Connect with us

ದಿನದ ಸುದ್ದಿ

ಶಹಜಹಾನ್ ಪುರ ಗಡಿಯಲ್ಲಿ  ಲಾಠಿ, ವಾಟರ್‌ ಕ್ಯಾನನ್‌ಗೆ ಜಗ್ಗದೆ ಕೂತ ರೈತ ಮಕ್ಕಳು

Published

on

ರಾಜಸ್ಥಾನ,ಹರಿಯಾಣ,(ಶಹಜಹಾನ್‌ಪುರ): ಟ್ರಿಕಿ, ಸಿಂಗು, ಗಾಜಿಯಾಪುರ‌ದಂತೆಯೇ ರಾಜಸ್ಥಾನ-ಹರಿಯಾಣ ರಾಜ್ಯಗಳನ್ನು ಬೆಸೆಯುವ ಹೆದ್ದಾರಿಯಲ್ಲಿರುವ ಶಹಜಹಾನ್‌ಪುರ್‌ ಗಡಿಯಲ್ಲಿ ರೈತ ಹೋರಾಟ ನಡೆಯುತ್ತಿದೆ.

ಟಿಕ್ರಿ ಮತ್ತು ಸಿಂಘು ಗಡಿಯಲ್ಲಿ ಪಂಜಾಬ್‌, ಹರಿಯಾಣದಿಂದ ದೊಡ್ಡ ಸಂಖ್ಯೆಯಲ್ಲಿ ಬಂದ ರೈತರು ಹೋರಾಟಕ್ಕೆ ಕುಳಿತಿದ್ದರೆ, ಶಹಜಹಾನ್‌ಪುರ್‌ ಗಡಿಯಲ್ಲಿ ಡಿಸೆಂಬರ್‌ 12ರಿಂದ ರಾಜಸ್ಥಾನದಿಂದ ಬಂದ ರೈತರು ಹೋರಾಟಕ್ಕೆ ಕುಳಿತಿದ್ದಾರೆ. ಈ ಹೋರಾಟದ ಮುಂದಾಳತ್ವವನ್ನು ಆಲ್‌ ಇಂಡಿಯಾ ಕಿಸಾನ್‌ ಸಭಾವಹಿಸಿಕೊಂಡಿದೆ.

ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಕೇರಳದಿಂದಲೂ ಸಾವಿರಾರು ಸಂಖ್ಯೆಯ ರೈತರು ಈ ಗಡಿ ಭಾಗಕ್ಕೆ ಬಂದು ಹೋರಾಟದಲ್ಲಿ ಜೊತೆಯಾಗಿದ್ದಾರೆ.

ದೆಹಲಿ ಚಲೋ ಜಾಥಾದ ಭಾಗವಾಗಿ ರಾಜಸ್ಥಾನದಿಂದ ಹೊರಟ ರೈತರನ್ನು ರಾಜಸ್ಥಾನ ಹಾಗೂ ಹರಿಯಾಣ ಪೊಲೀಸರು ಈ ಗಡಿಯಲ್ಲಿ ತಡೆದು ನಿಲ್ಲಿಸಿದ್ದು ಕಳೆದ ಆರು ವಾರಗಳಿಂದ ಹೋರಾಟ ಮುಂದುವರೆದಿದೆ.

ಕಿಸಾನ್‌ ಮಹಾ ಪಂಚಾಯತ್‌ ಸೇರಿದಂತೆ ವಿವಿಧ ರೈತ ಸಂಘಟನೆಗಳು 25 ಟ್ರ್ಯಾಕ್ಟರ್‌ಗಳೊಂದಿಗೆ ಗಡಿಯನ್ನು ತಲುಪಿದ್ದು, ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಕ್ಕೆ ಪಂಜಾಬ್‌ ರೈತರಂತೆ ಪಟ್ಟು ಹಿಡಿದಿದ್ದಾರೆ.

ಜಾಟ್‌ ಮಹಾಸಭಾ 100ಕ್ಕೂ ಹೆಚ್ಚು ವಾಹನಗಳೊಂದಿಗೆ ಈ ಹೋರಾಟದಲ್ಲಿ ಜೊತೆಯಾಗಿ ಇತ್ತೀಚೆಗೆ ಜೈಪುರ -ದೆಹಲಿ ಹೈವೇ ತಡೆಯುವ ಯತ್ನ ನಡೆಸಿ, ಸರ್ಕಾರಗಳಿಗೆ ಹೋರಾಟದ ಬಿಸಿ ಮುಟ್ಟಿಸಿತು.

ಕಿಸಾನ್‌ ಸಂಯುಕ್ತ ಮೋರ್ಚಾದ ಸಂಯೋಜಕರಾಗಿರುವ ರಾಜಕೀಯ ಚಿಂತಕ ಯೋಗೇಂದ್ರ ಯಾದವ್‌, ಪ್ರಾದೇಶಿಕ ರೈತ ಸಂಘಟನೆಗಳನ್ನು ಇಲ್ಲಿಗೆ ಕರೆತರುವ, ಹೋರಾಟದ ಬಲವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸಿದ್ದಾರೆ.

ಇದಕ್ಕಾಗಿ ಸಕ್ತಪುರಾ, ಗುಗಲ್‌ಕೋಟ, ಮಿರ್ಜಾಪುರ್‌, ಪಲವಾ, ಬಿರೋದಾ, ಫೌಲಾದ್‌ಪುರ್‌ಗಳ ರೈತರಿಂದ ಬೆಂಬಲವನ್ನು ಕೇಳಲಾಗಿದೆ.

ಕಿಸಾನ್ ಸಂಘರ್ಷ ಸಮಿತಿ, ಭೀಮಸೇನೆ, ಎಎಎಸ್‌ಪಿ, ಸಮಾಜವಾದಿ ಪಕ್ಷ, ಅಂಬೇಡ್ಕರ್‌ವಾದಿ ಪಕ್ಷ, ರಾಷ್ಟ್ರೀಯ ಲೋಕ ತಾಂತ್ರಿಕ ಪಕ್ಷ, ಸ್ವರಾಜ್‌ ಯುವ ಸಂಘಟನೆ ಈ ಹೋರಾಟಕ್ಕೆ ಬೆಂಬಲ ಸೂಚಿಸಿ ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಮಾಜಿ ಶಾಸಕ, ಹಾಲಿ ಆಲ್‌ ಇಂಡಿಯಾ ಕಿಸಾನ್‌ ಸಭಾದ ಅಮ್ರಾ ರಾಮ್‌, ಲೋಕ ತಾಂತ್ರಿಕ ಪಕ್ಷದ ಸಂಸದ ಹನುಮಾನ್‌ ಬೆನಿವಾಲಾ ಹೋರಾಟ ನಾಯಕತ್ವ ವಹಿಸಿಕೊಂಡಿದ್ದಾರೆ. ಭೀಮ್‌ ಸೇನೆಯ ಚಂದ್ರಶೇಖರ್‌ ಆಜಾದ್‌, ಕಿಸಾನ್‌ ಮಹಾಪಂಚಾಯತ್‌ ರಾಷ್ಟ್ರೀಯ ಅಧ್ಯಕ್ಷ ರಾಮ್‌ಪಾಲ್‌ ಜಾಟ್‌, ಸಮಾಜಸೇವಕ ರಾಧೇಶ್ಯಾಮ್‌ ಶುಕ್ಲಾವಾಸ್‌, ಕಿಸಾನ್‌ ಯೂನಿಯನ್‌ನ ಬಲಬೀರ್‌ ಛಿಲ್ಲರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲಲಿತ್‌ ಯಾದವ್‌ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಈ ಹೋರಾಟದಲ್ಲಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ರಾಜಸ್ಥಾನ, ಹರಿಯಾಣ ಸೇರಿದಂತೆ ವಿವಿಧ ಭಾಗಗಳ ನಾಯಕರು ಇಲ್ಲಿ ನೆರೆದ ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಹೊಸ ವರ್ಷದ ಮುನ್ನಾ ದಿನ ರೈತರು ಮತ್ತು ಪೊಲೀಸರೊಂದಿಗೆ ನಡೆದ ಸಂಘರ್ಷದಲ್ಲಿ ಯುವ ಹೋರಾಟಗಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಕೆಡವಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಹೋರಾಟಗಾರರನ್ನು ಹಿಮ್ಮೆಟ್ಟಿಸುವುದಕ್ಕಾಗಿ ಟಿಯರ್‌ ಗ್ಯಾಸ್‌, ವಾಟರ್‌ ಕ್ಯಾನನ್‌ಗಳನ್ನು ಬಳಸಿದವು. ಗಡಿಯ ಎರಡು ಬದಿಯಲ್ಲಿ ಡ್ರೋನ್‌ಗಳ ಮೂಲಕ ಹೋರಾಟಗಾರರ ಮೇಲೆ ನಿಗಾ ಇಡಲಾಗಿದೆ ಕೂಡ.

ಜ. 11ರಂದು ಕೇರಳದಿಂದ 1000 ರೈತರು ಶಹಜಹಾನ್‌ಪುರ್‌ ಗಡಿಯತ್ತ ಹೊರಡಲಿದ್ದಾರೆ. ಜ.21ರಂದು ಮತ್ತೊಂದು ಗುಂಪು ದೆಹಲಿಯತ್ತ ಹೊರಡಲಿದೆ ಎಂದು ಕೇರಳ ಕೃಷಿಕ್‌ ಸಂಘಂ ತಿಳಿಸಿದೆ.

ಹೀಗೇ ವಿವಿಧ ರಾಜ್ಯಗಳಿಂದ ರೈತ ಹೋರಾಟಗಾರರು ಈ ಗಡಿಯನ್ನು ತಲುಪುತ್ತಿದ್ದು, ಪ್ರತಿಭಟನೆಗೆ ದಿನದಿನಕ್ಕೂ ಹೊಸ ಹುರುಪು, ಹೊಸ ಶಕ್ತಿಯನ್ನು ಪಡೆದುಕೊಳ್ಳುತ್ತಿದೆ. ಶುಕ್ರವಾರ 8ನೇ ಸುತ್ತಿನ ಮಾತುಕತೆಯೂ ವಿಫಲವಾದ ನಂತರ ರೈತರು ಟಿಕ್ರಿ-ಸಿಂಘು ರೈತರಂತೆ ಈ ಗಡಿಯ ರೈತ ಹೋರಾಟಗಾರರು ಜ. 26ರ ಟ್ರ್ಯಾಕ್ಟರ್‌ ರ್ಯಾಲಿಗೆ ಸಿದ್ಧರಾಗುತ್ತಿದ್ದಾರೆ.

ಕೃಪೆ | ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಧಾರವಾಡ : ಕಾನೂನು ಇಲಾಖೆ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಹಾಗೂ ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಹೊಸದಾಗಿ ನೇಮಕ ಮಾಡಿಕೊಳ್ಳಲು ಬಾರ್ ಅಸೊಸಿಯೇಷನ್‍ದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಸ್ಥಳೀಯ ಬಾರ್ ಅಸೋಸಿಯೇಷನ್ ಸದಸ್ಯರಾಗಿರಬೇಕು ಹಾಗೂ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 10 ವರ್ಷ ಮತ್ತು ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 7 ವರ್ಷ ವಕೀಲ ವೃತ್ತಿಯ ಅನುಭವ ಹೊಂದಿರಬೇಕು. ಮತ್ತು ಇವರ ನೇಮಕಾತಿಯು ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಸೇವಾ ಷರತ್ತುಗಳ ನಿಯಮಗಳು, 1977 ರಲ್ಲಿ ಹೇಳಲಾದ ಷರತ್ತುಗಳಿಗೆ ಒಳಪಟ್ಟಿರುತ್ತದೆ.

ಇದನ್ನೂ ಓದಿ | ಹಲವು ನಾಯಕರ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ..!

ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ದಾಖಲಾತಿಗಳೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮಾರ್ಚ್ 15, 2021 ರೊಳಗಾಗಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಚಿವ ಬಿ.ಶ್ರೀರಾಮುಲು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಉದ್ಘಾಟನೆ ನೆರವೇರಿತು

Published

on

ಸುದ್ದಿದಿನ,ಧಾರವಾಡ : ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಕವಿವಿ ಆವರಣದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯರ್ಥಿ ನಿಲಯ ಹಾಗೂ ಸಪ್ತಾಪೂರದಲ್ಲಿ ನಿರ್ಮಿಸಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಇಂದು ಮಧ್ಯಾಹ್ನ ಕವಿವಿ ಆವರಣದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹಾಗೂ ಬೃಹತ್‌, ಮಧ್ಯಮ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಕವಿವಿ ಕುಲಪತಿ ಡಾ.ಕೆ.ಬಿ.ಗುಡಸಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ಸೇರಿದಂತೆ ಇತರ ಅಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನೂ ಓದಿ | ಟಿಎಂಸಿ ಮಣ್ಣಿನ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಲಿದೆ: ಪಿಎಂ ಮೋದಿ ಅಭಿಮತ

ಕವಿವಿ ಆವರಣದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯವನ್ನು 412.83 ಲಕ್ಷ ರೂ.ಗಳ ವೆಚ್ಚದಲ್ಲಿ ಹಾಗೂ ಸಪ್ತಾಪೂರದಲ್ಲಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯರ್ಥಿ ನಿಲಯವನ್ನು 387 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ.

ಇದೆ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆಯಡಿ ಆಯ್ಕೆಯಾಗಿದ್ದ ವಿವಿಧ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ | ದೂರು ವಾಪಾಸ್ ಪಡೆದ ದಿನೇಶ್ ಕಲ್ಲಳ್ಳಿ

Published

on

ಸುದ್ದಿದಿನ,ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇದೀಗ ದೂರು ವಾಪಸ್ ಪಡೆದುಕೊಂಡಿದ್ದಾರೆ.

ದಿನೇಶ್ ಕಲ್ಲಹಳ್ಳಿ ತಮ್ಮ ವಕೀಲರನ್ನು ದೂರು ವಾಪಸ್ ಪಡೆಯಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕಳುಹಿಸಿದ್ದು, ನಿಯಮಾನುಸಾರ ದೂರು ವಾಪಸ್ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಅವರೇ ಠಾಣೆಗೆ ಆಗಮಿಸಿ ದೂರು ಪಡೆಯಲು ನಿರ್ಧರಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು 5 ಕೋಟಿ ಡೀಲ್ ಬಗ್ಗೆ ಮಾತಾಡಿದ್ದರಿಂದ ನನ್ನ ಮನಸ್ಸಿಗೆ ನೋವಾಗಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ಬಗ್ಗೆ ಚರ್ಚೆಯಾಗ ಬೇಕಿತ್ತು ಆದರೆ, ಜನ ನನ್ನ ನೈತಿಕತೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಇದು ನನಗೆ ತಿರುಗುಬಾಣವಾಗಿದೆ ಎಂದು ದೂರುದಾರ ದಿನೇಶ್ ಹೇಳಿದ್ದು, ಈ ಹಿನ್ನೆಲೆಯಲ್ಲಿ ತಾನು ದೂರು ವಾಪಸ್ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending