ದಿನದ ಸುದ್ದಿ
ರೈತ ದಿನಾಚರಣೆ ದಿನವೇ ರೈತ ಆತ್ಮಹತ್ಯೆಗೆ ಶರಣು
ಸುದ್ದಿದಿನ,ಮಂಡ್ಯ : ಮದ್ದೂರು ತಾಲ್ಲೂಕಿನ ಬಿದರಹಳ್ಳಿ ಗ್ರಾಮದ ಮಾದಯ್ಯ(58) ಎಂಬ ರೈತ ಕೈಯಲ್ಲಿ ಡೆತ್ ನೋಟ್ ಹಿಡಿದು ಕೊಂಡು ತನ್ನ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾನಾಗಿದ್ದಾನೆ
ಸುಮಾರು ಎರಡು ಎಕರೆ ಜಮೀನಿದ್ದು ಕಬ್ಬು ಭತ್ತ ಬೆಳೆಯುತ್ತಿದ್ದರು ಬೆಳೆಗೆ ಸರಿಯಾದ ಬೆಲೆ ಸಿಗದ ಪರಿಣಾಮ ಸುಮಾರು 4 ಲಕ್ಷ ರೂಪಾಯಿ ಸಾಲ ಇತ್ತು ಎಂದು ತಿಳಿದು ಬಂದಿದೆ.ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.ಕೆ.ಎಂ. ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಗ್ರಾಮ ಪಂಚಾಯತಿ ಸದಸ್ಯರಿಗೆ ಹೂವಿನಹೊಳೆ ಪ್ರತಿಷ್ಠಾನ ಗೌರವ ಸದಸ್ಯತ್ವ ಪ್ರದಾನ : ಹಂಚಗುಳಿ ಗ್ರಾಮ ರಾಜ್ಯಕ್ಕೆ ಮಾದರಿ

ಸುದ್ದಿದಿನ, ರಾಮನಗರ : ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಅರಕೆರೆ ಗ್ರಾಮ ಪಂಚಾಯಿತಿಗೆ ಹಂಚಗುಳಿ ಗ್ರಾಮದಿಂದ ಆಯ್ಕೆಯಾದ ಸದಸ್ಯರಾದ ಮಲ್ಲೇಶ್ ಹಾಗೂ ಶಾಂತಮ್ಮ ಅವರಿಗೆ ”ಹೂವಿನಹೊಳೆ ಪ್ರತಿಷ್ಠಾನದ ಐದು ವರ್ಷಗಳ ಗೌರವ ಸದಸ್ಯತ್ವ” ಪ್ರದಾನ ಮಾಡಲಾಯಿತು ಇದೇ ಸಂದರ್ಭದಲ್ಲಿ ನಮ್ನೂರಿಗೆ ನಮ್ಮ ಉಸಿರು ಬಳಗದಿಂದ ಹಂಚಗುಳಿ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಮುನುಚ್ಚೆಗೌಡರು ಉದ್ಘಾಟನೆ ಮಾಡಿ ಮಾತನಾಡುತ್ತಾ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಶಾಲೆಗಳನ್ನು ಕರ್ನಾಟಕ ಸರ್ಕಾರಿ ಪಬ್ಲಿಕ್ ಶಾಲೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹೂವಿನಹೊಳೆ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ನಂದಿ ಜೆ ಹೂವಿನಹೊಳೆ ಗ್ರಾ.ಪ. ಸದಸ್ಯರಿಗೆ ಗೌರವ ಸದಸ್ಯತ್ವ ಪ್ರದಾನ ಮಾಡಿ ಮುಂದಿನ ಐದು ವರ್ಷಗಳಲ್ಲಿ ಹಂಚಗುಳಿ ಗ್ರಾಮದಲ್ಲಿ ನಾವು ಕೆಲಸ ಮಾಡಲು ಹಾಗೂ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಶ್ರಮಿಸುತ್ತೆವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ ಡಿ ಟಿ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ದಿಲೀಪ್ ಕುಮಾರ್ ಮಾತನಾಡಿ ಶಿಕ್ಷಣ ಎಲ್ಲರ ಹಕ್ಕು ಪ್ರತಿ ಗ್ರಾಮದ ಯುವಕರಿಗೂ ಉನ್ನತ ಕೆಲಸ ಸಿಗುವಂತೆ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಹೂವಿನಹೊಳೆ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯದರ್ಶಿ ನಾಯ್ಕಲ್ ದೊಡ್ಡಿ ಚಂದ್ರಶೇಖರ್, ಪ್ರಧಾನ ಸಂಚಾಲಕರಾದ ಹಂಚಗುಳಿ ಗಿರೀಶ್ ,ಸುನೀಲ್ ಕುಮಾರ್,ರಾಜಣ್ಣ ಹಾಗೂ ಗ್ರಾಮದ ಮುಖಂಡರಾದ,ಚೆಲುವರಾಜು, ಚಿಕೈದೆಗೌಡ, ಸುಂದ್ರೆಶ್, ಮಣಿಕಂಠ, ಮುತ್ತುರಾಜು,ಭಾಸ್ಕರ್, ಶಿವಕುಮಾರ್ ಅರ್ಚಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ ಗಾಜಿನ ಮನೆ ಪುಷ್ಪ ಪ್ರದರ್ಶನದ ಫೋಟೋ ಆಲ್ಬಂ : ಮಿಸ್ ಮಾಡ್ದೆ ನೋಡಿ..!

ಸುದ್ದಿದಿನ,ದಾವಣಗೆರೆ : ತೋಟಗಾರಿಕೆ ಬಗ್ಗೆ ಸಾರ್ವಜನಿಕರಲ್ಲಿ ಅಭಿರುಚಿ ಹೆಚ್ಚಿಸಲು ಹಾಗೂ ಮಕ್ಕಳಲ್ಲಿ ಗಿಡಗಳ ಬಗ್ಗೆ ಕುತೂಹಲ ಹೆಚ್ಚಿಸಲು ತೋಟಗಾರಿಕೆ ಇಲಾಖೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ಜ.23 ರಿಂದ 26 ರವರೆಗೆ ನಗರದ ಗಾಜಿನಮನೆಯ ಆವರಣದಲ್ಲಿ ನಾಲ್ಕು ದಿನಗಳ ಕಾಲ ಪುಷ್ಪ ಪ್ರದರ್ಶನವನ್ನು ಆಯೋಜಿಸಿತ್ತು.
ಮನೆಗಳಲ್ಲಿ ವಿವಿಧ ಅಲಂಕಾರಿಕ ಗಿಡಗಳು ಹಾಗೂ ಹೂ ಗಿಡಗಳನ್ನು ಬೆಳೆಸಲು ಪ್ರೋತ್ಸಾಹಿಸುವ ಸಲುವಾಗಿ ಮತ್ತು ಮಕ್ಕಳಲ್ಲಿ ತೋಟಗಾರಿಕೆ ಬಗ್ಗೆ ಜ್ಞಾನ ಹೆಚ್ಚಿಸುವ ಉದ್ದೇಶದಿಂದ ಹಾಗೂ ಆಹ್ಲಾದಕರ ವಾತಾವರಣ ನಿರ್ಮಿಸುವುದಕ್ಕಾಗಿ ನಾಲ್ಕು ದಿನಗಳ ಪುಷ್ಪ ಪ್ರದರ್ಶನವನ್ನು ಗಾಜಿನಮನೆಯಲ್ಲಿ ಆಯೋಜಿಸಲಾಗಿದ್ದು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿತು.
ಈ ಬಾರಿ ಪುಷ್ಪ ಪ್ರದರ್ಶನದ ಮುಖ್ಯ ಆಕರ್ಷಣೆ 26 ಅಡಿ ಎತ್ತರ 17 ಅಡಿ ಅಗಲವುಳ್ಳ ಗೇಟ್ ವೇ ಆಫ್ ಇಂಡಿಯಾದ ಪ್ರತಿರೂಪ. ಇದನ್ನು 2,10,000 ಬಿಳಿ, ಕೆಂಪು ಮತ್ತು ಹಳದಿ ಬಣ್ಣದ ಸೇವಂತಿಗೆ ಹೂ ಹಾಗೂ 36,000 ಕೆಂಪು ಗುಲಾಬಿ ಹಾಗೂ ಎಲೆಗಳಿಂದ ನಿರ್ಮಿಸಲಾಗುತ್ತಿದೆ. 45,000 ಹೂಗಳಿಂದ 10 ಅಡಿ ಎತ್ತರ 7 ಅಡಿ ಅಗಲದ 4 ಫೋಟೋ ಫ್ರೇಮ್ಗಳನ್ನು ಹೂವಿನ ಕಲಾಕೃತಿಯಿಂದ ಅಲಂಕರಿಸಿ ಪ್ರದರ್ಶಿಸಲಾಯಿತು.
ಪೋಟೋ ಆಲ್ಬಂ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕುಡಿಯುವ ನೀರಿನ ಅವಶ್ಯಕತೆ ಹಾಗೂ ನೈಜ ಪರಿಸರವಾಗಿ ಉಳಿಸಲು ಕುಂದವಾಡ ಕೆರೆ ಅಭಿವೃದ್ಧಿ : ಸಂಸದ ಜಿ.ಎಂ. ಸಿದ್ದೇಶ್ವರ

ಸುದ್ದಿದಿನ,ದಾವಣಗೆರೆ : ಕುಂದವಾಡ ಕೆರೆಯು ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಸ್ಮಾರ್ಟ್ ಸಿಟಿ ಯೋಜನೆಯಡಿ ಜನರಿಗೆ ಅಗತ್ಯ ಕುಡಿಯುವ ನೀರು ಪೂರೈಸಲು ಹಾಗೂ ಕೆರೆಯ ಸುತ್ತಮುತ್ತಲ ಪ್ರದೇಶದಲ್ಲಿ ಪರಿಸರವನ್ನು ಜೀವವೈವಿಧ್ಯಗಳ ವಿಕಸನಕ್ಕೆ ಅನುಕೂಲವಾಗುವಂತೆ ನೈಜ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಾಸ್ತವಾಂಶಗಳನ್ನು ಸಾರ್ವಜನಿಕರಿಗೆ ತಲುಪುವ ದಿಸೆಯಲ್ಲಿ ಜನಜಾಗೃತಿ ಮೂಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸಿಟಿ ಲೆವೆಲ್ ಅಡೈಸರಿ ಫೋರಂ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಅವರು ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿ, ಕೆರೆಯು ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಬೇಸಿಗೆಯಲ್ಲಿ ಕೆರೆ ಏರಿ ಮೇಲಿನ ಕಳೆ, ಗಿಡಗಂಟೆ ಇತ್ಯಾದಿಗಳ ಕೊಳೆಯುವಿಕೆಯಿಂದ ನೀರು ಹಸಿರುಗಟ್ಟಿ ಕುಡಿಯಲು ಯೋಗವಾಗದ ರೀತಿ ಪರಿವರ್ತನೆಯಾಗುತ್ತದೆ, ನೀರು ಕಲುಷಿತಗೊಳ್ಳುವುದರಿಂದ ಕೆರೆಯಲ್ಲಿನ ಮೀನುಗಳು, ಜೀವವೈವಿಧ್ಯಗಳು ಸಾಯುತ್ತವೆ. ಇದನ್ನು ಈ ಹಿಂದೆಯೂ ಗಮನಿಸಲಾಗಿದೆ.
ಕೆರೆಯ ಏರಿಯಲ್ಲಿನ ನೀರು ಬಸಿಯುವಿಕೆ, ಹಾಳಾಗಿರುವ ಏರಿ ಮೇಲಿನ ಕಲ್ಲುಹೊದಿಕೆ ಮುಂತಾದ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಕೆರೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದ್ದು, ಒಂದೂವರೆ ವರ್ಷದ ಹಿಂದೆಯೇ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ. ಸಾರ್ವಜನಿಕರ ಅನುಕೂಲಕ್ಕೆ ಏರಿಯ ಮೇಲೆ ವಿದ್ಯುತ್ ದೀಪ ಅಳವಡಿಕೆ, ಹೂವಿನ ಗಿಡಗಳನ್ನು ಹಾಕುವುದು, ಕಲ್ಲು ಬೆಂಚು ಅಳವಡಿಕೆ, ವಾಕಿಂಗ್ ಪಾತ್, ಸೈಕಲ್ ಟ್ರಾಕ್ ನಿರ್ಮಾಣ ಮಾಡಲಾಗುತ್ತಿದೆ. ಕೆರೆಯ ಒಳಗೆ ಸಾರ್ವಜನಿಕರು ಹಾಗೂ ಪ್ರಾಣಿಗಳು ಹೋಗದಂತೆ ಚೈನ್ ಲಿಂಕ್ ತಂತಿ ಬೇಲಿ ಅಳವಡಿಸಲು ಉದ್ದೇಶಿಸಲಾಗಿದೆ.
ಈ ಕೆರೆಗೆ ಯಾವುದೇ ಮಳೆ ನೀರಿನ ಒಳಹರಿವು ಇಲ್ಲದಿರುವುದರಿಂದ, ತುಂಗಭದ್ರಾ ನದಿ ಮತ್ತು ಭದ್ರಾ ಕಾಉವೆ ಮೂಲಕ ಹರಿಸಿ ತುಂಬಿಸಲಾಗುತ್ತಿದೆ. ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯ ವಿಷಯವಾಗಿರುವುದರಿಂದ, ಕೆರೆಯಲ್ಲಿ ಸ್ವಚ್ಛ ಪರಿಸರ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಸತ್ಯಾಂಶಗಳ ಬಗ್ಗೆ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಜಿ.ಎಂ. ಸಿದ್ದೇಶ್ವರ ಅವರು, ವಾಸ್ತವ ಸಂಗತಿಗಳನ್ನು ಅರಿಯದೆ, ಕುಂದವಾಡ ಕೆರೆ ಅಭಿವೃದ್ಧಿ ಯೋಜನೆಯು ಪರಿಸರ ವಿರೋಧಿಯೆಂದು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕುಂದವಾಡ ಕೆರೆ ಪ್ರಸ್ತುತ ಕೇವಲ ಕೆರೆ ಮಾತ್ರವಲ್ಲದೆ, ನಗರಕ್ಕೆ ಕುಡಿಯುವ ನೀರಿಗೆ ಆಧಾರವಾಗಿರುವ ಪ್ರಮುಖ ನೀರು ಸಂಗ್ರಹಗಾರವಾಗಿದೆ. ಅಧಿಕಾರಿಗಳು ಕುಂದವಾಡ ಕೆರೆ ಅಭಿವೃದ್ಧಿಯ ಉದ್ದೇಶ ಕುರಿತ ವಾಸ್ತವ ಅಂಶಗಳನ್ನು ಸರಿಯಾದ ರೀತಿಯಲ್ಲಿ ಪ್ರಚುರಪಡಿಸಿದಲ್ಲಿ, ಯೋಜನೆ ಅಭಿವೃದ್ಧಿ ಕುರಿತಂತೆ ಇರುವ ತಪ್ಪು ಅಭಿಪ್ರಾಯಗಳು ದೂರವಾಗಲು ಸಾಧ್ಯ, ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳು ಜನಜಾಗೃತಿ ಮೂಡಿಸಿ ಎಂದು ಸೂಚನೆ ನೀಡಿದರು.
ಚರಂಡಿ, ರಾಜಕಾಲುವೆ ನಿರ್ಮಾಣಕ್ಕೆ ಅಡ್ಡಿ
ನಗರದಲ್ಲಿ ಮಳೆ ಹೆಚ್ಚು ಬಂದಾಗ, ನೀರು ಸರಾಗವಾಗಿ ಹರಿಯದೆ, ತಗ್ಗು ಪ್ರದೇಶಗಳಿಗೆ ನುಗ್ಗಿ, ತೊಂದರೆ ಉಂಟಾಗುವುದನ್ನು ತಪ್ಪಿಸಲು ರಾಜ ಕಾಲುವೆ ಹಾಗೂ ಚರಂಡಿಗಳ ನಿರ್ಮಾಣವಾಗುತ್ತಿದ್ದು ಶೇ. 50 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ನಗರದಲ್ಲಿನ ರಾಜ ಕಾಲುವೆ (ಮುಖ್ಯ ಚರಂಡಿ) ಮಾರ್ಗಕ್ಕೆ ಹಲವೆಡೆ ಅನುಮೋದಿತ ಬಡಾವಣೆಯಲ್ಲಿ ಸೂಕ್ತ ಸ್ಥಳಾವಕಾಶ ಇಲ್ಲದಿರುವುದರಿಂದ ತೊಂದರೆ ಉಂಟಾಗಿದೆ.
ಅಲ್ಲದೆ ನಗರದ ಹಳೆಯ ಭಾಗದಲ್ಲಿ ಚರಂಡಿ ಹಾಗೂ ರಸ್ತೆಯಲ್ಲಿ ನೀರಿನ ತೊಟ್ಟಿ, ಶೌಚಾಲಯ, ಮೆಟ್ಟಿಲುಗಳು, ಸ್ಟೇರ್ಕೇಸ್, ಸ್ಟೋರ್ರೂಂ ಇತ್ಯಾದಿಗಳನ್ನು ಅನಧಿಕೃತವಾಗಿ ಕಟ್ಟಿಕೊಂಡಿರುವುದನ್ನು ಗಮನಿಸಲಾಗಿದ್ದು, ಕಾಮಗಾರಿಗಳಿಗೆ ತೀವ್ರ ತೊಂದರೆಯಾಗಿದೆ. ಮಹಾನಗರಪಾಲಿಕೆಯಿಂದ ತೆರವು ಮಾಡಿಕೊಟ್ಟಲ್ಲಿ, ಚರಂಡಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ರವೀಂದ್ರ ಮಲ್ಲಾಪುರ ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರತಿಕ್ರಿಯಿಸಿ, ಮಹಾನಗರಪಾಲಿಕೆ ಆಯುಕ್ತರು ಕೂಡಲೆ ಅಂತಹ ಒತ್ತುವರಿಯನ್ನು ತೆರವುಗೊಳಿಸಿ, ಚರಂಡಿ ನಿರ್ಮಾಣ ಕಾರ್ಯಕ್ಕೆ ಅನುವು ಮಾಡಿಕೊಡಬೇಕು. ಇದರಲ್ಲಿ ಯಾವುದೇ ಪ್ರಭಾವಗಳಿಗೆ ಮಣಿಯದೆ, ತುರ್ತಾಗಿ ತೆರವುಗೊಳಿಸುವಂತೆ ನಿರ್ದೇಶನ ನೀಡಿದರು.
ಇ-ಟಾಯ್ಲೆಟ್ ಸಮರ್ಪಕ ನಿರ್ವಹಣೆ
ನಗರ ವ್ಯಾಪ್ತಿಯಲ್ಲಿ ಈಗಾಗಲೆ 1 ಮತ್ತು 2 ನೇ ಹಂತದಲ್ಲಿ ಒಟ್ಟು 29 ಇ-ಟಾಯ್ಲೆಟ್ಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗಿದ್ದು, ಇನ್ನೂ 17 ನಿರ್ಮಾಣವಾಗಬೇಕಿದೆ. ಆದರೆ ಹಲವೆಡೆ ಇ-ಟಾಯ್ಲೆಟ್ಗಳ ಅಸಮರ್ಪಕ ನಿರ್ವಹಣೆಯಿಂದ ಹಾಳಾಗಿದ್ದು, ದೂರುಗಳು ಕೇಳಿಬರುತ್ತಿವೆ ಎಂದು ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯ ರವೀಂದ್ರ ಮಲ್ಲಾಪುರ ಉತ್ತರಿಸಿ, ಇ-ಟಾಯ್ಲೆಟ್ಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಸದುದ್ದೇಶದಿಂದ ನಿರ್ಮಿಸಿದ್ದು, ಕೆಲವು ಕಿಡಿಗೇಡಿಗಳು ಕಾಯಿನ್ ಬಾಕ್ಸ್ನಲ್ಲಿ ಕಬ್ಬಿಣದ ತುಂಡು, ಕಟ್ಟಿಗೆ ತುಂಡುಗಳನ್ನು ಹಾಕಿ ಹಾಳು ಮಾಡುತ್ತಿದ್ದಾರೆ. ನಗರದಲ್ಲಿ ಎಲ್ಲ 46 ಇ-ಟಾಯ್ಲೆಟ್ಗಳನ್ನು ನಿರ್ಮಾಣ ಮಾಡಿ, ನಿರ್ವಹಣೆಗಾಗಿ ಮಹಾನಗರಪಾಲಿಕೆಗೆ ಹಸ್ತಾಂತರ ಮಾಡಲಾಗುವುದು.
ರಸ್ತೆ ಸುರಕ್ಷತೆಗಾಗಿ ನಗರದಲ್ಲಿ ಹಾಕಿರುವ ಫ್ಲೆಕ್ಸಿಬಲ್ ಮೀಡಿಯನ್, ಮಾರ್ಕರ್, ಸೋಲಾರ್ ಬ್ಲಿಂಕರ್ಸ್ಗಳನ್ನು ದುಷ್ಕರ್ಮಿಗಳು ಕತ್ತರಿಸಿ, ಕಳುವು ಮಾಡಿಕೊಂಡು, ತಮ್ಮ ವಾಹನಗಳಿಗೆ ಅಳವಡಿಸಿರುವುದು ಕಂಡುಬಂದಿದ್ದು, ಅಂತಹ ವಾಹನಗಳ ಫೋಟೋ ಸಹಿತ ನಗರದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸ್ ಅಧಿಕಾರಿಗಳು ಇನ್ನೂ ಕ್ರಮ ಕೈಗೊಂಡಿಲ್ಲ ಎಂದರು.
ಸಭೆಯ ಮಧ್ಯದಲ್ಲಿಯೇ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ ಸಂಸದರು, ಇದುವರೆಗೂ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕೂಡಲೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು ಕಾನೂನು ರೀತ್ಯ ಕ್ರಮ ಜರುಗಿಸುವಂತೆ ತಾಕೀತು ಮಾಡಿದರು.
ಸಭೆಯಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಹಾನಗರಪಾಲಿಕೆ ಮಹಾಪೌರ ಅಜಯ್ಕುಮಾರ್, ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ಸಿಟಿ ಲೆವೆಲ್ ಅಡೈಸರಿ ಫೋರಂ ಸದಸ್ಯರು, ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು, ಇಂಜಿನಿಯರ್ಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ
-
ದಿನದ ಸುದ್ದಿ1 day ago
ದಾವಣಗೆರೆ | ಅತ್ಯಾಚಾರ ಅಪರಾಧಿಗೆ 15 ವರ್ಷ ಸಜೆ, 26 ಸಾವಿರ ದಂಡ
-
ಬಹಿರಂಗ1 day ago
ಸಂವಿಧಾನ ದಿನಾಚರಣೆ ಹೇಗೆ ಗಣರಾಜ್ಯೋತ್ಸವವಾಯಿತು..?
-
ದಿನದ ಸುದ್ದಿ2 days ago
ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ
-
ದಿನದ ಸುದ್ದಿ1 day ago
ಹೊಲಿಗೆ ಯಂತ್ರ ಸೌಲಭ್ಯ ನೀಡುವ ಅರ್ಜಿ ಅವಧಿ ವಿಸ್ತರಣೆ
-
ಅಂತರಂಗ1 day ago
ಭಾರತದ ಸಂವಿಧಾನ : ಪ್ರಜೆಗಳ ಓದು
-
ಬಹಿರಂಗ3 days ago
ನುಡಿದ ಸತ್ಯವನ್ನು ಬಂಧಿಸಲಾಗದು
-
ದಿನದ ಸುದ್ದಿ1 day ago
ರೈತ ಹೋರಾಟವೆಂಬ ಸಾಗರ ; ಇದು ಬರೀ ಪಂಜಾಬಿನದ್ದಲ್ಲ, ಇಡೀ ದೇಶದ ಹೋರಾಟ