ದಿನದ ಸುದ್ದಿ
ನಟಿ ಪವಿತ್ರ ಲೋಕೇಶ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಮೇಸೆಜ್ ಕುರಿತು ದೂರು ದಾಖಲು
ಸುದ್ದಿದಿನ,ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬರು ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಅನುಚಿತವಾಗಿ ಮೆಸೇಜ್ ಮಾಡುತ್ತಿದ್ದಾರೆ ಎಂದು ನಟಿ ಪವಿತ್ರ ಲೋಕೇಶ್ ದೂರು ನೀಡಿದ್ದಾರೆ.
ಅಪರಿಚಿತ ವ್ಯಕ್ತಿ ನನ್ನ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದಾರೆ. ಫೇಸ್ ಬುಕ್‌ನ ಇತರ ಪೇಜ್‌ಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ನನ್ನ ಘನತೆಗೆ ಧಕ್ಕೆ ಬರುವ ರೀತಿಯಲ್ಲಿ ಮೆಸೇಜ್‌ಗಳನ್ನು ಮಾಡುತ್ತಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಕಿರುಕುಳವಾಗಿದೆ. ಇಂತಹವರನ್ನು ಕಂಡು ಹಿಡಿದು ಕ್ರಮ ಕೈಗೊಳ್ಳುವಂತೆ ಮೈಸೂರಿಮ ಎಸ್‌ಇಎನ್ ಠಾಣೆಯಲ್ಲಿ ನಟಿ ಪ್ರಕರಣ ದಾಖಲು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243