ದಿನದ ಸುದ್ದಿ

ದಾವಣಗೆರೆ | ಕೃಷಿ ಪಂಡಿತ, ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ, ಆತ್ಮ ಯೋಜನೆಯಡಿ ತಾಲ್ಲೂಕು, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಸೆ.07 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು/ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version