ದಿನದ ಸುದ್ದಿ
ರಾಜ್ಯಪಾಲರ ಹುದ್ದೆ ಕೊಡಿಸುವುದಾಗಿ ಸುಳ್ಳು ಭರವಸೆ : 100 ಕೋಟಿ ವಂಚಿಸಲು ಯತ್ನ
ಸುದ್ದಿದಿನ,ನವದೆಹಲಿ: ರಾಜ್ಯಸಭಾ ಸ್ಥಾನ ಮತ್ತು ರಾಜ್ಯಪಾಲರ ಹುದ್ದೆ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ 100 ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಸಿಬಿಐ ಬಹು ರಾಜ್ಯಗಳ ವಂಚಕರ ಜಾಲವನ್ನು ಭೇದಿಸಿದ್ದು, ನಾಲ್ವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆ ಆರೋಪಿಯೊಬ್ಬ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಬಂಧಿತ ಆರೋಪಿಗಳು ಮಹಾರಾಷ್ಟ್ರದ ಲಾತೂರ್‌ನ ಕಮಲಾಕರ್ ಪ್ರೇಮಕುಮಾರ್ ಬಂಡಗರ್, ಕರ್ನಾಟಕದ ಬೆಳಗಾವಿಯ ರವೀಂದ್ರ ವಿಠಲ್ ನಾಯಕ್ ಮತ್ತು ನವದೆಹಲಿಯ ಎನ್‌ಸಿಆರ್ ಮೂಲದ ಮಹೇಂದ್ರ ಪಾಲ್ ಅರೋರಾ, ಅಭಿಷೇಕ್ ಬೂರಾ ಮತ್ತು ಮೊಹಮ್ಮದ್ ಐಜಾಜ್ ಖಾನ್ ಅವರನ್ನು ಹೆಸರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243