ದಿನದ ಸುದ್ದಿ
ಅಭಿಮಾನಿ ಆತ್ಮಹತ್ಯೆ : ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಮಾಜಿ ಸಿಎಂ ಸಿದ್ದರಾಮಯ್ಯ
ಸುದ್ದಿದಿನ, ಮೈಸೂರು : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ ಕೃಷ್ಣ(24) ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಭಾಗವಹಿಸಿದರು.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಕೃಷ್ಣ ಎಂಬ ಯುವಕ, ನನ್ನ ಸಾವಿನ ಅಂತ್ಯಕ್ರಿಯೆಯಲ್ಲಿ ನಟ ಯಶ್, ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಬೇಕು. ಏಕೆಂದರೆ ನಾನು ಇವರಿಬ್ಬರ ಅಪ್ಪಟ ಅಭಿಮಾನಿ ಎಂದು ಪತ್ರ ಬರೆದಿದ್ದ.
ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243