ದಿನದ ಸುದ್ದಿ

ನಕಲಿ ಜಾತಿ ಪ್ರಮಾಣ ಪತ್ರ : ಶಾಸಕ ರೇಣುಕಾಚಾರ್ಯ ಸಹೋದರ ಸೇರಿದಂತೆ 11 ಮಂದಿ ವಿರುದ್ಧ ಎಫ್ ಐ ಆರ್ ದಾಖಲು

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ಅವರ ಸಹೋದರ ಸೇರಿದಂತೆ 11 ಮಂದಿಯ ವಿರುದ್ಧ ಕೆಟಿಜೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ ಸೇರಿದಂತೆ 11 ಮಂದಿಯ ವಿರುದ್ಧ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪದಡಿ, ದಲಿತ ಮುಖಂಡ ಹೆಗ್ಗೆರೆ ರಂಗಪ್ಪ ದಾವಣಗೆರೆಯ ಕೆಟಿಜೆ ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು.

ದೂರಿನನ್ವಯ ಐಪಿಸಿ ಸೆಕ್ಷನ್ 143, 147, 504, 506 ಮತ್ತು 149 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ ಅವರು, ಬೇಡ ಜಂಗಮ ಎಂದು ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version