Connect with us

ದಿನದ ಸುದ್ದಿ

ರೈತರ ಬರಪರಿಹಾರ ಹಣವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡುವಂತಿಲ್ಲ

Published

on

ಸುದ್ದಿದಿನ ಡೆಸ್ಕ್ : ರೈತರ ಬ್ಯಾಂಕ್ ಖಾತೆಗೆ ಬರುವ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ಸೂಚನೆ ನೀಡಿದ್ದಾರೆ.

ಬರ ಪರಿಹಾರದ ಮೊತ್ತವನ್ನು ಬ್ಯಾಂಕ್ ಅಧಿಕಾರಿಗಳು ಸಾಲ ರೂಪದಲ್ಲಿ ಕಡಿತಗೊಳಿಸುತ್ತಿರುವುದಾಗಿ ಕೆಲ ರೈತರು ದೂರು ನೀಡಿದ್ದಾರೆ.

ಈ ನಿಟ್ಟಿನಲ್ಲಿ ಪ್ರಕೃತಿ ವಿಕೋಪದಡಿ ಸಂದಾಯವಾಗುವ ಹಣವನ್ನು ರೈತರ ಸಾಲದ ಖಾತೆಗೆ ಜಮಾ ಮಾಡುವಂತಿಲ್ಲವೆಂದು ಸರ್ಕಾರದ ಸ್ಪಷ್ಟ ನಿರ್ದೇಶನವಿದೆ. ಈ ರೀತಿ ಮಾಡಿದಲ್ಲಿ ಸರ್ಕಾರದ ನಿದರ್ಶನ ಉಲ್ಲಂಘಿಸಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.

ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

Published

on

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending