ದಿನದ ಸುದ್ದಿ
ಡ್ಯಾಂಗಳು ಬಿರುಕು ಬಿಟ್ಟಿಲ್ಲ: ಸುಳ್ಳು ಸುದ್ದಿ ನಂಬಬೇಡಿ ಎಂದ ಡಿಕೆಶಿ
ಸುದ್ದಿದಿನ ಡೆಸ್ಕ್: ಡ್ಯಾಂಗಳು ಬಿರುಕು ಬಿಟ್ಟಿವೆ ಎಂಬ ಸುಳ್ಳು ಸುದ್ದಿಗಳು ಸೋಶಿಯಲ್ ಮಿಡಿಯಾಗಳಲ್ಲಿ ಹರಿದಾಡುತ್ತಿದ್ದು, ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಕಬಿನಿ ಸೇರಿ ಯಾವುದೇ ಡ್ಯಾಂಗಳು ಬಿರುಕು ಬಿಟ್ಟಿಲ್ಲ ಇದರಿಂದ ಜನರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಸಚಿವ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.
ವದಂತಿಯಿಂದ ಕೊಡಗು ಹಾಗೂ ಇತರೆ ಭಾಗದ ಜನ ಈ ಬಗ್ಗೆ ಆತಂಕ ಪಡೋದು ಬೇಡ, ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಿಡಿಗೇಡಿಗಳು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ, ಇಂತವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಇಲಾಖೆಗೆ ಹೇಳುತ್ತೇನೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401