ಮಾಡಲು ಸರ್ಕಾರ ನಿರ್ಧರಿಸಿದಂತಿದೆ ಎಂದು ಕೆಂಡಾಮಂಡಲರಾದರು.

ಒಟ್ಟಿನಲ್ಲಿ ಇದು ದೇಶದ ಮುನ್ನಡೆಗೆ ಬೇಕಾದ ಯಾವ ಮುನ್ನೋಟವೂ ಇಲ್ಲದ, ಭವಿಷ್ಯದ ಮೇಲಿನ ಭರವಸೆಯನ್ನು ಕಳೆದುಕೊಂಡಿರುವ ಸಾಮಾನ್ಯ ಜನರು, ರೈತರು, ಯುವಜನರು, ಉದ್ಯಮಿಗಳು ಹೀಗೆ ಯಾವ ಜನ ಸಮುದಾಯದಲ್ಲಿಯೂ ವಿಶ್ವಾಸ-ಭರವಸೆಯನ್ನು ಹುಟ್ಟಿಸದ ನಿರಾಶದಾಯಕ ಬಜೆಟ್ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತಿಗೆ ಮಾತ್ರ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?

Published

on

ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ ಭೂಮಿಯನ್ನು ಖರೀದಿ ಮಾಡಿದ್ದ ಅವರು ಅದನ್ನು ತಮ್ಮ ಸಹೋದರಿಯರ ಹೆಸರಿನಲ್ಲಿ ನೋಂದಾಯಿಸಿದ್ದರು. ಇದಕ್ಕೆ ಪತ್ನಿ ಪಲ್ಲವಿಯವರ ಆಕ್ಷೇಪ ಇತ್ತು ಎನ್ನಲಾಗುತ್ತಿದೆ.

ಆದರೆ ಆಸ್ತಿ ವಿವಾದವೇ ಎಲ್ಲದಕ್ಕೂ ಕಾರಣವಾಯ್ತಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಓಂ ಪ್ರಕಾಶ್ ಅವರು 2017 ರಲ್ಲಿ ನಿವೃತ್ತಿಗೊಂಡಿದ್ದರು. ನಿವೃತ್ತಿಗೂ ಮೊದಲು ಹಾಗೂ ನಂತರದಲ್ಲಿ ಅವರು ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಸ್ತಿ ಖರೀದಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ ಸಾಗಾಟ ಮಾಡುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ.
ಅದರಲ್ಲಿ 10 ಲಕ್ಷ ಮೌಲ್ಯದ ಅನುಮಾನ ಪಡಿತರ ಅಕ್ಕಿ ಲಾರಿ, ಮದ್ಯ ರಾತ್ರಿಯಿಂದ ಬೆಳಿಗ್ಗೆ 9ಗಂಟೆವರೆಗೆ ಇದ್ದ ಲಾರಿ ನಂತರ ಇಲ್ಲದೆ ಇರೋದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಳ್ಳಾರಿ ನಗರದಲ್ಲಿ ಕೆಲ ದಿನಗಳ ಹಿಂದೆ ( ರಾತ್ರಿ 2.30 ಗಂಟೆ) ಸಮಯದಲ್ಲಿ 10 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ವಾಹನವನ್ನು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಪೊಲೀಸ ಅಧಿಕಾರಿಗಳು ತಪಾಸಣೆ ಮಾಡಿ ಠಾಣೆಗೆ ತಂದು ನಿಲ್ಲಿಸಿಕೊಂಡಿದ್ದರು.

ರಾಯಚೂರುನಿಂದ ಛತ್ತೀಸ್ಗಢದ ವರೆಗೆ ಪಡಿತರ ಅಕ್ಕಿ ಸಾಗಾಟ

ರಾಯಚೂರದಿಂದ ಛತ್ತೀಸ್ಗಢಕ್ಕೆ ಸಾಗಣೆಯ ಮಾಡುತ್ತಿದ್ದ ವಾಹನವಾಗಿತ್ತು ವಾಹನಕ್ಕೆ ಆರ್.ಕೆ ಎಂಟರ್ಪ್ರೈಸಸ್ ರಾಯಚೂರು,ಬಳ್ಳಾರಿ ಎಂದು ಬಿಲ್ ಹಾಕಿ ರಾಯಚೂರುದಿಂದ ಛತ್ತೀಸ್ ಗಡಿಗೆ ಅಕ್ಕಿ ಸರಬರಾಜು ಮಾಡುತ್ತಿದ್ದ ಮತ್ತೊಂದು ಬಿಲ್ ಹಾಕಿ ಕಳಿಸಲಾಗಿತ್ತು. ಈ ವಾಹನಕ್ಕೆ ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಕಳಸಾಗಣಿಕೆ ಪಡಿತರ ಅಕ್ಕಿಯನ್ನು ತುಂಬಿದ್ದಾರೆ. ಇದಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಮಾತ್ರ ಇದೆ ಎನ್ನುವ ಆರೋಪ ಇದೆ.

ಮಧ್ಯರಾತ್ರಿದಿಂದ ಬೆಳಿಗ್ಗೆ 9 ಗಂಟೆಗೆ ಠಾಣೆಯಲ್ಲಿ ಲಾರಿ ವಾಹನವನ್ನು ಇಟ್ಟುಕೊಂಡು ಎಲ್ಲವೂ ಸರಿ ಇದ್ದಾವೆ ಎಂದು ಗಾಡಿಯನ್ನು ಬಿಟ್ಟು ಕಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಸಾರ್ವಜನಿಕ‌ ಪ್ರಶ್ನೆ.

ಈ ಠಾಣೆಗೆ ನೂತನವಾಗಿ ಬಂದಿರುವ ಪೊಲೀಸ್ ಅಧಿಕಾರಿ ತೋರಣಗಲ್ಲು, ಸಂಡೂರು, ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿ ಬಳ್ಳಾರಿ ಎಪಿಎಂಸಿ ಠಾಣಿಗೆ ವರ್ಗಾವಣೆ ಆಗಿರುವ ರಫೀಕ್ ಅವರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಸಾರ್ವಜನಿಕರು.

ಈಗಾಗಲೇ ಪಡಿತರ ಕಳಸಾಗಾಣಿಕೆ ದಂದೆ ನಡೆಯುತ್ತಿದ್ದು ಕಣ್ಣಿಗೆ ಕಂಡು ಕಾಣದಂತೆ ನಡೆಯುತ್ತದೆ ಇಂತಹ ಸಂದರ್ಭದಲ್ಲಿ ರಾಯಚೂರಿನಿಂದ ಛತ್ತೀಸ್ಗಢ ಗೆ ಬಿಲ್, ಬಳ್ಳಾರಿಯಲ್ಲಿ ಅಕ್ಕಿ, ಪೊಲೀಸ್ ಠಾಣೆಯಲ್ಲಿ ಗಾಡಿ,ಯಾವುದೇ ಪ್ರಕರಣ ಇಲ್ಲದೆ ಬಿಟ್ಟು ಕಳಿಸಿರುವುದು ಆಶ್ಚರ್ಯವಾಗಿದೆ. ಇನ್ನು ಈ ವಿಚಾರವಾಗಿ ಅಧಿಕಾರಿಗಳಿಗೆ ಕೇಳಿದರೆ ಇಲ್ಲ ನಮಗೆ ಗೊತ್ತಿಲ್ಲ ಎನ್ನುವ ಬೇಜವಾಬ್ದಾರಿ ಮಾತನಾಡುತ್ತಾರೆ.

ಲಾರಿ ಬಿಲ್ ಚೆಕ್ ಮಾಡಿದ್ದು ಯಾರು ?

ಗಣಿನಾಡು ಬಳ್ಳಾರಿ ನಗರದಲ್ಲಿ ಪೊಲೀಸರು ಲಾರಿ ಬಿಲ್ ಗಳು ಮದ್ಯರಾತ್ರಿ ಚೆಕ್ ಮಾಡಿದ್ದು ಯಾರು, ಸಾಧಾರಣ ಟೈಮ್ ನಲ್ಲಿ ಬಂದು ನೋಡಲು ಬರದೇ ಇರುವ ಅಧಿಕಾರಿಗಳು ಮದ್ಯ ರಾತ್ರಿ ಬಂದು ನೋಡಿರಬಹುದಾ. ಈಗಲೇ ರಫೀಕ್ ಅವರ ಮೇಲೆ ಕೆಲ ಸಿಬ್ಬಂದಿ ಮೇಲೆ ಆರೋಪ ಇವೆ. ಅಕ್ರಮ ಚಟವಟೆಕೆಗಳಿಗೆ ನಿರ್ದೇಶಕ ಕೀರ್ತಿ ಇದೇ ಲೋಕಾಯುಕ್ತ ಸಮಯದಲ್ಲಿ ಬಹುತೇಕ ಬಹಳ ಸಮಸ್ಯೆಗಳನ್ನು ಮಾಡಿದ್ದನ್ನು ನೊಂದವರು ತಿಳಿಸಿದ್ದಾರೆ.

“ಸಚಿವ ಸಂತೋಷ ಲಾಡ್ ಹೆಸರು ಹೇಳುವ ರಫೀಕ್”
ಠಾಣೆಯ ಅಧಿಕಾರಿ ರಫೀಕ್ ಪದೇ ಪದೇ ಸಚಿವ ಸಂತೋಷ್ ಲಾಡ್ ಹೆಸರು ಹೇಳಿಕೊಂಡು ಬಂದಿದ್ದಾನೆ ಎನ್ನುವ ಆರೋಪ ಸಹ ಇದೆ. ಈ ಅಕ್ರಮ ಅಕ್ಕಿ ಪಡಿತರದಲ್ಲಿ ಪೊಲೀಸ್ ಠಾಣೆಗೆ ಮಾಮೂಲು ಸಹ ಇದೆ ಎನ್ನುವ ಮಾಹಿತಿ ಸಹ ಇದೆ.

ಎಸ್ಪಿ ಅವರ ಕ್ರಮ ಯಾವಾಗ ?

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಯಾವ ? ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಜಿಲ್ಲೆಗೆ ಬಳ್ಳಾರಿ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರ ಸ್ವೀಕರಿದ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆವೇ ಎನ್ನುವ ಅನುಮಾನ ಸಹ ಇದೆ ಎನ್ನುವ ಮಾತು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.

ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಬಡವರಿಗೆ ನೀಡುವ ಪಡಿತರ ಅಕ್ಕಿ ಕಳ್ಳರ ಪಾಲಾಗುತ್ತಿದೆ, ಇನ್ನು ಪಡಿತರ ಅಕ್ಕಿಯ ವಿತರಕರು 1 ಕಿಲೋಗ್ರಾಂ ಗೆ 10 ರಿಂದ 12 ರೂಪಾಯಿ ಕೊಂಡುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಹ ಇದೆ. ಇವರ ವಿರುದ್ಧ ಹಾಗೂ ಪಡಿತರ ಅಕ್ಕಿ ಮಾರಾಟ ಮಾಡುವ ಸಾರ್ವಜನಿಕರ ಮೇಲೆ ಕ್ರಮ ತೆಗೆದುಕೊಳ್ಳಬೇಕಿದೆ‌.

ಒಟ್ಟಾರೆಯಾಗಿ ಬಳ್ಳಾರಿ ಜಿಲ್ಲೆಯ ವಿವಿಧ ಠಾಣೆ ವ್ಯಾಪ್ತಿ ಅಧಿಕಾರಿಗಳಿಗೆ ಎಸ್ಪಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುವರು ಕಾದು ನೋಡೊಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending