ದಿನದ ಸುದ್ದಿ
ಫೆ.28ಕ್ಕೆ ಎಫ್ ಡಿ ಎ ಪರೀಕ್ಷೆ | ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ
ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗವು 2019ನೇ ಸಲಿನ ಸಹಾಯಕರು, ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫೆಬ್ರವರಿ 28ರಂದು ಜಿಲ್ಲೆ 27ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದೆ.
ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ, ಯಾವುದೇ ಅವ್ಯವಹಾರಗಳಿಗೆ, ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ, ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಫೆಬ್ರವರಿ 28ರಂದು ಬೆಳಿಗ್ಗೆ 7.30ರಿಂದ ಸಂಜೆ 5.30ರವರೆಗೆ ಭಾರತೀಯ ದಂಡಸಂಹಿತೆ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನ ಸೇರುವುದನ್ನು ನಿಷೇಧಿಸಲಾಗಿದೆ.
ಕೇಂದ್ರಗಳ ಸುತ್ತಮುತ್ತಲ ಟೈಪಿಂಗ್, ಝೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ತೆರೆದಿರುವುದನ್ನು ಪ್ರತಿಬಂಧಿಸಲಾಗಿದೆ. ಅಲ್ಲದೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243